ಬೆಂಗಳೂರು-18:ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಹಳದಿ(yellow)ಅಲರ್ಟ್ ಘೋಷಿಸಲಾಗಿದೆ.
ಮೇ 21 ರಂದು 200 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮೇ 23 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಳನಾಡಿನ ಇತರ ಜಿಲ್ಲೆಗಳಲ್ಲಿ ಇದೇ ಅವಧಿಯಲ್ಲಿ ಕೆಲವು ದಿನಗಳವರೆಗೆ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.
