11/12/2025
IMG-20250123-WA0007

ಬೆಳಗಾವಿ-೨೩:ಜಿಲ್ಲೆಯಲ್ಲಿರುವ ಸರಕಾರಿ ಶಾಲೆ ಹಾಗೂ ಆಸ್ಪತ್ರೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಗುರುವಾರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿಸಿ ರವರಿಗೆ ಮನವಿ ಅರ್ಪಿಸಿದರು.
ಜಿಲ್ಲೆಯಲ್ಲಿರುವ ಬಹುತೇಕ ಸರಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿವೆ. ಸಮರ್ಪಕವಾಗಿ ನಿರ್ವಹಣೆ ಮಾಡಬೇಕಿದ್ದ ಜಿಲ್ಲಾಡಳಿತ ವಿಫಲವಾಗಿದೆ. ಇನ್ನೂ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಿ ವರ್ಷ ಕಳೆದರೂ ಅದು ಲೋಕಾರ್ಪಣೆಗೊಂಡಿಲ್ಲ ಎಂದು ಪ್ರತಿಭಟನಾಕಾರರು ಮನವಿ ಮೂಲಕ ಅರ್ಪಿಸಿದರು.
ಈ ಸಂದರ್ಭದಲ್ಲಿ ಅನಿಸ್ ಸೌದಾಗರ, ವಿಜಯ ಪಾಟೀಲ್, ಅಬ್ದುಲ್ ಖಾಸಿಂ, ಜಾಫರ್ ಮುಜಾವರ, ಶಂಕರ ಪಾಟೀಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

error: Content is protected !!