09/12/2025
IMG-20250427-WA0014

ಬೆಳಗಾವಿ-27: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಾಗಲಕೋಟೆ ಹಾಗೂ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ಬಾಗಲಕೋಟೆ ಇವರ ಸಹಯೋಗದಲ್ಲಿ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ ರಥಯಾತ್ರೆ” ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಬೆಳಗಾವಿ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ “ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆ”ಯನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕರ್ನಾಟಕ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನೊಳಗೊಂಡ ಅನುಭವ ಮಂಟಪದಲ್ಲಿ ಭಗವಾನ್ ಗೌತಮ ಬುದ್ಧ, ಗುರುನಾನಕ್ ಹಾಗೂ ಶಿವಶರಣೆ ಅಕ್ಕ ಮಹಾದೇವಿ ಮೂರ್ತಿಗಳು ನೋಡುಗರ ಕಣ್ಣಿಗೆ ಮೆರಗು ನೀಡಿದವು.

ಈ ಸಂದರ್ಭದಲ್ಲಿ ಮಹಾಪೌರರಾದ ಮಂಗೇಶ್ ಪವಾರ್, ಉಪ ಮಹಾಪೌರರಾದ ವಾಣಿ ಜೋಶಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸೇರಿದಂತೆ ಗಣ್ಯರು, ಬಸವ ಶರಣರ ಅನುಯಾಯಿಗಳು ಉಪಸ್ಥಿತರಿದ್ದರು.

error: Content is protected !!