
ಬೆಂಗಳೂರು-07:ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025ನೇ ಸಾಲಿನ ದಾಖಲೆ 16ನೇ ರಾಜ್ಯದ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾದರೆ ಯಾವ್ಯಾವ ಇಲಾಖೆಗೆ ಎಷ್ಟು ಅನುದಾನ ಮೀಸಲಿಟ್ಟಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.
2024ರಲ್ಲಿ ರಾಜ್ಯ ಬಜೆಟ್ ಗಾತ್ರ 3,71,383 ಕೋಟಿ ರೂಪಾಯಿ ಆಗಿತ್ತು. ಈ ಬಾರಿ ಅಂದರೆ 2025ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಆಗಿದೆ. ಹಾಗಾದರೆ ಇಂದು ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಯಾವ್ಯಾವ ಇಲಾಖೆಗೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಯಾವ ಇಲಾಖೆಗೆ ಎಷ್ಟು ಅನುದಾನ?
* ಶಿಕ್ಷಣ ಇಲಾಖೆ – 45,286 ಕೋಟಿ ರೂಪಾಯಿ
* ಮಹಿಳಾ/ಮಕ್ಕಳ ಕಲ್ಯಾಣ ಇಲಾಖೆ – 34,955 ಕೋಟಿ ರೂಪಾಯಿ
* ಇಂಧನ ಇಲಾಖೆ – 26,896 ಕೋಟಿ ರೂಪಾಯಿ
* ಗ್ರಾಮೀಣಾಭಿವೃದ್ಧಿ ಇಲಾಖೆ – 26,735 ಕೋಟಿ ರೂಪಾಯಿ
* ನೀರಾವರಿ ಇಲಾಖೆ- 22181 ಕೋಟಿ ರೂಪಾಯಿ
* ನಗರಾಭಿವೃದ್ಧಿ, ವಸತಿ ಇಲಾಖೆ – 21,405 ಕೋಟಿ ರೂಪಾಯಿ
* ಒಳ ಆಡಳಿತ ಮತ್ತು ಸಾರಿಗೆ ಇಲಾಖೆ – 20,625 ಕೋಟಿ ರೂಪಾಯಿ
* ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ – 17,473 ಕೋಟಿ ರೂಪಾಯಿ
* ಕಂದಾಯ ಇಲಾಖೆ – 17,201 ಕೋಟೆ ರೂಪಾಯಿ
* ಸಮಾಜ ಕಲ್ಯಾಣ ಇಲಾಖೆ – 16,955 ಕೋಟಿ ರೂಪಾಯಿ
* ಲೋಕೋಪಯೋಗಿ ಇಲಾಖೆ – 11,841 ಕೋಟಿ ರೂಪಾಯಿ
* ಆಹಾರ ಇಲಾಖೆ – 8,275 ಕೋಟಿ ರೂಪಾಯಿ
* ಕೃಷಿ, ತೋಟಗಾರಿಕೆ ಇಲಾಖೆ- 7,145 ಕೋಟಿ ರೂಪಾಯಿ
* ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ – 3,977 ಕೋಟಿ ರೂಪಾಯಿ
* ಇತರೆ – 1,49,857 ಕೋಟಿ ರೂಪಾಯಿ
* ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು.
* ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ.
* ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗುವುದು.
* ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು.
* ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು
* ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್ ವರೆಗೆ ಎತ್ತರಿಸುವುದು, ರೈತರಿಗೆ ಪರಿಹಾರ ವಿತರಣೆಗೆ ಕ್ರಮ.
* ಕಳಸಾ – ಬಂಡೂರಾ ನಾಲಾ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭ.
* ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ.
* ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಲಮಿತಿಯೊಳಗೆ ಪೂರ್ಣ.
* ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ.
* ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆ ಅನುಷ್ಠಾನ.
* ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಜಾರಿ.
* ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಕಾಮಗಾರಿಗಳ ಪೂರ್ಣಗೊಳಿಸಲು ಕ್ರಮ.
* ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಿಗೆ 2 ಸಾವಿರ ಕೋಟಿ ರೂ.
* ಸಣ್ಣ ನೀರಾವರಿ: ಎತ್ತಿನಹೊಳೆ ಯೋಜನೆಯಿಂದ ಮಧುಗಿರಿ ತಾಲೂಕಿನ 45 ಕೆರೆಗಳು, ಕೊರಟಗೆರೆ ತಾಲೂಕಿನ 62 ಕೆರೆಗಳಿಗೆ ನೀರು ತುಂಬಿಸಲು 553 ಕೋಟಿ ರೂ. ಅನುಷ್ಠಾನಗೊಳಿಸಲು ಕ್ರಮ.
* 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ.
* ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆ.
* ರಾಮನಗರ ಮತ್ತು ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಗೂಡಿನ ಮೊದಲ ಹಂತದ ಕಾಮಗಾರಿ ಪೂರ್ಣ.
* ಪ್ರಸ್ತಕ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗೆ 250 ಕೋಟಿ ರೂಪಾಯಿ ವೆಚ್ಚ.
* ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ನಬಾರ್ಡ್ ಸಹಯೋಗದಲ್ಲಿ ಸ್ಥಾಪನೆ.
* ರೇಷ್ಮೆ ಬೆಳೆ ವಿಸ್ತರಿಸಲು 55 ಕೋಟಿ ರೂಪಾಯಿ ಅನುದಾನ.
* ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿ.
* 2025-26 ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ.
* 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡ ನಬಾರ್ಡ್ ಸಹಯೋಗದಲ್ಲಿ ನಿರ್ಮಾಣ.
* ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ.
* 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
* 1,080 ಕೋಟಿ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ
* ಎತ್ತಿನಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಮೀಸಲು
* ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಬ್ಯಾಸಕ್ಕೆ ಪ್ರೋತ್ಸಾಹಿಸಲು ಕಟ್ಟಡ ರಾಜ್ಯದ 31 ಜಿಲ್ಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೂ ವಸತಿ ಶಾಲೆಗಳ ಪ್ರಾರಂಭಕ್ಕೆ 750 ಕೋಟಿ ರೂ.ಗಳ ನಿಗದಿ.
* ನೋಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ, ವೈದ್ಯಕೀಯ ಸೌಲಭ್ಯಕ್ಕಾಗಿ ನೀಡುತ್ತಿರುವ ಸಹಾಯಧನ ದ್ವಿಗುಣ
* ಸಹಜ ಮರಣ ಹೊಂದಿದಲ್ಲಿ 1.5 ಲಕ್ಷ ಪರಿಹಾರ. ಕೆಲಸದ ಸ್ಥಳದಲ್ಲಿ ಮರಣಹೊಂದಿದರೆ 8 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ.
* ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ 5 ಲಕ್ಷ ಮಿತಿ ಪೂರ್ಣಗೊಂಡಲ್ಲಿ ಹೃದ್ರೋಗ, ಕ್ಯಾನ್ಸ್ರಗೆ 5 ಲಕ್ಷ ರೂ. ಇತರೆ ಕಾಯಿಲೆಗಳಿಗೆ 2 ಲಕ್ಷ ರೂ.ಗಳನ್ನು ಪಾವತಿ.
* ರಾಜ್ಯ ವಿಮಾ ಆಸ್ಪತ್ರೆ(ಇಎಸ್ಐ) ಮೂಲಸೌಲಭ್ಯ ಹೆಚ್ಚಳ ಮಾಡಲು 51 ಕೋಟಿ ರೂ.ಗಳ ನಿಗದಿ
* ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂ.
* ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು
* ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು
* ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗುವುದು.
* ತೊಗರಿ ಬೆಳೆಗಾರರಿಗೆ 450 ರೂಪಾಯಿ ಪ್ರೋತ್ಸಾಹಧನ
* ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧರಿಸಿದ್ದು, ಕ್ವಿಂಟಾಲ್ಗೆ 7,550 ರೂಪಾಯಿ ಜೊತೆಗೆ ರಾಜ್ಯ ಸರ್ಕಾರದಿಂದ 450 ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಸರ್ಕಾರ ತಿಳಿಸಿದೆ. ಸರ್ಕಾರ ಈ ನಿರ್ಧಾರದಿಂದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ.
* ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದು, 10 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.
* ಅಬಕಾರಿ ಇಲಾಖೆಗೆ 36,500 ಕೋಟಿ ರೂಪಾಯಿ ಆದಾಯದ ಗುರಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ. ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ.
* ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1,000 ರೂಪಾಯಿ, ಸಹಾಯಕಿಯರಿಗೆ 750 ರೂಪಾಯಿ ಗೌರವಧನ ಹೆಚ್ಚಳ, ಗೃಹ ಲಕ್ಷ್ಮಿ ಯೋಜನೆಗೆ 2025-26 ಸಾಲಿನಲ್ಲಿ 28,608 ಕೋಟಿ ರೂಪಾಯಿ ಅನುದಾನ, ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ ಒಟ್ಟು 94,084 ಕೋಟಿ ರೂಪಾಯಿ ಅನುದಾನ, ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗೆ 62,033 ಕೋಟಿ ರೂಪಾಯಿ ಅನುದಾನದ ಘೋಷಣೆ.
* ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕಾಗಿ ಮತ್ತು ಮುಸ್ಲಿಂ ಸ್ಮಶಾನಗಳ ರಕ್ಷಣೆ, ಮೂಲಸೌಕರ್ಯಕ್ಕಾಗಿ 150 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.ಎಂದು ಬಜೆಟ್ ನಲ್ಲಿ ತಿಳಿಸಿದರು.