18 Nov 2026, 12:43:50 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ದೇಶದ ಆರ್ಥಿಕ ಅಭಿವೃದ್ಧಿಗಾಗಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಅಗತ್ಯ

ಬೆಳಗಾವಿ-೧೨: ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಡಿ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ನಿರಂತರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಹೋಟೆಲ್, ಅಂಗಡಿಗಳಲ್ಲಿ ನಿರಂತರ ಪರಿಶೀಲನೆ ನಡೆಸಿ ಮಕ್ಕಳ ರಕ್ಷಣೆಗೆ ಮುಂದಾಗಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಮುರಳಿ ಮೋಹನ್ ರೆಡ್ಡಿ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಬೆಳಗಾವಿ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ  ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಭವಿಷ್ಯದಲ್ಲಿ ಭಾರತ ಎಲ್ಲ ಕ್ಷೇತ್ರಗಳಲ್ಲಿ ಪ್ರಬಲರಾಗಲು ಮಕ್ಕಳು ಮುಂದೆ ಉತ್ತಮ ಪ್ರಜೆಗಳಾಗಬೇಕು.
ಈ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪ್ರತಿ ಮಕ್ಕಳ ಕುರಿತು ಮಾಹಿತಿ ಇರುತ್ತದೆ. ಬಡತನದಿಂದ ಶಿಕ್ಷಣ ವಂಚಿತರಾಗುತ್ತಿರುವ ಮಕ್ಕಳನ್ನು ಗುರುತಿಸಬೇಕು. ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಇಂತಹ ಮಕ್ಕಳು ಸಿಗುತ್ತಾರೆ. ಗ್ರಾಮೀಣ ಭಾಗದಲ್ಲಿ ಶಿಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪ್ರತಿಯೊಬ್ಬರೂ ಇಂತಹ ಮಕ್ಕಳನ್ನು ಗುರುತಿಸಿ ರಕ್ಷಿಸಬೇಕು ಎಂದು ಪಿ.ಮುರಳಿ ಮೋಹನ್ ರೆಡ್ಡಿ ಅವರು ತಿಳಿಸಿದರು.

ಮಕ್ಕಳ ರಕ್ಷಣೆ, ದೇಶದ ರಕ್ಷಣೆ:

ಸಾರ್ವಜನಿಕರಿಗೆ ಅರಿವು ಮೂಡಿಸಲು, ಬಾಲಕಾರ್ಮಿಕರ ನಿರ್ಮೂಲನೆ ಕುರಿತು ಪ್ರತಿಯೊಬ್ಬರಿಗೂ ತಿಳಿಸುವ ಉದ್ದೇಶದಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲು ನಿರ್ಧರಿಸಲಾಗುತ್ತದೆ. ಬಾಲಕಾರ್ಮಿಕರು ತಮ್ಮ ಹಕ್ಕುಗಳು ಇಲ್ಲದೆ ತಮ್ಮ ಜೀವನದ ಮೌಲ್ಯವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದಿದ್ದಾರೆ. ಅವೆಲ್ಲವನ್ನೂ ತಡೆಗಟ್ಟುವ ನಿಟ್ಟಿನಲ್ಲಿ ಈ ದಿನ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತ ನಾಗೇಶ್ ಡಿ.ಜಿ ಅವರು ಹೇಳಿದರು.

ಭಾರತದಲ್ಲಿ ಸಾಕಷ್ಟು ಮಕ್ಕಳು ತಮ್ಮ ಶಿಕ್ಷ ಣದ ಹಕ್ಕು, ಆರೋಗ್ಯ ಮತ್ತು ಮೂಲಭೂತ ಸ್ವಾತಂತ್ರ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಮಕ್ಕಳಲ್ಲಿ, ಅರ್ಧಕ್ಕಿಂತ ಹೆಚ್ಚು ಬಾಲಕಾರ್ಮಿಕರು ಕಾನೂನುಬಾಹಿರ ಚಟುವಟಿಕೆಗಳಿಗೆ ತೊಡಗಿಕೊಳ್ಳುತ್ತಿದ್ದಾರೆ.

ಅಪಾಯಕಾರಿ ಪರಿಸರದಲ್ಲಿ ಕೆಲಸ, ಗುಲಾಮಗಿರಿ ಅಥವಾ ಬಲವಂತವಾಗಿ ಕೆಲಸ ಮಾಡುತ್ತಾರೆ. ಜೊತೆಗೆ ವೇಶ್ಯಾವಾಟಿಕೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಸಶಸ್ತ್ರ ಸಂಘರ್ಷಕ್ಕೆ ಬಲಿಯಾಗುತ್ತಿದ್ದಾರೆ. ಭಾರತ ಸಂವಿಧಾನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು ಎಂದು ತಿಳಿಸಿದೆ. ಭಾರತದಲ್ಲಿ ಬಾಲ, ಕಿಶೋರ ಕಾರ್ಮಿಕ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆಯನ್ನು ಈಗಾಗಲೇ ದೇಶದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿರುವ ಮಕ್ಕಳು ಕಂಡು ಬಂದಲ್ಲಿ ತಕ್ಷಣ ರಕ್ಷಣೆ ಮಾಡಲಾಗುತ್ತಿದೆ.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಆಚರಣೆ ಜೊತೆಗೆ ನಿರಂತರವಾಗಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿ ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಇಲಾಖೆಗಳು, ಸಾರ್ವಜನಿಕರು ಸೇರಿಯಂತೆ ಎಲ್ಲರೂ ಕೈ ಜೋಡಿಸಬೇಕು ಎಂದು ಉಪ ಕಾರ್ಮಿಕ ಆಯುಕ್ತ ನಾಗೇಶ್ ಡಿ.ಜಿ ತಿಳಿಸಿದರು.

ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳ ಅಗತ್ಯ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಆರ್. ನಾಗರಾಜ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಮಕ್ಕಳನ್ನು ಗುರುತಿಸಿ ರಕ್ಷಣೆ ಮಾಡಲಾಗುತ್ತಿದೆ. ಮೊದಲ ಕಾಲದಿಂದಲೂ ಜೀತ ಪದ್ಧತಿ ಹಾಗೂ ಬಾಲಕಾರ್ಮಿಕ ಪದ್ಧತಿ ಇತ್ತು. ಈಗ ಕಾಲ ಬದಲಾಗಿದೆ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲಾಗಿದೆ. ಆದರೆ ಇನ್ನಷ್ಟು ಜಾಗೃತಿ ಕಾರ್ಯಕ್ರಮಗಳು ಅಗತ್ಯವಿದ್ದು, ಈ ಮೂಲಕ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ತಿಳಿಸಿದರು.

ಪ್ರತಿಜ್ಞಾವಿಧಿ ಬೋಧನೆ:

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಮುರಳಿ ಮೋಹನ್ ರೆಡ್ಡಿ ಅವರು ಬಾಲಕಾರ್ಮಿಕರ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಮಿಕ ಇಲಾಖೆ ಸಹಾಯಕ ಕಾರ್ಮಿಕ ಆಯುಕ್ತ ಎಂ.ಬಿ ಅನ್ಸಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನಕುಮಾರ ಹಂಚಾಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶಿವಪ್ರಿಯಾ ಕಡೆಚೂರ, ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹಾಂತೇಶ ಭಜಂತ್ರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಬೆಳಗಾವಿ ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಜೋಗುರು, ಶ್ರೀಮತಿ ತರುನ್ನಂ ಬೆಂಗಾಲಿ, ಮಹಿಳಾ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂರ್ದ ಮೇರಿ, ಜಿಲ್ಲಾ ನ್ಯಾಯವಾದಿಗಳ ಸಂಘ ಅಧ್ಯಕ್ಷ ಎಸ್.ಎಸ್ ಕಿವುಡಸಣ್ಣವರ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಾಲಕಾರ್ಮಿಕರ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಅವರು ನಿರೂಪಿಸಿ, ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ