ಬೆಳಗಾವಿ-28* : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಬೆಳಗಾವಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ/ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ, ವಾಟರಮನ್, ಸ್ವಚ್ಛತಾಗಾರ ಹಾಗೂ ಅಟೆಂಡರಗಳ ಕುಂದು ಕೊರತೆಗಳನ್ನು ಆಲಿಸಲು ಜಿಲ್ಲೆಯ ಎಲ್ಲ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಪಂ.ರಾಜ್), ಗ್ರಾಮ ಪಂಚಾಯತ ಸಿಬ್ಬಂದಿಗಳ ಜಿಲ್ಲಾ ಮಟ್ಟದ ಅಧ್ಯಕ್ಷರು/ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧ್ಯಕ್ಷರು/ಪದಾಧಿಕಾರಿಗಳಿಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಸಭೆಯನ್ನು ಜರುಗಿಸಿದರು.
ಈ ವೇಳೆ ಉಪಕಾರ್ಯದರ್ಶಿ(ಆಡಳಿತ) ಬಸವರಾಜ್ ಹೆಗ್ಗನಾಯಕ್, ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ್ ಅಡವಿಮಠ, ಸಹಾಯಕ ಕಾರ್ಯದರ್ಶಿ(ಆಡಳಿತ) ರಾಹುಲ್ ಕಾಂಬಳೆ, ಕಛೇರಿ ಅಧೀಕ್ಷಕರು ಬಸವರಾಜ್ ಮುರಘಾಮಠ ಮತ್ತು ಜಿಲ್ಲಾ ಪಂಚಾಯತ ಸಿಬ್ಬಂದಿ ವರ್ಗದವರು ಹಾಜರಿದ್ದರು.
