14/12/2025
IMG-20250211-WA0001

ಬೆಳಗಾವಿ-೧೧:ಬೆಂಗಳೂರು-ಧಾರವಾಡ ನಡುವೆ ಸಧ್ಯ ಸಂಚರಿಸುತ್ತಿರುವ “ವಂದೆ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ಅದರಂತೆ ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಅವರು ತಿಳಿಸಿದ್ದಾರೆ.

ಈ ಕುರಿತು ದಿನಾಂಕ: 10-02-2025 ರಂದು ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಹಾಗೂ ಸಂಸದರು ಶ್ರೀ ಜಗದೀಶ ಶೆಟ್ಟರ, ಇವರ ಉಪಸ್ಥಿಯಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಕೊಳ್ಳಲಾಗಿದೆ.

ಪ್ರಸ್ತಾಪಿತ ರೈಲಿನ ಸೇವೆಯನ್ನು ಬೆಳಗಾವಿಯ ವರೆಗೆ ವಿಸ್ತರಿಸುವ ಕುರಿತು ಅನೇಕ ತಿಂಗಳುಗಳಿಂದ ಸಂಸದರಾದ ಶ್ರೀ ಜಗದೀಶ ಶೆಟ್ಟರ ಅವರು ಪ್ರಯತ್ನಿಸುತ್ತಿದ್ದು, ಇತ್ತೀಚಿಗೆ ಮಾನ್ಯ ಪ್ರಧಾನ ಮಂತ್ರಿಗಳು ಶ್ರೀ ನರೇಂದ್ರ ಮೋದಿ ಯವರನ್ನು ಸಹ ಭೇಟಿ ಮಾಡಿ ವಿನಂತಿಸಿದ್ದು ಹಾಗೂ ಇದೆ ನಿಟ್ಟಿನಲ್ಲಿ ಅನೇಕ ಬಾರಿ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವಿ, ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಇವರನ್ನು ಭೇಟಿ ಮಾಡಿ ಕೋರಿಕೆ ಸಲ್ಲಿಸಿದ್ದು ಮತ್ತು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಶ್ರೀ ಪ್ರಹ್ಲಾದ ಜೋಶಿ ಇವರೊಡನೆ ಸಹ ನೈರುತ್ಯ ವಲಯದ ರೇಲ್ವೆ ಮಹಾ ಪ್ರಬಂಧಕರು ಶ್ರೀ ಸಂಜೀವ ಶ್ರೀವಾತ್ಸವ ಅವರೊಡನೆ ಸಭೆಯನ್ನು ನಡೆಸಿದ್ದು, ಅದಕ್ಕನುಗುಣವಾಗಿ ಸೂಕ್ತ ಫಲ ಇಂದು ದೊರಕಿದಂತಾಗಿದೆ ಹಾಗೂ ಬೆಳಗಾವಿ ನಿವಾಸಿಗಳ ಅನೇಕ ದಿನಗಳ ಬೇಡಿಕೆ ಈಡೇರಿದೆ ಎಂದು ಸಂಸದರು ಶ್ರೀ ಜಗದೀಶ ಶೆಟ್ಟರ ಅವರು ತಿಳಿಸಿದ್ದಾರೆ.

ಈ ಬಗ್ಗೆ ಎಲ್ಲ ಅಗತ್ಯ ಸಹಕಾರ ನೀಡಿದ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಮತ್ತು ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಮತ್ತು ಕೇಂದ್ರ ರಾಜ್ಯ ರೇಲ್ವೆ ಸಚಿವರು ಶ್ರೀ ವಿ. ಸೋಮಣ್ಣ ಅವರಿಗೆ ಇದೆ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಸದಸ್ಯರು ಶ್ರೀ ಜಗದೀಶ ಶೆಟ್ಟರ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

error: Content is protected !!