11/12/2025
IMG-20250126-WA0000

ಬೆಳಗಾವಿ-೨೬:ಸದೃಢ, ಸಶಕ್ತ ಭಾರತ ನಿರ್ಮಾಣ ಮಾಡಲು ನಾಡಿನ ಜನತೆ ಒಮ್ಮತದಿಂದ ಪ್ರಯತ್ನಿಸುತ್ತಾ ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವ, ವೈವಿಧ್ಯತೆ ಮತ್ತು ಬಹುತ್ವದಂತಹ ಸಾಂವಿಧಾನಿಕ ಮೌಲ್ಯಗಳನ್ನು ಗೌರವಿಸಬೇಕು ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಕರೆ ನೀಡಿದರು. ಅವರು ಇಂದು ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಗಳ ವತಿಯಿಂದ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಹಮ್ಮಿಕೊಂಡ ೭೬ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಹೊರದೇಶದಿಂದ ಬಂದ ಪಾರಸಿ ಸಮುದಾಯ ಈ ನಾಡಿನಲ್ಲಿ ಇದ್ದುಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಿದಂತೆ ಈ ಮಣ್ಣಿನ ಮೂಲ ನಿವಾಸಿಗಳು ಸಹ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಶ್ರೀಗಳು ತಿಳಿಸಿದರು.

ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ಹಿರೇಮಠ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಅಂಗಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಇದೇವೇಳೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಗಳ ವಿದ್ಯಾರ್ಥಿಗಳಿಂದ ಜರುಗಿದ ಪತಸಂಚಲನ ಆಕರ್ಷಕವಾಗಿತ್ತು. ಪ್ರಾರಂಭದಲ್ಲಿ ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯೆ ಶಿವಲೀಲಾ ಪೂಜಾರ ಸ್ವಾಗತಿಸಿದರು. ಪ್ರಾಧ್ಯಾಪಕ ಏ.ಕೆ. ಪಾಟೀಲ ನಿರೂಪಿಸಿದರು. ಕೊನೆಗೆ ಪ್ರಾಧ್ಯಾಪಕಿ ಮನೋರಮೆ ವಂದಿಸಿದರು.

error: Content is protected !!