13/12/2025
IMG-20250702-WA0005

ಬೆಳಗಾವಿ-02: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಅಥವಾ ಕಾಯಮಾತಿಯನ್ನು ನೀಡಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಬೇಕೆಂದು ಬಂಡಾಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರನ್ನು ಬೆಳಗಾವಿ ಬಾಗಲಕೋಟೆ, ವಿಜಯಪುರ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೋಮವಾರ ಒತ್ತಾಯಿಸಿದರು.

ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾದಂಬರಿ ಕಾರ ಬಸವರಾಜ ಕಟ್ಟಿಮನಿ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ ನಾಡೋಜ ಬರಗೂರು ರಾಮಚಂದ್ರಪ್ಪನವರನ್ನು ಭೇಟಿ ಮಾಡಿದ ಬೆಳಗಾವಿ ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಮುಖಂಡರುಗಳು ತಾವು 10:15 ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಈಗಾಗಲೇ ಸಾವಿರಾರು ಜನ ವಯೋಮಿತಿಯನ್ನು ಕಳೆದುಕೊಂಡಿದ್ದಾರೆ. ಕೆಲವರು ನಿವೃತ್ತಿಯ ಅಂಚಿನಲ್ಲಿದ್ದಾರೆ. ಇದುವರೆಗೂ ಯಾವ ಸರ್ಕಾರಗಳು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಅಥವಾ ಖಾಯಮಾತಿಯನ್ನು ನೀಡಿಲ್ಲ. ಸಿದ್ದರಾಮಯ್ಯನವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ನಮ್ಮ ಅತಿಥಿ ಉಪನ್ಯಾಸಕರ ಪರವಾಗಿ ತಾವುಗಳು ಮಾನ್ಯ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದೀರಿ. ಅನಂತರ ಸಿದ್ದರಾಮಯ್ಯನವರು ವಿಪಕ್ಷ ನಾಯಕರಾಗಿ ಮುಂದುವರಿದಾಗ, ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕೆಂದು ಅಂದಿನ ಸರ್ಕಾರವನ್ನು ಒತ್ತಾಯಿಸಿದ್ದರು. ಮತ್ತೆ ಸಿದ್ದರಾಮಯ್ಯನವರು ಎರಡನೇ ಅವಧಿಗೆ ಮುಖ್ಯಮಂತ್ರಿಗಳಾಗಿ ಎರಡು ವರ್ಷ ಗತಿಸಿದರೂ ಇದುವರೆಗೆ ಸೇವಾ ಭದ್ರತೆಯನ್ನು ನೀಡಿಲ್ಲ. ಚುನಾವಣೆಯ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಅದರಂತೆ ಕಾಂಗ್ರೆಸ್ ಪಕ್ಷವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಅಥವಾ ಖಾಯಮಾತಿಯನ್ನು ನೀಡಬೇಕೆಂದು ನಮ್ಮ ಪರವಾಗಿ ಮಾನ್ಯ ಮುಖ್ಯಮಂತ್ರಿಗಳನ್ನು ಒತ್ತಾಯಿಸಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ಅತಿಥಿ ಉಪನ್ಯಾಸಕರ ಮುಖಂಡರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಡೋಜ ಬರಗೂರು ರಾಮಚಂದ್ರಪ್ಪನವರಿಗೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಮುಖಂಡರುಗಳಾದ ಡಾ. ರಾಜು ಕಂಬಾರ, ಡಾ. ರಮೇಶ ತೇಲಿ, ಡಾ. ಆರ್. ಎ. ಬಡಿಗೇರ, ಡಾ.ಅಡಿವೆಪ್ಪ ಇಟಗಿ, ನೀಲಕಂಠ ಭೂಮನ್ನವರ, ನಿಂಗಪ್ಪ ಸಂಗ್ರೇಜಿಕೊಪ್ಪ, ಡಾ. ಪದ್ಮಾ ಹೊಸಕೋಟಿ ಸೇರಿದಂತೆ ಬೆಳಗಾವಿ ಬಾಗಲಕೋಟೆ ವಿಜಯಪುರ ಜಿಲ್ಲೆಯ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

error: Content is protected !!