12/01/2025
IMG-20250111-WA0008

ಬೆಳಗಾವಿ-೧೧:ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಾಳೆ 12-01-2025 ರವಿವಾರ ಮಧ್ಯಾಹ್ನ 3 ಗಂಟೆಗೆ “ವಿವೇಕ ನಡಿಗೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಬೆಳಗಾವಿ ನಗರದ ರಾಮಕೃಷ್ಣ ಮಿಷನ್ ಆಶ್ರಮದಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ರಾಣಿ ಚೆನ್ನಮ್ಮ ಸರ್ಕಲ್ ಗೆ ಮುಕ್ತಾಯವಾಗವುದು ನಂತರ ಕನ್ನಡ ಸಾಹಿತ್ಯ ಭವನದಲ್ಲಿ ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ರಾಮಕೃಷ್ಣ ಮಿಷನ್ ಆಶ್ರಮದ ಶ್ರೀಗಳು, ಸಂಸದರು, ಶಾಸಕರು,ಮಾಜಿ ಸಂಸದರು, ಮಾಜಿ ಶಾಸಕರು ಹಾಗೂ ಮುಖಂಡರು, ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಭಾ.ಜ.ಪಾ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!