
ಬೆಳಗಾವಿ-10:ಘಟಿಕೋತ್ಸವವು ಏಪ್ರೀಲ್ ೧೧ ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮುಂಜಾನೆ ೧೧ ಗಂಟೆಗೆ ಜರುಗಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ. ಸಿ.ಎಂ.ತ್ಯಾಗರಾಜ್ ಅವರು ತಿಳಿಸಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೩ನೇ ವಾರ್ಷಿಕ ಘಟಿಕೋತ್ಸವದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರದ ಥಾವರ್‌ಚಂದ ಗೆಹ್ಲೋಟ್ ಅವರು ವಹಿಸಲಿದ್ದು, ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ ಅವರು ನೂತನ ಪದವೀಧರರನ್ನು ಉದ್ದೇಶಿ ಮಾತನಾಲಿದ್ದಾರೆ. ಹಿರಿಯ ಇಂಗ್ಲೀಷ ಪ್ರಾಧ್ಯಾಪಕರು, ಸಾಹಿತ್ಯ ವಿಮರ್ಶಕರಾದ ಪದ್ಮಶ್ರೀ ಪುರಸ್ಕೃತರಾದ ಪ್ರೋ ಗಣೇಶ ನಾರಾಯಣದಾಸ ದೇವಿ ಅವರು ಘಟಿಕೋತ್ಸವದ ಭಾಷಣ ಮಾಡುವರು ಎಂದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯವರು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿಕೊಳ್ಳುತ್ತ ಜ್ಞಾನಮುಖಿ, ಸಮಾಜಮುಖಿ, ಉದ್ಯೋಗಮುಖಿ ಚಿಂತನೆಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವುದರೊಂದಿಗೆ ಶೈಕ್ಷಣಿಕವಾಗಿ ಹಾಗೂ ಗುಣಾತ್ಮಕವಾಗಿ ಬೆಳೆಯುತ್ತಿದೆ. ಹಿರೇಬಾಗೆವಾಡಿಯಲ್ಲಿ ೧೨೬ ಎಕರೆ ಪ್ರದೇಶದಲ್ಲಿ ಆಡಳಿತ ಕಟ್ಟಡಗಳು ಹಾಗೂ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಕಾರ್ಯವು ಮುಕ್ತಾಯ ಹಂತದಲ್ಲಿದ್ದು, ಮೂಲಭೂತ ಸೌಕರ್ಯಗಳಾದ ರಸ್ತೆ ಹಾಗೂ ನೀರು ಸರಬರಾಜು ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಸದರಿ ವಿಶ್ವವಿದ್ಯಾಲಯಕ್ಕೆ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ ೩೬೧ ಮಹಾವಿದ್ಯಾಲಯಗಳು ಸಂಯೋಜನೆಗೊAಡಿದ್ದು ೧.೪ ಲಕ್ಷ ಸ್ನಾತ್ತಕ, ಸ್ನಾತ್ಕೋತ್ತರ ಹಾಗೂ ಪಿ.ಹೆಚ್.ಡಿ ವಿಧ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ ಅಧ್ಯಯನ ಪೀಠ, ರಾಣಿ ಚನ್ನಮ್ಮ ಅಧ್ಯಯನ ಪೀಠ, ಸಂಗೋಳ್ಳಿ ರಾಯಣ್ಣ ಅಧ್ಯಯನ ಪೀಠಗಳು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ನಾಲ್ಕು ವಿಷಯಗಳಲ್ಲಿ ಪಿ.ಜಿ. ಡಿಪಲೋಮಾ ಕೋರ್ಸುಗಳು ಹಾಗೂ ೩೩೪ಕ್ಕಿಂತ ಹೆಚ್ಚು ಸಂಶೋಧನಾರ್ಥಿಗಳಿAದ ಹಲವಾರು ವಿಷಯಗಳ ಕುರಿತು ಪಿ.ಹೆಚ್.ಡಿ. ಸಂಶೋಧನೆಗಳು ಜರುಗುತ್ತಿವೆ.
ಗೌರವ ಡಾಕ್ಟರೇಟ್ ಪ್ರಶಸ್ತಿ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೩ನೇ ಘಟಿಕೋತ್ಸವದ ಸಂದರ್ಭದಲ್ಲಿ ಕೃಷಿ, ಶಿಕ್ಷಣ ಮತ್ತು ಸಮಾಜಸೇವೆಗಾಗಿ ಶ್ರೀ. ದುರುದುಂಡೇಶ್ವರ ಸಿದ್ಧಸಂಸ್ಥಾನ ಮಠ, ನಿಡಸೋಶಿಯ ಪೀಠಾದಿಪತಿಗಳಾದ ಶ್ರೀಮನ್ ನಿರಂಜನ ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜಿ ಅವರಿಗೆ ಗೌರವ ಡಾಕ್ಟರೇಟ ಪದವಿಯನ್ನು, ಸಂವಿಧಾನ ಜಾಗೃತಿಯಲ್ಲಿ ಕಾರ್ಯತತ್ಪರಾದ ಮುಖ್ಯ ನ್ಯಾಮೂರ್ತಿ ಎಚ್.ಎನ್.ನಾಗಮೋಹನದಾಸ ಅವರಿಗೆ ಡಾಕ್ಟರ ಆಫ್ ಲಾ ಗೌರವ ಹಾಗೂ ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ಸೇವೆಗಾಗಿ ವಿಯಪುರದ ಸೀಕ್ಯಾಬ್ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಶಮಸುದ್ಧಿನ್ ಅಬ್ದುಲ್ಲಾ ಪುಣೇಕರ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಸಲ್ಲಿಸಲಾಗುವುದು.
ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಒಟ್ಟು ೪೬೦೧೩ ವಿಧ್ಯಾರ್ಥಿಗಳು ಸ್ನಾತಕ ಪದವಿಯನ್ನು ಹಾಗೂ ೨೮೬೬ ವಿಧ್ಯಾರ್ಥಿಗಳು ಸ್ನಾತ್ತಕೋತ್ತರ ಪದವಿಯನ್ನು ಪಡೆದುಕೊಳ್ಳಲು ಅರ್ಹರಾಗಿದ್ದು, ೧೧ ಸುವರ್ಣ ಪದಕಗಳನ್ನು ಹಾಗೂ ಒಂದು ನಗದು ಬಹುಮಾನವನ್ನು ಸ್ನಾತಕ ಹಾಗೂ ಸ್ನಾತಕೋತ್ತರ ವಿಧ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು ೨೦ ಪಿ.ಹೆಚ್.ಡಿ ಪದವಿಗಳನ್ನು ಪ್ರಧಾನ ಮಾಡಲಾಗುವುದು ಎಂದು ಕುಲಪತಿಗಳಾದ ಪ್ರೊ. ಸಿ.ಎಂ.ತ್ಯಾಗರಾಜ ಅವರು ತಿಳಿಸಿದರು.
ಸ್ವರ್ಣ ಪದಕ ವಿಜೇತ ಸ್ನಾತಕ, ಸ್ನಾತಕೋತ್ತರ ವಿಧ್ಯಾರ್ಥಿಗಳ ವಿವರ:
ಸ್ನಾತಕ ವಾಣಿಜ್ಯ ವಿಭಾಗದಲ್ಲಿ ಗೋಕಾಕನ ಕೆ.ಎಲ್.ಇ ಶಿಕ್ಷಣ ಸಂಸ್ಥೆಯ ಬಷೀರಾ ಎಂ. ಮಿಲಾಡಿ, ವಿಜ್ಞಾನ ವಿಭಾಗದಲ್ಲಿ ಜಮಂಡಿಯ ತುಂಗಳ ಸ್ಕೂಲ ಆಫ್ ಬೇಸಿಕ್ & ಅಪ್ಲೆöÊಯಡ್ ಸೈನ್ಸ್ ಕಾಲೇಜಿನ ಅಶ್ವಿನಿ ಎಸ್ ಕುಂಬಾರ, ಇಂಗ್ಲೀಷ ವಿಭಾಗದಲ್ಲಿ ಬಾಗಲಕೋಟೆಯ ಬಸವೇಶ್ವರ ಕಾಲೇಜಿನ ಯಂಕಪ್ಪ ಪುಜಾರಿ, ಕನ್ನಡ ವಿಭಾಗದಲ್ಲಿ ಬೆಳಗಾವಿಯ ಆರ್.ಪಿ.ಡಿ ಕಾಲೇಜಿನ ಮುಸ್ಕಾನ ಹೊಸಳ್ಳಿ, ಸಮಾಜ ಶಾಸ್ತç ವಿಭಾಗದಲ್ಲಿ ಗೋಕಾಕನ ಜೆ,ಎಸ್.ಎಸ್ ಕಾಲೇಜಿನ ತಿಲಕಸಿಂಗ್ ರಜಪುತ. ಸ್ನಾತಕೋತ್ತರ ಕನ್ನಡ ವಿಭಾಗದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಿವಶಂಕರ ಕಾಂಬಳೆ, ಸಮಾಜಶಾಸ್ತç ವಿಭಾಗದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಶ್ರೇಯಸ್ಸ ಅಂಗಡಿ, ಎಮ್.ಬಿ.ಏ ವಿಭಾಗದಲ್ಲಿ ಹೀನಾಕೌಸರ ತುಬಾಕಿ, ಗಣಿತಶಾಸ್ತç ವಿಭಾಗದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಶ್ರೀದೇವಿ ಅರಕೇರಿ, ವಾಣಿಜ್ಯ ವಿಭಾಗದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಸಂತೋಷ ತಳವಾರ ಅವರು ಸ್ವರ್ಣ ಪದಕಗಗಳನ್ನು ಪಡೆಯಲಿದ್ದಾರೆ.
ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಸಚಿವರಾದ ಸಂತೋಷ ಕಾಮಗೌಡ, ಮೌಲ್ಯಮಾಪನ ವಿಭಾಗದ ಕುಲಸಚಿವರಾದ ರವೀಂದ್ರನಾಥ ಕದಮ್, ಹಣಕಾಸು ಅಧಿಕಾರಿಗಳಾದ ಎಂ.ಎ. ಸಪ್ನ, ಪ್ರೋ. ಕಮಲಾಕ್ಷಿ ತಡಸದ ಹಾಗೂ ಪ್ರೋ. ಅಶೋಕ ಡಿಸೋಜಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.