08/04/2025
IMG-20250403-WA0006

ಬೆಳಗಾವಿ-03: ನಗರ ವಲಯದ ಮರಾಠ ಮಂಡಳ ಸಂಯುಕ್ತ ಪದವಿ ಪೂರ್ವ ಶಾಲೆಯಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ ಸಿಸಿಟಿವಿ ಹಾಗೂ ಪರೀಕ್ಷಾ ಕೇಂದ್ರದಲ್ಲಿ ಏರ್ಪಡಿಸಿದ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು. ಈ ವಿಜ್ಞಾನ ಪರೀಕ್ಷೆಗೆ 607 ವಿದ್ಯಾರ್ಥಿಗಳ ಪೈಕಿ 592 ಜನ ವಿದ್ಯಾರ್ಥಿಗಳು ಹಾಜರಾಗಿದ್ದರು. 15 ವಿದ್ಯಾರ್ಥಿಗಳು ಗೈರಾಗಿದ್ದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಜಿಲ್ಲಾ ನೋಡಲ್ ಅಧಿಕಾರಿ ಎನ್. ಆರ್. ಪಾಟೀಲ್, ಮರಾಠ ಮಂಡಳ ಕೇಂದ್ರ ಮುಖ್ಯ ಅಧೀಕ್ಷಕರಾದ ಲತಾ ಶಿಂಧೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!