18 Nov 2026, 12:23:23 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

ಬೆಳಗಾವಿ-೩೦: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಸಮಾಜದ ಎಲ್ಲಾ ವರ್ಗದವರು ಒಗ್ಗೂಡಿ ಏಪ್ರಿಲ್ 14 ರಂದು ಪ್ರತಿವರ್ಷದಂತೆ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ  ನಡೆದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮಾರ್ಗಸೂಚಿ ಅನ್ವಯ ಜಯಂತಿ ಆಚರಿಸಬೇಕಿದೆ ಎಂದು ತಿಳಿಸಿದರು.
ಜಯಂತಿ ಕಾರ್ಯಕ್ರಮಕ್ಕೆ ಅವಶ್ಯವಿರುವ ಪೆಂಡಾಲ್, ಕಟೌಟ್, ಆಸನ, ಸ್ಟೇಜ್ ವ್ಯವಸ್ಥೆ, ಉದ್ಯಾನವನ ಸ್ವಚ್ಚತೆ, ಅಂಬೇಡ್ಕರ ರಸ್ತೆಗೆ ಲೈಟಿಂಗ್ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾನರ್ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ಉಪನ್ಯಾಸ ಕಾರ್ಯಕ್ರಮಕ್ಕೆ ಡಾ. ಬಾಬಾಸಾಹೇಬ್ ಅಂಬೇಡ್ಕರ ಅವರ ಜೀವನ ಚರಿತ್ರೆ, ಆದರ್ಶದ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ ಉಪನ್ಯಾಸಕರನ್ನು ಆಹ್ವಾನಿಸಬೇಕು. ಉಪನ್ಯಾಸದಲ್ಲಿ ಯಾವುದೇ ರೀತಿಯ ರಾಜಕೀಯ ಪ್ರೇರಿತ ಭಾಷಣ ಮಾಡಬಾರದು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಬೇಕು. ಶಿಕ್ಷಣ ಇಲಾಖೆಯ ವತಿಯಿಂದ ಚಿಕ್ಕೋಡಿ ಶೈಕ್ಷಣಿಕ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಹೇಳಿದರು.
ಮೆರವಣಿಗೆ ಕಾರ್ಯಕ್ರಮ:
ರೂಪಕ ವಾಹನಗಳ ಮೆರವಣಿಗೆಯು ಧರ್ಮವೀರ ಸಂಭಾಜಿ ವೃತ್ತದಿಂದ, ಕಿರ್ಲೋಸ್ಕರ್ ರಸ್ತೆ, ರಾಮದೇವ ಗಲ್ಲಿ , ಕಾಕತಿವೇಸ್, ಚನ್ನಮ್ಮ ವೃತ್ತದ ಮಾರ್ಗವಾಗಿ ಅಂಬೇಡ್ಕರ ಉದ್ಯಾನವನ ತಲುಪಲಿದೆ.
ಮೆರವಣಿಗೆಯಲ್ಲಿ ಭಾಗಿಯಾದವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದು ತಿಳಿಸಿದರು.
ಮೆರವಣಿಗೆಯಲ್ಲಿ ಸ್ಥಳೀಯ ಉತ್ತಮ ಕಲಾ ತಂಡಗಳನ್ನು ಒದಗಿಸುವುದರ ಜತೆಗೆ ಡಾ.ಅಂಬೇಡ್ಕರ್ ಜೀವನಸಾಧನೆ ಹಾಗೂ ಸಂವಿಧಾನ ಕುರಿತ ಪುಸ್ತಕಗಳ ಪ್ರದರ್ಶನ-ಮಾರಾಟ ಮಳಿಗೆ ಸ್ಥಾಪಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಶಿಸ್ತುಬದ್ಧ ಜಯಂತಿ ಆಚರಣೆ ಮಾಡುವುದರ ಮೂಲಕ ಜನರಿಗೆ ಜಯಂತಿಗಳು ಸ್ಪೂರ್ತಿದಾಯಕವಾಗಬೇಕು.
ಕೆಲವೆಡೆ ಡಿಜೆ ಗಳಲ್ಲಿ ಅಪಾಯಕಾರಿ ಲೇಸರ್ ಗಳನ್ನು ಬಳಕೆ ಮಾಡುತ್ತಿರುವದು ಕಂಡುಬರುತ್ತಿದೆ. ಇದರಿಂದ ಕಣ್ಣಿನ ಮೇಲೆ ಪರಿಣಾಮ ಬೀರಿ ಆಸ್ಪತ್ರಗೆ ದಾಖಲಾಗಿರುವ ಘಟನೆಗಳು ಕಂಡು ಬಂದಿವೆ ಆದ್ದರಿಂದ ಅಂತಹ ಅಪಾಯಕಾರಿ ಲೇಸರ್ ಬಳಕೆ ಮಾಡಬಾರದು ಎಂದರು.
ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳ ಭಾವಚಿತ್ರ ಬಳಕೆ‌ ಹಾಗೂ ರಾಜಕೀಯ ಭಾಷಣಗಳಿಗೆ ಅವಕಾಶವಿರುವುದಿಲ್ಲ. ವಿವಿಧ ಇಲಾಖೆಗಳ ರೂಪಕ ವಾಹನಗಳಲ್ಲಿ ಸರಕಾರಿ ಯೋಜನೆಗಳ ಪ್ರಚಾರ ಮಾಡುವಂತಿಲ್ಲ. ಆದ್ದರಿಂದ ಡಾ.ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಮಾತ್ರ ಸೀಮಿತವಾಗಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ನಗರದ ಸಾಮ್ರಾಟ್ ಅಶೋಕ ವೃತ್ತವನ್ನು ಸ್ವಚ್ಛಗೊಳಿಸಿ ಸೌಂದರ್ಯೀಕರಣಕ್ಕೆ ಕ್ರಮ‌ಕೈಗೊಳ್ಳಬೇಕು ಎಂದು ಮುಖಂಡರಾದ ಮಹಾದೇವ ತಳವಾರ ಮನವಿ ಮಾಡಿಕೊಂಡರು.
ನಗರದಲ್ಲಿ ಅಂಬೇಡ್ಕರ್ ಅವರ ಹೆಸರಿನ ರಸ್ತೆಯನ್ನು ಸಿವಿಲ್ ಆಸ್ಪತ್ರೆ ರಸ್ತೆ ಎಂದು ಕೆಲವು ಫಲಕಗಳಲ್ಲಿ ನಮೂದಿಸಲಾಗಿದೆ ಅವುಗಳನ್ನು ಕೂಡಲೇ ತೆರವುಗೊಳಿಸಿ ಅಂಬೇಡ್ಕರ್ ರಸ್ತೆ ಎಂದು ಸರಿಪಡಿಸುವ ಕೆಲಸವಾಗಬೇಕಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಮುಖಂಡರು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ದಲಿತ ಸಂಘಟನೆಗಳ ಮುಖಂಡ ಮಲ್ಲೇಶ್ ಚೌಗಲಾ ಅವರು, "ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ. ಜಯಂತಿ ಆಚರಣೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರು ಸಂವಿಧಾನ ಬರೆಯುವ ಮೂಲಕ ಸಮಾನತೆ ಸಾರಿದ ಮಹಾನ ನಾಯಕರಾಗಿದ್ದು, ಮುಂದಿನ ಪೀಳಿಗೆಗೆ ಅವರ ಇತಿಹಾಸ ತಿಳಿಸುವ ಜವಾಬ್ದಾರಿ ನಮ್ಮ ಮೇಲಿದೆ" ಎಂದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಂಬೇಡ್ಕರ್ ಅವರ ಜಯಂತಿಯನ್ನು ಕಳೆದ ಬಾರಿ ಆಚರಿಸಿದಂತೆ ನೀತಿಸಂಹಿತೆಯ ಚೌಕಟ್ಟಿನಲ್ಲಿ ಆಚರಿಸೋಣ. ಇದಕ್ಕೆ ಸಮಾಜ ಎಲ್ಲಾ ಬಾಂಧವರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಮಲ್ಲೇಶ ಚೌಗಲಾ ಹೇಳಿದರು.
ಸಭೆಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು, ಪ್ರತಿವರ್ಷದಂತೆ ಅಂಬೇಡ್ಕರ್ ಜಯಂತಿ ಆಚರಣೆಗೆ ಅವಕಾಶ ಕಲ್ಪಿಸುವುದರ ಜತೆಗೆ ಅಗತ್ಯ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಂವಿಧಾನ ಜಾಥಾ; ದ್ವಿತೀಯ ಸ್ಥಾನ:
ಜನವರಿ 26 ರಂದು ಆರಂಭಗೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಬೆಳಗಾವಿ ವಿಭಾಗಮಟ್ಟದಲ್ಲಿ ಬೆಳಗಾವಿ ಜಿಲ್ಲೆಗೆ ದ್ವಿತೀಯ ಬಹುಮಾನ ದೊರೆತಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಿಸಿದರು.
ಇದರೊಂದಿಗೆ ಜಿಲ್ಲೆಗೆ ಒಂದು ಲಕ್ಷ ರೂಪಾಯಿ ಬಹುಮಾನ‌ ಕೂಡ‌‌ ಬಂದಿರುತ್ತದೆ. ಇದಕ್ಕೆ ಶ್ರಮಿಸಿದ ಎಲ್ಲ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಲೋಕೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್. ಬಿ ಬಸರಗಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಯಲ್ಲಪ್ಪ ಹುದಲಿ, ಕರೆಪ್ಪ ಗುಡೆನ್ನವರ ಸೇರಿದಂತೆ ಮತ್ತಿತರು ಸಭೆಯಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ