25 Nov 2026, 07:22:42 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi | Politics News

ಡಿ.3ರಂದು ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ: ಬಾಲಚಂದ್ರ ಜಾರಕಿಹೊಳಿ.‌

ಡಿ.3ರಂದು ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ: ಬಾಲಚಂದ್ರ ಜಾರಕಿಹೊಳಿ.‌

ಬೆಳಗಾವಿ-24: ಉತ್ತರ ಕರ್ನಾಟಕದ ಅಭಿವೃದ್ಧಿ, ರೈತರ ಸಮಸ್ಯೆಗಳು, ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ, ಡಿ.3ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ನಗರದಲ್ಲಿ  ಮಂಗಳವಾರ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳಿಗೆ ರಾಜ್ಯ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ರೈತರು, ಆಶಾ ಕಾರ್ಯಕರ್ತೆಯರು, ನೀರಾವರಿ ಯೋಜನೆಗಳು ಸೇರಿದಂತೆ ಹಲವು ಜನಪರ ವಿಚಾರಗಳು ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಸರ್ಕಾರದ ಗಮನ ಸೆಳೆಯಲು ಅಧಿವೇಶನದ ಸಂದರ್ಭದಲ್ಲಿ ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದರು.

ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಮುಖ್ಯಮಂತ್ರಿ ಅವರೇ ಹೇಳುತ್ತಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ರಾಜ್ಯದಲ್ಲಿ ಹಲವು ಸಮಸ್ಯೆಗಳು ತಲೆದೋರಿದ್ದರೂ ಅವುಗಳ ಪರಿಹಾರಕ್ಕೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
*ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ*
ಕಬ್ಬು ಬೆಳೆಗಾರರು ಸೇರಿದಂತೆ ವಿವಿಧ ಬೆಳೆಗಳ ರೈತರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಅವರ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಕಲ್ಪಿಸುತ್ತಿಲ್ಲ. ರೈತರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸುವುದರ ಜತೆಗೆ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಹಲವು ನೀರಾವರಿ ಯೋಜನೆಗಳು ಅನುದಾನದ ಕೊರತೆಯಿಂದ ವಿಳಂಬವಾಗುತ್ತಿದ್ದು, ಉತ್ತರ ಕರ್ನಾಟಕದ ಕೃಷಿ ಹಾಗೂ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಆರೋಪಿಸಿದರು.
ಆರೋಗ್ಯ ವ್ಯವಸ್ಥೆಯ ಪ್ರಮುಖ ಅಂಗವಾಗಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೂ ಸರ್ಕಾರ ಸ್ಪಂದಿಸಬೇಕಿದೆ. ಅವರ ಸೇವೆ ಹಾಗೂ ಶ್ರಮಕ್ಕೆ ತಕ್ಕ ಗೌರವ ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರಗಳು ವಿಧಾನಮಂಡಲದಲ್ಲಿ ಸಮರ್ಪಕವಾಗಿ ಚರ್ಚೆಯಾಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಭಾಗದ ಜನರ ಸಮಸ್ಯೆಗಳು, ಅಭಿವೃದ್ಧಿ ಯೋಜನೆಗಳು ಹಾಗೂ ಮೂಲಸೌಕರ್ಯಗಳ ಕುರಿತು ಅಧಿವೇಶನದಲ್ಲಿ ಬಿಜೆಪಿ ಬಲವಾಗಿ ಧ್ವನಿ ಎತ್ತಲಿದೆ ಎಂದರು.
ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಅವರ ಪ್ರಯತ್ನಗಳನ್ನು ಇಂದಿಗೂ ಜನರು ಸ್ಮರಿಸುತ್ತಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.
*ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಸಿದ್ಧತೆ*
ಚಳಿಗಾಲದ ಅಧಿವೇಶನ ಡಿ.2ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಸಂಘಟನಾತ್ಮಕ ಸಭೆ ನಡೆಸಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಕೈಗೊಳ್ಳಬೇಕಾದ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬಾಲಚಂದ್ರ ಜಾರಕಿಹೊಳಿ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ, ರೈತರ ಪರಿಹಾರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳು, ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಸದನದಲ್ಲಿ ಸಮರ್ಥವಾಗಿ ಪ್ರಶ್ನಿಸುವ ಕುರಿತು ಚರ್ಚಿಸಿದರು. ಬಿಜೆಪಿ ಶಾಸಕರು ಹಾಗೂ ಸಂಸದರು ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವಂತೆ ಕಾರ್ಯತಂತ್ರ ರೂಪಿಸಲಾಯಿತು.
ಉತ್ತರ ಕರ್ನಾಟಕದ ಅಭಿವೃದ್ಧಿ, ರೈತರ ಹಿತಾಸಕ್ತಿ, ನೀರಾವರಿ ಯೋಜನೆಗಳ ಅನುಷ್ಠಾನ ಹಾಗೂ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.3ರಂದು ನಡೆಯಲಿರುವ ಪ್ರತಿಭಟನೆಯ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಬಿಜೆಪಿ ಸಜ್ಜಾಗಿದೆ.
ಈ ವೇಳೆ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ, ಸಂಜಯ್ ಪಾಟೀಲ, ಮಹಾಂತೇಶ ಕವಟಗಿಮಠ, ಮಹಾಂತೇಶ ದೊಡ್ಡಗೌಡರ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಅಣ್ಣಾಸಾಹೇಬ್ ಜೊಲೆ, ಶಾಸಕ ವಿಠ್ಠಲ ಹಲಗೇಕರ್, ಅನಿಲ್ ಬೆನಕೆ, ಮಹಾಂತೇಶ ವಕ್ಕೂದ್, ರ್ಯೋಧನ ಐಹೊಳೆ, ವಿವೇಕರಾವ್ ಪಾಟೀಲ, ಮಹೇಶ್ ಕುಮಟಳ್ಳಿ, ಉಜ್ವಲಾ ಬಡವಾನಾಚೆ, ಸಚಿನ್ ಕಡಿಗ ಸೇರಿದಂತೆ ಹಲವು ಮುಖಂಡರು ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Author
Vishwanath Desai
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಮುದಾಯ ಭವನವನ್ನು ಉದ್ಘಾಟನೆ ಕರ್ನಾಟಕ ಸರ್ಕಾರದ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ನೇಮಕಗೊಂಡಿರುವ ಮಲ್ಲೇಶ ಚೌಗುಲೆ ಅವರಿಗೆ ಸನ್ಮಾನ ಡಿ.3ರಂದು ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ: ಬಾಲಚಂದ್ರ ಜಾರಕಿಹೊಳಿ.‌ಅಖಿಲ ಭಾರತ ಕವಯಿತ್ರಿಯರ ತಾ.25, 26 ರಂದು ಸಮ್ಮೇಳನ ಶ್ರೀ ಪಂತ ಸಮರ್ಥ ನರಸಿಂಹ ದೇವಾಲಯಕ್ಕೆ ನಾಳೆ ಶತಮಾನೋತ್ಸವ ಸಂಭ್ರಮ.ಜನಗಣತಿ ಜವಾಬ್ದಾರಿಯಿಂದ ನಿರ್ವಹಿಸಿ : ಆಯುಕ್ತ ಕಾರ್ತಿಕ್ ಎಂ *24ನೇ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆ; 2026-27ನೇ ಸಾಲಿನ ಕ್ರಿಯಾ ಯೋಜನೆಗೆ 322 ಕೋಟಿ ರೂ. ಮೀಸಲು, 100 ಹೊಸ ಆಂಬುಲೆನ್ಸ್‌ಗಳ ಸೇರ್ಪಡೆ**ಕೊಠಡಿ ಹಂಚಿಕೆ, ವಾಸ್ತವ್ಯ ವೆಚ್ಚದಲ್ಲಿ ಅವ್ಯವಹಾರದ ಆರೋಪ; ತನಿಖೆಗೆ ಆಗ್ರಹ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಆಗ್ರಹ*ಜೈನ್ ಹೆರಿಟೇಜ್ ಶಾಲೆಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಪುರಸ್ಕಾರ; ಶಿಸ್ತು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಮಹಾಂತೇಶ ಹೊಸಪೇಟಿ ಕರೆ*ಮೋದಗಾದ ಸಿದ್ಧೇಶ್ವರ ನಗರದಲ್ಲಿ ಚನ್ನರಾಜ ಹಟ್ಟಿಹೊಳಿ ಅವರ 42ನೇ ಜನ್ಮದಿನ ಸಂಭ್ರಮ*