11/12/2025
IMG-20250323-WA0000

ಬೆಳಗಾವಿ-23: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಾಶ್ಚಾಪುರ ಗ್ರಾಮದಲ್ಲಿ ಮುಸ್ಲಿಂ ಸಮಾಜದ ಬಂಧುಗಳು ಆಯೋಜಿಸಿದ್ದ ಇಫ್ತಾರ್ ಕೂಟ ಸಾಮಾಜಿಕ ಸೌಹಾರ್ದತೆ, ಏಕತೆಯ ಅನುಭವಕ್ಕೆ ಸಾಕ್ಷಿಯಾಯಿತು.  ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಭಾಗವಹಿಸಿ ಸಮಾಜದಲ್ಲಿ ಸಹೋದರತ್ವದ ಆದರ್ಶವನ್ನು ಸಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸತೀಶ ಜಾರಕಿl,ಹೊಳಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸಂವಹನ, ವಿಶ್ವಾಸ ಮತ್ತು ಒಗ್ಗಟ್ಟಿನ ತಳಹದಿಯನ್ನು ಬಲಪಡಿಸುತ್ತದೆ, ಧರ್ಮ, ಜಾತಿಗಳನ್ನು ಮೀರಿ ಮಾನವ ಸಂಬಂಧಗಳಿಗೆ ಆದ್ಯತೆ ನೀಡುವುದೇ ನಮ್ಮ ಸಂಸ್ಕೃತಿಯ ನಿಜವಾದ ಅಸ್ಮಿತೆ.  ಅವರ ಅಭಿಪ್ರಾಯಗಳಿಗೆ ಸಾಮಾನ್ಯ ಬೆಂಬಲವಿತ್ತು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಸಂದೇಶ ರಾಜಮನೆ ಸೇರಿದಂತೆ ಮುಸ್ಲಿಂ ಸಮುದಾಯದ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು

error: Content is protected !!