ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ತೊಂದರೆ
ಬೆಳಗಾವಿ-10: ನಗರದಲ್ಲಿನ ಪ್ರಮುಖ ಚನ್ನಮ್ಮ ವೃತ್ತದಲ್ಲಿ ಮತ್ತೆ ಒಂದೇ ದಿನದಲ್ಲಿ ಹಲವು ಪ್ರತಿಭಟನೆಗಳು ನಡೆದಿವೆ. ಇದರಿಂದಾಗಿ ವಿದ್ಯಾರ್ಥಿಗಳು, ಚಿಕಿತ್ಸೆಗೆ ಬರುವ ರೋಗಿಗಳು ಹಾಗೂ ವಯೋವೃದ್ಧರು ತೊಂದರೆಗೆ ಒಳಗಾಗುತ್ತಿದ್ದಾರೆ.


ಪ್ರತಿಭಟನೆ ಮಾಡುವ ಹಕ್ಕು ಪ್ರಜಾಪ್ರಭುತ್ವದ ಅಂಗವಾದರೂ, ರಸ್ತೆ ಬಂದ ಮಾಡುವುದು ಸಾರ್ವಜನಿಕ ಜೀವನಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದೆ. ಈ ಅವ್ಯಾಹತ ಸಂಚಾರ ತೊಂದರೆಯಿಂದ ಆಸ್ಪತ್ರೆಗೆ ಬರುವ ರೋಗಿಗಳು ಸಮಯಕ್ಕೆ ತಲುಪುವಲ್ಲಿ ವಿಳಂಬವಾಗುತ್ತಿದ್ದಾರೆ. ಅಲ್ಲದೆ, ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಸಹ ಇದು ತೊಂದರೆಯಾಗಿದೆ.

ಜಿಲ್ಲಾ ಆಡಳಿತದಿಂದ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಪ್ರತಿಭಟನಾಕಾರರು ಅವರ ಅಭಿಪ್ರಾಯ ವ್ಯಕ್ತಪಡಿಸುವಾಗ, ಇತರ ನಾಗರಿಕರ ಹಕ್ಕುಗಳಿಗೂ ಗೌರವ ನೀಡುವಂತೆ ಮನವಿ ಮಾಡಲಾಗಿದೆ.
