11/12/2025
IMG-20250527-WA0001

ಬೆಳಗಾವಿ-27: ಮಳೆಗಾಲ ಪ್ರಾರಂಭವಾದ್ದರಿಂದ ಅಂಗನವಾಡಿ ಹೊರಗೆ ಹಾಗೂ ಒಳಗಡೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಮಕ್ಕಳ ಆರೋಗ್ಯದ ಕಡೆ ಗಮನಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ದಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿ.ಡಿ.ಪಿ.ಒ ಹಾಗೂ ಅಂಗನವಾಡಿ ಮೇಲ್ವಿಚಾರಕರೊಂದಿಗೆ ನಡೆದ ಪ್ರಗತಿ ಪರಿಶೀಲನಾ ವಿಡಿಯೋ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಗಾಲ ಪ್ರಾರಂಭವಾದ್ದರಿಂದ ಪ್ರತಿ ಅಂಗನವಾಡಿಗಳಿಗೆ ಮೇಲ್ವಿಚಾರಕರು ಭೇಟಿ ನೀಡಿ ಪರಿಶೀಲಿಸಿ ಸಿ.ಡಿ.ಪಿ.ಒ ಅವರಿಗೆ ವರದಿಯನ್ನು ನೀಡಬೇಕೆಂದು ತಿಳಿಸಿದರು. ಆರು ವರ್ಷ ಪೂರ್ಣಗೊಂಡ ಮಕ್ಕಳ ಶಾಲೆಗೆ ದಾಖಲಾದ ಬಗ್ಗೆ ವರದಿ ನೀಡುವುದು. ಗರ್ಭಿಣಿ ಮತ್ತು ಬಾಣಂತಿಯರಿಗೆ ಮನೆಗೆ ಶುಚಿತ್ವ ಆಹಾರ ನೀಡುವುದು ಮತ್ತು ಖಾತ್ರಿ ಪಡಿಸಿಕೊಳ್ಳಲು ಸೂಚಿಸಿದರು. ಪ್ರತಿ ತಿಂಗಳು 3ನೇ ಶನಿವಾರ ಪಾಲಕರ/ಪೋಷಕರ ಸಭೆಯನ್ನು ಕಡ್ಡಾಯವಾಗಿ ಮಾಡಬೇಕು ಮತ್ತು ಸಭೆಯ ನಡವಳಿಯನ್ನು ಕುರಿತು ರಜಿಸ್ಟರ್ ನಲ್ಲಿ ಬರೆದು ಛಾಯಾಚಿತ್ರದೊಂದಿಗೆ ವರದಿ ನೀಡಲು ಸೂಚಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಯನ್ನು ಕಡ್ಡಾಯವಾಗಿ ಮಾಡುವುದು. ಪಂಚಾಯತ ಮಟ್ಟದಲ್ಲಿ ಕುಡಿಯುವ ನೀರಿನ ಪರಿಕ್ಷೇಯನ್ನು ಮಾಡುವುದು. ಅಲ್ಲದೇ ಮಕ್ಕಳಿಗೆ ಕುಡಿಯುವ ನೀರನ್ನು ಕುದಿಸಿ ಆರಿಸಿ ಕೊಡಬೇಕು. ಅಂಗನವಾಡಿ ಒಳ ಮತ್ತು ಹೊರ ವಾತಾವರಣ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. . ಮಕ್ಕಳಿಗೆ ಕೆಮ್ಮು, ಜ್ವರ, ನೆಗಡಿ, ಬಂದರೆ ಚಿಕಿತ್ಸೆ ನೀಡುವಂತೆ ನೋಡಿಕೊಳ್ಳುವುದು. ಕೇಂದ್ರಗಳಲ್ಲಿ ವಿದ್ಯುತ್ ತಂತಿಗಳು ಡಿಸ್ಕನೆಕ್ಟ ಆಗಿದ್ದರೆ ಅದನ್ನು ಈ ಕೂಡಲೇ ಸರಿ ಪಡಿಸಿಕೊಳ್ಳಲು ನಿರ್ದೇಶನ ನೀಡಿದರು.

ಪ್ರಧಾನ ಮಂತ್ರಿ ಮಾತೃ ವಂದನಾ, ಭಾಗ್ಯಲಕ್ಷ್ಮೀ ಪರಿಪಕ್ವ ಮೊತ್ತ ನೀಡುವುದು ಮತ್ತು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಪಿಎಮ್ಜೆಜೆವಾಯ್ ಹಾಗೂ ಪಿಎಮ್ವಾಯ್ ಗಳಂತಹ ವಿಮೆಗಳನ್ನು ಮಾಡಲು ಸಭೆಯಲ್ಲಿದ್ದ ಎಲ್ಲ ಅಧಿಕಾರಿಗಳಿಗೆ ತಿಳಿಸಲಾಯಿತು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಎನ್ ಬಂಗಾರೆಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ ಜಿಲ್ಲೆಯ ಎಲ್ಲ ತಾಲ್ಲೂಕಿನ ಇ.ಒ, ಸಿ.ಡಿ.ಪಿ.ಒ ಹಾಗೂ ಅಂಗನವಾಡಿ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!