12/12/2025
IMG-20250206-WA0000

ಬೆಳಗಾವಿ-೦೬:ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠದ ಉದ್ಘಾಟನೆ ಮಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ.

ಎಚ್.ಕೆ.ಪಾಟೀಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು

ಕರ್ನಾಟಕದಲ್ಲಿ ಒಂದು ರಾಜ್ಯ ಆಯೋಗದೊಂದಿಗೆ 33 ಜಿಲ್ಲಾ ಆಯೋಗಗಳನ್ನು ಸ್ಥಾಪಿಸಲಾಗಿದೆ,

ಗ್ರಾಹಕರಿಗೆ ಪರಿಹಾರ ದೊರಕಿಸುವ ಸಲುವಾಗಿ ಪ್ರತಿ ಮಾಹೆಯಲ್ಲಿ ಎರಡು ಬಾರಿ ಲೋಕ ಅದಾಲತ್ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಮಾಜಿ‌ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಜಿಲ್ಲಾಧಿಕಾರಿ ಮಹ್ಮದ್ ರೋಷನ್, ಆಯೋಗದ ರಿಜಿಸ್ಟಾರ್ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

error: Content is protected !!