18 Nov 2026, 12:30:39 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರು - ಬೆಳಗಾವಿ ವಂದೇ ಭಾರತ್ ರೈಲಿಗೆ ಚಾಲನೆ

ಬೆಂಗಳೂರು(ಬೆಳಗಾವಿ)-11: ಗೌರವಾನ್ವಿತ ಪ್ರಧಾನಮಂತ್ರಿಗಳಾದ  ನರೇಂದ್ರ ಮೋದಿ ಅವರಿಂದ ಚಾಲನೆ ಪಡೆದು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ ಬೆಂಗಳೂರು - ಬೆಳಗಾವಿ ವಂದೇ ಭಾರತ್ ರೈಲನ್ನು ಬೆಳಗಾವಿಯ ರೈಲು ನಿಲ್ದಾಣದಲ್ಲಿ ಸ್ವಾಗತಿಸಿಕೊಂಡು, ಮಾತನಾಡಲಾಯಿತು.

ನಮ್ಮ ಬೆಳಗಾವಿ ಜನತೆಯ ಬಹು ದಿನಗಳ ಕನಸು ಇಂದು ನನಸಾಗಿದೆ, ಬೆಂಗಳೂರಿನಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಸಂಚಾರ ಆರಂಭಿಸಿದ್ದು, ಬೆಳಗಾವಿ ಜನತೆಗೆ ಅತ್ಯಂತ ಉಪಯುಕ್ತವಾಗಿದೆ. ನಮ್ಮ ಮನವಿಗೆ ಸ್ಪಂದಿಸಿ, ಬೆಳಗಾವಿ - ಬೆಂಗಳೂರು ನಡುವೆ ವಂದೇ ಭಾರತ್ ರೈಲನ್ನು ಆರಂಭಿಸಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ  ನರೇಂದ್ರ ಮೋದಿಯವರಿಗೆ, ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ ಅವರಿಗೆ, ರೈಲ್ವೆ ರಾಜ್ಯ ಖಾತೆ ಸಚಿವರಾದ  ವಿ. ಸೋಮಣ್ಣ ಅವರಿಗೆ ಬೆಂಗಳೂರು ನಲ್ಲಿ ಉಪಸ್ಥಿತರಿದ್ದರು.


: *ಬೆಳಗಾವಿಗೆ ಆಗಮಿಸಿದ ವಂದೇ ಭಾರತ್ ರೈಲು!*
ಅದ್ಧೂರಿಯಾಗಿ ಸ್ವಾಗತಕೋರಿದ ಬೆಳಗಾವಿ ಜನ
ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲಿಗೆ ಸ್ವಾಗತ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿ ಸ್ವಾಗತ
ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿ ಸಂಭ್ರಮ
ಬೆಂಗಳೂರಿನಲ್ಲಿ ಬೆಳಿಗ್ಗೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಬೆಳಗಾವಿ ನಗರದಲ್ಲಿ  ವಂದೇ ಭಾರತ್ ರೈಲಿಗೆ  ಬರಮಾಡಿಗೊಂಡ ಯಲ್ಲಿ ಸಂಸದ ಜಗದೀಶ್ ಶೆಟ್ಟರ,ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರದ ಮಹಾಪೌರರಾದ  ಮಂಗೇಶ ಪವಾರ, ಉಪಮಹಾಪೌರರಾದ ವಾಣಿ ಜೋಶಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮಾಜಿ ಸಂಸದರಾದ  ಮಂಗಲಾ ಅಂಗಡಿ, ಶಾಸಕರಾದ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಬಿಜೆಪಿ ಜಿಲ್ಲಾಧ್ಯಕ್ಷರಾದ  ಸುಭಾಷ ಪಾಟೀಲ, ಬೆಳಗಾವಿ ನಗರ ಬಿಜೆಪಿ ಅಧ್ಯಕ್ಷರಾದ ಗೀತಾ ಸುತಾರ, ನಗರ ಸೇವಕರಾದ ಹನುಮಂತ ಕೊಂಗಾಲಿ, ರೈಲ್ವೆ ಇಲಾಖೆಯ ADRM  ವಿಷ್ಣು ಭೂಷಣ್, ಪ್ರಮುಖರಾದ ಡಾ. ರವಿ ಪಾಟೀಲ, ಶ್ರೀ ಪ್ರಸಾದ ಕುಲಕರ್ಣಿ, ಎಫ್. ಎಸ್ ಸಿದ್ದನಗೌಡರ್, ನಗರ ಸೇವಕರು, ಪಕ್ಷದ ಕಾರ್ಯಕರ್ತರು, ಬೆಳಗಾವಿ ನಗರದ ಪ್ರಮುಖರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ