18 Nov 2026, 12:44:51 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ ವಸ್ತು ಪ್ರದರ್ಶನ-2025

ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಸ್ತು ಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕು: ಸಚಿವ ಸತೀಶ ಜಾರಕಿಹೊಳಿ 
ಬೆಳಗಾವಿ-02: ಮೈಸೂರು ದಸರಾ ಸಂದರ್ಭದಲ್ಕಿ ಮೈಸೂರಿನಲ್ಲಿ ಮಾತ್ರ ಜರಗುತ್ತಿದ್ದ ವಿಶೇಷ ವಸ್ತು ಪ್ರದರ್ಶನ ಈ ಬಾರಿ ಬೆಳಗಾವಿಯಲ್ಲಿ ಜರುಗುತ್ತಿರುವುದು ಸಂತಸದ ಸಂಗತಿಯಾಗಿದ್ದು. ಕಿತ್ತೂರು ಕರ್ನಾಟಕ ಭಾಗದ ಜನರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಮೈಸೂರು ಮಾದರಿಯ ವಸ್ತು ಪ್ರದರ್ಶನ ನಮ್ಮ ಜಿಲ್ಲೆಯಲ್ಲೂ ಆಯೋಜಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಪ್ರವಾಸೊದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ಬೆಳಗಾವಿ ಸಹಯೋಗದಲ್ಲಿ ನಗರದ ಸಿ.ಪಿ.ಎಡ್ ಮೈದಾನದಲ್ಲಿ ಭಾನುವಾರ ನಡೆದ ಬೆಳಗಾವಿ ವಸ್ತು ಪ್ರದರ್ಶನ-2025ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸುಮಾರು 40 ದಿನ ನಡೆಯಲಿರುವ ವಸ್ತು ಪ್ರದರ್ಶನದಲ್ಲಿ 15 ಇಲಾಖೆಯಿಂದ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ವಸ್ತು ಪ್ರದರ್ಶನದಲ್ಲಿ ರಾಜ್ಯ ಸರಕಾರದ ಜನಪರ ಯೋಜನೆಗಳ‌ ಮಾಹಿತಿ ಜೊತೆಗೆ ಮನೋರಂಜನೆ‌ ಹಾಗೂ ಆಹಾರ ಮಳಿಗೆಗಳು ಪ್ರಾರಂಭವಾಗಲಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಇಲಾಖೆಗಳು ವಸ್ತು ಪ್ರದರ್ಶನ ಮಳಿಗಳನ್ನು ಸ್ಥಾಪಿಸಲಿವೆ ಎಂದರು.
ಈ ವಸ್ತು ವಸ್ತು ಪ್ರದರ್ಶನ ಕೇವಲ ನಗರಕ್ಕೆ ಸೀಮಿತವಾಗದೆ ಶಾಲಾ ಕಾಲೇಜು ಮಕ್ಕಳಿಗೆ ಸಮಯ ನಿಗದಿಪಡಿಸಿ ವಸ್ತು ಪ್ರದೇಶಕ್ಕೆ ಕರೆ ತರುವ ಕೆಲಸ ಶಿಕ್ಷಣ ಇಲಾಖೆ ಮಾಡಬೇಕು. ಅದೇ ರೀತಿ ಗ್ರಾಮ ಪಂಚಾಯತಿ ಮಟ್ಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಸ್ತು ಪ್ರದರ್ಶನಕ್ಕೆ ಬರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಚಾರ ಪಡಿಸುವುದರ ಮೂಲಕ ರಾಜ್ಯ ಸರಕಸರ ಜನಸಾಮಾನ್ಯರಿಗಾಗಿ ಜಾರಿಗೊಳಿಸಿದ ವಿವಿಧ ಕಾರ್ಯಕ್ರಮಗಳ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳಕು ಅನುಕೂಲವಾಗಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಜಿಲ್ಲಾ ಪಂಚಾಯತ ತಿಳಿಸಿದರು.
ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ ಖಾನ್ ಮಾತನಾಡಿ ನೂರಾರು ವರ್ಷದಿಂದ ಮೈಸೂರು ನಗರದಲ್ಲಿ ರಾಜ ಮಹಾರಾಜರ ಕಾಲದಿಂದ ಅಂದಿನ ಮಹಾರಾಜರು ವಸ್ತು ಪ್ರದರ್ಶನ ಮಾಡಿಕೊಂಡು ಬರುತ್ತಿದ್ದರು. ಅದೇ ಪದ್ಧತಿಯಂತೆ ಕರ್ನಾಟಕ ವಸ್ತು ಪ್ರಾಧಿಕಾರ ಆರಂಭಗೊಂಡ ಬಳಿಕ 85 ಎಕರೆ ಪ್ರದೇಶದಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ವಸ್ತು ಪ್ರದರ್ಶನ ಏರ್ಪಡಿಸುತ್ತಾ ಬಂದಿದ್ದೇವೆ. ಮೈಸೂರು ದಸರಾ ವಸ್ತು ಪ್ರದರ್ಶನ ಕೇವಲ ರಾಜ್ಯಕ್ಕೆ ಸೀಮಿತವಾಗಿದೆ ದೇಶಕ್ಕೆ ಹೆಮ್ಮೆಯಾಗಿದೆ ಎಂದರು.
ಮೈಸೂರು ನಗರದ ವಸ್ತು ಪ್ರದರ್ಶನ ಆ ಭಾಗದ ಜನರಿಗೆ ಉದ್ಯೋಗ ಸೃಷ್ಟಿಸುವ ಕೆಲಸವಾಗಿದೆ ಅದರಿಂದ ಸಾಕಷ್ಟು ಜನರು ತಮ್ಮ ವ್ಯಾಪಾರ, ಉದ್ದಿಮೆ ಅನುಕೂಲಕ್ಕಾಗಿ ಸಹಾಯವಾಗಲಿದೆ ಹೇಳಿದರು.
ಮುಖ್ಯಮಂತ್ರಿಗಳ ಅನುಮತಿ ಪಡೆದು ಕೇವಲ ಮೈಸೂರು ರಾಜ್ಯದಲ್ಲಿ ಮಾತ್ರವಲ್ಲದೇ ಉತ್ತರ ಕರ್ನಾಟಕದ ಬೆಳಗಾವಿ ಭಾಗದಲ್ಲಿ ವಸ್ತು ಪ್ರದರ್ಶನ ಆಯೋಜನೆ ಮಾಡಲಾಯಿತು. ಬೆಳಗಾವಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರದಿಂದ ಇದನ್ನು ಏರ್ಪಡಿಸಲು ಸಹಾಯವಾಯಿತು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸಹಕಾರದ ಜೊತೆಗೆ ಸಾಕಷ್ಟು ಸಲಹೆ ನೀಡಿದ್ದಾರೆ ಎಂದರು.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ
ಶಾಸಕರಾದ ರಾಜು(ಆಸೀಫ್)ಸೇಠ,ಕಾರ್ಯಕ್ರಮದಲ್ಲಿ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಉಪಾಧ್ಯಕ್ಷ ಲಕ್ಷ್ಮಣ ಹನುಮಣ್ಣವರ, ಜಿಲ್ಲಾ‌ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಕರ್ನಾಟಮ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿವಿಧ ಇಲಾಖೆಯ ಮಳಿಗೆಗಳ ಉದ್ಘಾಟನೆ:
ಕಾರ್ಯಕ್ರಮಕ್ಕೂ ಮುಂಚೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ರಾಜು(ಆಸೀಫ್)ಸೇಠ, ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ ಖಾನ್ ಅವರು ಸಹಕಾರಿ ಹಾಲು ಒಕ್ಕೂಟ ಮಳಿಗೆ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ 5 ಇಲಾಖೆಗಳು ಸೇರಿ ಒಂದು ಮಳಿಗೆ, ಲಿಡಕರ್ ಚರ್ಮಕೈಗಾರಿಕಾ ಅಭಿವೃದ್ಧಿ ನಿಗಮ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಳಗಾವಿ ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ.(HESCOM), ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಸೇರಿಯಂತೆ ವಿವಿಧ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ