ಬೆಳಗಾವಿ-೦೪:ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ,
ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾಡಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶಕ್ಕೆ ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅವರನ್ನು ಸಚಿವ ಸ್ಥಾನದಿಂದ ಕೆಳಗೆ ಇಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಸಿದ್ದಪ್ಪ ಕಾಂಬಳೆ, ಮಹಾಂತೇಶ ತಳವಾರ, ಮಾರುತಿ ಕಾಂಬಳೆ, ಮಹದೇವ ತಳವಾರ, ದೀಪಕ ದಬಾಡೆ,ಸಾಗರ ಕೋಲಕಾರ, ಶೇಖರ ಐನಾವರ, ಪ್ರಕಾಶ ಕುರಂಗಿ, ಮನೋಹರ ಮುಚ್ಚಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.