
ಅಹಮದಾಬಾದ್-09:ಗುಜರಾತ್ ನಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಂಡಿರುವ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವರು,
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು.
ಆಶ್ರಮದ ಕುರಿತು ಸಂಪೂರ್ಣ ಮಾಹಿತಿ ಪಡೆದ ಸಚಿವರು, ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದರು.
ಸಚಿವರ ಕುಟುಂಬದ ಸದಸ್ಯರು ಜೊತೆಗಿದ್ದರು.