18 Nov 2026, 12:22:18 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಾ. ಬಿ.ಆರ್. ಅಂಬೇಡ್ಕರ್ ಸಾಂಸ್ಕೃತಿಕ ಸಮುದಾಯ ಭವನ ನಿರ್ಮಾಣಕ್ಕೆ ಲಿಖಿತ ಭರವಸೆ: ಐದು ದಿನಗಳ ಅಹೋರಾತ್ರಿ ಧರಣಿಗೆ ಸ್ಪಂದಿಸಿದ ಮಹಾನಗರಪಾಲಿಕೆ ಆಯುಕ್ತರು

ಹುಬ್ಬಳ್ಳಿ-10: ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯ ವಾರ್ಡ್ ನಂ. 68ರ ಜೈ ಭೀಮ್ ನಗರದ ನಿವಾಸಿಗಳ ಬಹುವರ್ಷಗಳ ಬೇಡಿಕೆಯಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಸಾಂಸ್ಕೃತಿಕ ಸಮುದಾಯ ಭವನದ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ, ಕಳೆದ ಐದು ದಿನಗಳಿಂದ ಮಹಾನಗರಪಾಲಿಕೆಯ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿತ್ತು.

ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರ ಅನುದಾನದಡಿ ವಿವಿಧ ಕಾಮಗಾರಿಗಳಿಗಾಗಿ ಸುಮಾರು ₹8 ಲಕ್ಷ ಹಣ ಬಿಡುಗಡೆಯಾಗಿದ್ದರೂ, ಸಮುದಾಯ ಭವನದ ನಿರ್ಮಾಣ ಕಾಮಗಾರಿಗೆ ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಲು ಮಹಾನಗರಪಾಲಿಕೆ ಆಯುಕ್ತರಾದ ಡಾ. ರುದ್ರೇಶ್ ಗಾಳಿ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಅನುದಾನ ಬಿಡುಗಡೆಗೊಳಿಸಿ, ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭಿಸಬೇಕು ಎಂದು ಆಗ್ರಹಿಸಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮಹಾನಗರಪಾಲಿಕೆ ಆಯುಕ್ತರಾದ ಡಾ. ರುದ್ರೇಶ್ ಗಾಳಿ ಅವರು, ಕಾಮಗಾರಿಯನ್ನು ತಕ್ಷಣ ಆರಂಭಿಸುವುದಾಗಿ ಭರವಸೆ ನೀಡಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದರು. ಆದರೆ, ಕೇವಲ ಮೌಖಿಕ ಭರವಸೆಗೆ ಒಪ್ಪದ ಪ್ರತಿಭಟನಾಕಾರರು, ಆಯುಕ್ತರು ಲಿಖಿತ ಭರವಸೆ ನೀಡುವುದರ ಜೊತೆಗೆ ಕಾಮಗಾರಿಯನ್ನು ಇಂದೇ ಆರಂಭಿಸಬೇಕು ಎಂದು ಪಟ್ಟುಹಿಡಿದರು.

ಪ್ರತಿಭಟನಾಕಾರರ ಆಗ್ರಹಕ್ಕೆ ಸ್ಪಂದಿಸಿದ ಆಯುಕ್ತರು ಲಿಖಿತ ಭರವಸೆ ನೀಡಿದರು. ಅಲ್ಲದೆ, ಕಾಮಗಾರಿಯನ್ನು ಕೈಗೊಳ್ಳಬೇಕಾದ ಗುತ್ತಿಗೆದಾರರನ್ನು ಪ್ರತಿಭಟನಾ ಸ್ಥಳಕ್ಕೆ ಕರೆಸಿ, ಮಹಾನಗರಪಾಲಿಕೆಯ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ ತಕ್ಷಣ ಕಾಮಗಾರಿಯನ್ನು ಪ್ರಾರಂಭಿಸುವಂತೆ ಸೂಚಿಸಿದರು.

ಜೈ ಭೀಮ್ ನಗರದ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಸಾಂಸ್ಕೃತಿಕ ಸಮುದಾಯ ಭವನದ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಆಯುಕ್ತರು ಲಿಖಿತ ಭರವಸೆ ನೀಡಿರುವುದು ಹೋರಾಟದ ಮಹತ್ವದ ಬೆಳವಣಿಗೆಯಾಗಿದೆ. ಕಾಮಗಾರಿಯು ಯಾವುದೇ ವಿಳಂಬವಿಲ್ಲದೆ ಆರಂಭವಾಗಿ, ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.

ಈ ಸಂದರ್ಭದಲ್ಲಿ ಸಿದ್ಧಾರ್ಥ ಸೇವಾ ಸಂಘದ ಅಧ್ಯಕ್ಷರಾದ ವಿರುಪಾಕ್ಷಿ ಚಲವಾದಿ, ಕರ್ನಾಟಕ ದಲಿತ ವಿಮೋಚನಾ ಸಮಿತಿಯ ರಾಜ್ಯಾಧ್ಯಕ್ಷರಾದ ಸುರೇಶ್ ಖಾನಾಪುರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಂಚಪ್ಪ ಮಲ್ಲಮ್ಮನವರ, ಅಹಿಂದ ರಾಜ್ಯ ಉಪಾಧ್ಯಕ್ಷರಾದ ಆನಂದ್ ಪೂಜಾರಿ, ಜೈ ಭೀಮ್ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಬಸಂತಕುಮಾರ ಅನಂತಪುರ, ಗುರುನಾಥ್ ಕ್ವಾಟಿ, ಕೋಟೇಶ ಬುಳ್ಳಾಪೂರ, ರುದ್ರವ್ವ ಚಲವಾದಿ, ಸಿದ್ದವ್ವ ಚೂರಿ, ಶರಣವ್ವ ಚಲವಾದಿ, ರೇಣವ್ವ ಕಾಳೆ, ಸುರೇಶ್ ಗೋಕಾಕ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಧರಣಿ ಹೋರಾಟಕ್ಕೆ ಬೆಂಬಲ ಸೂಚಿಸಲು ಆಗಮಿಸಿದ ಬಿಜೆಪಿ ಪಕ್ಷದ ಮುಖಂಡರಾದ ಶ್ರೀ ನಾರಾಯಣ ಜರತಾರಘರ್, ಪ್ರಭು ನವಲಗುಂದಮಠ, ಮಹೇಂದ್ರ ಕೌತಾಳ, ಮಂಜುನಾಥ ಕೊಂಡಪಲ್ಲಿ, ಅಶೋಕ ವಾಲ್ಮೀಕಿ, ಜಗದೀಶ ಬುಳ್ಳನ್ನವರ, ಸಂತೋಷ ಅರಕೇರಿ, ವೆಂಕಟೇಶ್ ಕಾಟವೆ, ಸಾಯಿನಾಥ ದಲಭಂಜನ, ಚನ್ನಪ್ಪ ಕಾಳೆಯವರ, ಅಣ್ಣಪ್ಪ ಬಂಡಿವಡ್ಡರ, ಸಹದೇವ ಅಮ್ಮಿನಭಾವಿ ಹಾಗೂ ವೆಂಕಟೇಶ್ ಚಚಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ