11/12/2025
IMG-20250610-WA0000

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಕ್ಕಳನ್ನು ಅಭಿನಂದಿಸಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ-10: 2024-25ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವಿದ್ಯಾರ್ಥಿಗಳನ್ನು ಜೂನ್ 15 (ಭಾನುವಾರ) ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಲಿದ್ದಾರೆ.

ಕುವೆಂಪುನಗರದ ಸಚಿವರ‌ ಗೃಹ ಕಚೇರಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದನಾ ಪತ್ರಗಳನ್ನು ಸಚಿವರು ವಿತರಿಸಲಿದ್ದಾರೆ.

600ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸಚಿವರು ‌ಅಭಿನಂದಿಸಿ, ಬ್ಯಾಗ್ ವಿತರಿಸಲಿದ್ದಾರೆ.
ಅರ್ಹ ವಿದ್ಯಾರ್ಥಿಗಳು ತಾತ್ಕಾಲಿಕ ಅಂಕ ಪಟ್ಟಿಯನ್ನು ತರಬೇಕೆಂದು ಕೋರಲಾಗಿದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವ‌ ಮುಖಂಡರಾದ ಮೃಣಾಲ್ ಹೆಬ್ಬಾಳಕರ್ ಉಪಸ್ಥಿತರಿರುವರು.

ಹೆಚ್ಚಿನ ವಿವರಗಳಿಗೆ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳು 7406206472 ನಂಬರ್ ಸಂಪರ್ಕಿಸಬಹುದು.

error: Content is protected !!