ನವದೆಹಲಿ-24:ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕ್ಯಾಬಿನೆಟ್ ಭದ್ರತಾ ಸಮಿತಿ ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ಡೋವಲ್ ಮತ್ತು ಇತರ ಉನ್ನತ ಅಧಿಕಾರಿಗಳು ಭಾಗವಹಿಸಿದರು.
ದಾಳಿಯ ನಂತರದ ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಭದ್ರತಾ ಕ್ರಮಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಾಯಿತು.
ಸಭೆಯಲ್ಲಿ ಕಾಶ್ಮೀರದ ಭದ್ರತಾ ಸ್ಥಿತಿಗತಿಯ ಬಗ್ಗೆ ವರದಿ ನೀಡಲಾಯಿತು ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.
