18 Nov 2026, 12:20:35 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತಿರುಮಲ‌ ತಿರುಪತಿ ಮಾದರಿಯ ‌ದೇವಸ್ಥಾನ 7ಎಕರೆ ಭೂಯಲ್ಲಿ ₹100 ಕೋಟಿ ರೂ ವೆಚ್ಚದಲ್ಲಿ ಕುಂದಾನಗರಿಯಲ್ಲಿ ನಿರ್ಮಾಣ ವಾಗಲಿದೆ; ಎಸ್. ನರೇಶ್ ಕುಮಾರ್.‌

ಬೆಳಗಾವಿ21: ರೆಡ್ಡಿ ಸಂಘವು ಬೆಳಗಾವಿ ನಗರದ ಹೊರವಲಯದಲ್ಲಿ ಏಳು ಎಕರೆ ಪ್ರದೇಶದಲ್ಲಿ ಬೃಹತ್ ವೆಂಕಟೇಶ್ವರ ದೇವಸ್ಥಾನ ಕಟ್ಟಲು ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ(ಟಿಟಿಡಿ) ಭೂಮಿ ಹಸ್ತಾಂತರ ಕಾರ್ಯಕ್ರಮ ಜರುಗಿತು.

ಮಂಗಳವಾರ ನರದ ಶದಾಶಿವ ನಗರದ ರೆಡ್ಡಿ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿಗೆ ಭೂಮಿ ಹಸ್ತಾಂತರ, ದೇವಸ್ಥಾನ ನಿರ್ಮಾಣ ಕುರಿತು ಮಹತ್ವದ ಮಾಹಿತಿ ಹಂಚಿಕೊಳ್ಳಲಾಯಿತು.
ಟಿಟಿಡಿ ಆಡಳಿತ ಮಂಡಳಿಯ ಸದಸ್ಯರಾದ ಎಸ್. ನರೇಶ್ ಕುಮಾರ್ ಮಾತನಾಡಿ, ದೇವಸ್ಥಾನ ನಿರ್ಮಾಣಕ್ಕಾಗಿ ಬೆಳಗಾವಿ ರೆಡ್ಡಿ ಸಂಘವು ಸದಭಿಪ್ರಾಯದಿಂದ ಸುಮಾರು 7 ಎಕರೆ ಭೂಮಿಯನ್ನು ಹಸ್ತಾಂತರ ಮಾಡಿರುವುದು ಶ್ಲಾಘನೀಯ ಕ್ರಮವಾಗಿದೆ ಎಂದರು. ಮುಂದಿನ ಎರಡು ವರ್ಷಗಳಲ್ಲಿ ಸುಮಾರು ₹100 ಕೋಟಿ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಗೊಳ್ಳಲಿದ್ದು, ಇದರಲ್ಲಿ ಶೇ.80ರಷ್ಟು ಅನುದಾನವನ್ನು ಟಿಟಿಡಿ ಒದಗಿಸಲಿದ್ದು, ಶೇ.10ರಷ್ಟು ರೆಡ್ಡಿ ಸಂಘ ಹಾಗೂ ಉಳಿದ ಶೇ.10ರಷ್ಟು ದಾನಿಗಳಿಂದ ಸಂಗ್ರಹಿಸಲಾಗುವುದು ಎಂದು ವಿವರಿಸಿದರು.
ಕರ್ನಾಟಕದ ದಾನಿಗಳ ಸಹಕಾರದಿಂದಲೇ ದೇವಸ್ಥಾನ ನಿರ್ಮಾಣ ಮಾಡುವ ಸಂಕಲ್ಪ ಕೈಗೊಂಡಿರುವುದಾಗಿ ತಿಳಿಸಿದ ಅವರು, ಮೂರು ರಾಜ್ಯಗಳ ಕೇಂದ್ರಸ್ಥಾನವಾಗಿರುವ ಬೆಳಗಾವಿ ನಗರದ ಹೊರವಲಯದಲ್ಲಿ ತಿರುಮಲ ವೆಂಕಟರಮಣ ದೇವಸ್ಥಾನ ನಿರ್ಮಾಣವಾಗುವುದರಿಂದ ಭಕ್ತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.
ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಕೂಡ ಈ ದೇವಸ್ಥಾನದಿಂದ ಹೆಚ್ಚಿನ ಸೌಲಭ್ಯ ದೊರೆಯಲಿದೆ. ತಿರುಪತಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳನ್ನು ಇದೇ ಮಾದರಿಯಲ್ಲಿ ಇಲ್ಲಿ ಸಹ ಆಯೋಜಿಸಲಾಗುವುದು. ಭಕ್ತರಿಗೆ ವಸತಿ, ಪ್ರಸಾದ (ಲಾಡು) ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಹೇಳಿದರು.
ಇದಲ್ಲದೆ, ಟಿಟಿಡಿ ಸಂಸ್ಥೆ ದೇವಸ್ಥಾನಗಳ ನಿರ್ಮಾಣ ಮತ್ತು ಪುನರುಜ್ಜೀವನಕ್ಕಾಗಿ ಸುಮಾರು ₹9,000 ಕೋಟಿ ಮೊತ್ತವನ್ನು ಮೀಸಲಿಟ್ಟಿದ್ದು, ದೇಶದ ಆರು ಕಡೆಗಳಲ್ಲಿ ಟಿಟಿಡಿ ದೇವಸ್ಥಾನಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ರಡ್ಡಿ ಜನಸಂಘ ಅಧ್ಯಕ್ಷ ಶ್ರೀ ಲಕ್ಷ್ಮಣ ರೆಡ್ಡಿ ಮಾತನಾಡಿ, ಬೆಳಗಾವಿಯಲ್ಲಿ ಟಿಟಿಡಿ ವತಿಯಿಂದ ದೇವಸ್ಥಾನ ನಿರ್ಮಾಣ ಆಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇದಕ್ಕೆ ಬೆಳಗಾವಿ ರಡ್ಡಿ ಸಂಘದ ಸಹಕಾರ ಬಹಳ ದೊಡ್ಡದಾಗಿದೆ. ನಿಮ್ಮ ಸಹಕಾರ ಹೀಗೆ ಮುಂದುವರಿಯಬೇಕು ಎಂದು ವಿನಂತಿಸಿದರು.
ಈ ವೇಳೆ ಬೆಳಗಾವಿ ರಡ್ಡಿ ಸಂಘದ ಅಧ್ಯಕ್ಷ ರಾಮಣ್ಣ ಮುಳ್ಳೂರ, ಉಪಾಧ್ಯಕ್ಷ ಕಾಂತು ಜಾಲಿಬೇರಿ, ವಿಕ್ರಂ ಜೈನ್, ಅವಿನಾಶ ಪೋತದಾರ, ಸುರೇಶ ದೇಸಾಯಿ, ಮಂಜುನಾಥ ಕೇಸೂರ, ಪ್ರಕಾಶ ಕಕರಡ್ಡಿ, ಡಾ.ಗಿರೀಶ ಸೋನವಾಲ್ಕರ್ ಸೇರಿದಂತೆ ಇತರರು‌upasti

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ