23/12/2024
ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆ ಭರ್ತಿ: ಅರ್ಜಿ ಆಹ್ವಾನ
ಬೆಳಗಾವಿ-17: ಬೆಳಗಾವಿ ಜಿಲ್ಲೆಯ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆ ಖಾಲಿ ಇದ್ದು, ತುರ್ತಾಗಿ ಸರ್ಕಾರದ ಮಟ್ಟದಲ್ಲಿ ಆಯ್ಕೆಮಾಡಿ, ಅರ್ಹತೆ ಆಧಾರದ ಮೇಲೆ ಭರ್ತಿ ಮಾಡಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಾದೇಷ್ಟರ ನೇಮಕಾತಿಗಾಗಿ ಹೊಸದಾಗಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿರುವುದರಿಂದ ಜಿಲ್ಲಾ ಸಮಾದೇಷ್ಟರ ಹುದ್ದೆಯನ್ನು ಕರ್ನಾಟಕ ಗೃಹರಕ್ಷಕ ನಿಯಮಗಳು, 1963 ರ ನಿಯಮ 3-ಬಿ ಅನ್ವಯ ನಿಯಮಾನುಸಾರ ಭರ್ತಿ ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪಡೆದುಕೊಳ್ಳುಬಹುದಾಗಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 30, 2024ರ ಒಳಗಾಗಿ “ಜಿಲ್ಲಾಧಿಕಾರಿಗಳು, ಬೆಳಗಾವಿ” ಇವರಿಗೆ ಸಲ್ಲಿಸಬೇಕು ಎಂದು ಆರಕ್ಷಕ ಮಹಾ ನಿರ್ದೇಶಕರು,  ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆ ನಿರ್ದೇಶಕರಾದ ಅಕ್ಷಯ ಎಂ. ಹಾಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
error: Content is protected !!