11/12/2025
IMG-20250121-WA0077

ಬೆಳಗಾವಿ-೨೧: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

IMG 20250121 WA0040 - IMG 20250121 WA0040

ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

IMG 20250121 WA0030 - IMG 20250121 WA0030

BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದರು.

IMG 20250121 WA0053 - IMG 20250121 WA0053

ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದರು.

ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ.
BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದರು.‌

ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ.

ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು ಎಂದರು.

ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ಹೇಳಿದರು.

error: Content is protected !!