18 Nov 2026, 12:40:32 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಧರ್ಮಸ್ಥಳ ಇಡಿ ಭಾರತದ ಶ್ರೀ ಕ್ಷೇತ್ರ : ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಲ್ಲದು- ಡಾ.ಪ್ರಭಾಕರ ಕೋರೆ

ಬೆಳಗಾವಿ*19: ಶ್ರೀ ಕ್ಷೇತ್ರ ಧರ್ಮಸ್ಥಳ ಇದು ಕೇವಲ ಒಂದು ಜಾತಿ,ಒಂದು ವರ್ಗಕ್ಕೆ , ಒಂದು ಭಾಷೆ, ಒಂದು ಸಮುದಾಯಕ್ಕೆ ಸೇರಿದ ಕ್ಷೇತ್ರವಲ್ಲ . ಈ ಕ್ಷೇತ್ರ ಇಡಿ ಭಾರತ ದೇಶದ ಧಾರ್ಮಿಕ ಕ್ಷೇತ್ರವಾಗಿದ್ದು, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಲ್ಲದು. ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆ.ಎಲ್.ಇ.ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಇಂದಿಲ್ಲಿ ಸರಕಾರವನ್ನು ಆಗ್ರಹಿಸಿದರು.
ಬೆಳಗಾವಿಯಲ್ಲಿಂದು ಕ್ಷೇತ್ರದ ಬಗ್ಗೆ ಕಳಂಕ ತರುವ ವ್ಯಕ್ತಿಗಳು ನಿರಾಧಾರ ಆರೋಪಗಳನ್ನು ಮಾಡುತ್ತಿದ್ದು, ಅಂತಹ ವ್ಯಕ್ತಿಗಳನ್ನು ತೀವ್ರ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಮಂಗಳವಾರ ಬೆಳಗಾವಿಯಲ್ಲಿ ಹಿಂದೂ ಸಂಘಟನೆಗಳ ವತಿಯಿಂದ ಬೃಹತ್ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ ಕೊನೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸುವ ಸಂದರ್ಭದಲ್ಲಿ ಡಾ.ಪ್ರಭಾಕರ ಕೋರೆ ಅವರು ಮಾತನಾಡುತ್ತಿದ್ದರು.
ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಸರಕಾರ ಸ್ಪಂಧಿಸುವ ಮೂಲಕ ತನಿಖೆಗಾಗಿ ಎಸ್.ಐ.ಟಿ. ತಂಡವನ್ನು ರಚಿಸಿತ್ತು. ಆದರೆ ಈ ಎಸ್.ಐ.ಟಿ ತಂಡ ನಡೆಸಿದ ತನಿಖೆಯಲ್ಲಿ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ. ಹೀಗಾಗಿ ಕ್ಷೇತ್ರಕ್ಕೆ ಕಳಂಕ ತರುವ ವ್ಯಕ್ತಿಗಳು ಮಾಡಿರುವ ಆರೋಪಗಳುs ಸುಳ್ಳಾಗಿದ್ದು, ಇದೊಂದು ಹಿಂದೂ ಧಾರ್ಮಿಕ ಕ್ಷೇತ್ರವನ್ನು ಹತ್ತಿಕ್ಕುವ ಕುತಂತ್ರ ನಡೆಯುತ್ತಿದೆ. ಅದಕ್ಕಾಗಿ ಈ ಘಟನೆಯ ಹಿಂದೆ ಯಾರಿದ್ದಾರೋ ಅವರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಗುರುಶಾಂತೇಶ್ವರ ಹಿರೇಮಠ, ಹುಕ್ಕೇರಿ. ಇವರು ಮಾತನಾಡಿ, ಧರ್ಮಸ್ಥಳ ಕ್ಷೇತ್ರ ಹಿಂದೂ ಸಮಾಜವನ್ನು ಒಗ್ಗುಡಿಸುವ ಕ್ಷೇತ್ರವಾಗಿದೆ. ಈ ಕ್ಷೇತ್ರದಿಂದ ಇಂದು ಅನೇಕ ಸಮಾಜಮುಖೀ ಕಾರ್ಯಗಳು ನಡೆದಿವೆ. ರೈತರಿಗೆ ಅನಕೂಲವಾಗುವಂತಹ ಕಾರ್ಯಕ್ರಮಗಳು ನಡೆಯುತ್ತÀ ಬಂದಿವೆ. ನಿರಂತರ ಅನ್ನ ದಾಸೋಹದ ಮೂಲಕ ತನ್ನ ಸಾಮಾಜಿಕ ಸೇವೆಯನ್ನು ಮುಂದುವರೆಸಿಕೊAಡ ಬಂದ ಡಾ. ವಿರೇಂದ್ರ ಹೆಗ್ಗಡೆ ಅವರ ಕುಟುಂಬದವರನ್ನು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ನಾವೆಲ್ಲ ತಡೆಯಬೇಕಾಗಿದೆ. ಸರಕಾರ ಕೂಡಲೆ ಎಚ್ಚತ್ತುಕೊಂಡು ಕ್ಷೇತ್ರದ ವಿರುದ್ದ ಪಿತೂರಿ ನಡೆಸುತ್ತಿರುವ ಬಗ್ಗೆ ತೀವ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ ಅವರು , ಮುಂಬರುವ ದಿನಗಳಲ್ಲಿ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆದರೆ ಸಹಿಸುವುದಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಶಾಸಕ ಅಭಯ ಪಾಟೀಲ, ಮಾಜಿ ವಿಧಾನ ಪರಿಷತ ಸದಸ್ಯ ಮಹಾಂತೇಶ ಕವಟಗಿಮಠ , ಮಾಜಿ ಸಚಿವ ಅನಿಲ ಬೆನಕೆ, ಮಹಾಂತೇಶ ದೊಡಗೌಡರ, ಜಗದೀಶ ಹಿರೇಮಣಿ, ಅವರುಗಳು ಮಾತನಾಡಿ, ಅನಾಮಿಕ ಹೆಸರಿನಲ್ಲಿ ಓರ್ವ ವ್ಯಕ್ತಿ ಶ್ರೀ ಕ್ಷೇತ್ರದ ವಿರುದ್ದ ಅಪಪ್ರಚಾರ ಮಾಡುತ್ತಿರುವುದು ಖಂಡನೀಯವಾಗಿದೆ. ಆ ವ್ಯಕ್ತಿ ಯಾರು, ಯಾರ ಕುಮ್ಮಕ್ಕಿನಿಂದ ಅವನು ಈ ಕಾರ್ಯಕ್ಕೆ ಕೈ ಹಾಕಿದ್ದಾನೆ. ಎಲ್ಲ ಸತ್ಯಾಂಶ ಹೊರ ಬರಬೇಕಾಗಿದೆ. ಅನಾಮಿಕ ವ್ಯಕ್ತಿಯನ್ನು ಮಂಪರು ಪರೀಕ್ಷೇಗೆ ಒಳಪಡಿಸಿ ಸತ್ಯವನ್ನು ಬಯಲಿಗೆಳೆಯಬೇಕಾಗಿದೆ. ಸರಕಾರ ಈ ಕುರಿತು ಗಂಭೀರವಾಗಿ ಆಲೋಚನೆ ಮಾಡಬೇಕು. ಇಲ್ಲದಿದ್ದಲ್ಲಿ ಹಿಂದೂ ಸಮಾಜದ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಬೇಕಾದಿತು. ಎಂದು ಎಚ್ಚರಿಕೆ ನೀಡಲಾಯಿತು. ತದನಂತರ ಜಿಲ್ಲಾಧಿಕಾರಿ ಮಹ್ಮದ ರೋಷನ ಅವರಿಗೆ ಎಲ್ಲ ಮಠಾಧೀಶರ ಸಮ್ಮುಖದಲ್ಲಿ ರಾಷ್ಟçಪತಿಗಳಿಗೆ ಮನವಿ ಅರ್ಪಿಸಲಾಯಿತು.
ಮೌನ ಮೆರವಣೀಗೆಯು ಮಂಗಳವಾರ ೧೨ ಗಂಟೆಗೆ ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಿಂದ ಪ್ರಾರಂಭಗೊAಡು ಕಿರ್ಲೋಸ್ಕರ ರಸ್ತೆ, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಕಾಕತಿವೇಸ , ರಾಣೀ ಚೆನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಅಲ್ಲಿ ಮನವಿಯನ್ನು ಅರ್ಪಿಸಲಾಯಿತು. ಇಂದಿನ ಪ್ರತಿಭಟನೆಯಲ್ಲಿ ಸುಮಾರು ೨೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಈ ಪ್ರತಿಭಟನೆಯಲ್ಲಿ ಪರಮಪೂಜ್ಯ ಶ್ರೀ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಸಿದ್ಧಸಂಸ್ಥಾನ ಮಠ, ನಿಡಸೋಸಿ. ಪರಮಪೂಜ್ಯ ಶ್ರೀ ಸಂಪಾದನಾ ಮಹಾಸ್ವಾಮಿಗಳು, ಸಂಪಾದನಾ ಚರಮೂರ್ತಿಮಠ, ಚಿಕ್ಕೋಡಿ. .ಪರಮಪೂಜ್ಯಶ್ರೀ ನೀಲಕಂಠ ಮಹಾಸ್ವಾಮಿಗಳು ಮಹಾಂತದುರದುAಡೇಶ್ವರ ಮಠ, ಮುರಗೋಡ. ಪರಮಪೂಜ್ಯಶ್ರೀ ಪ್ರಭುನೀಲಕಂಠ ಮಹಾಸ್ವಾಮಿಗಳು, ಮೂರುಸಾವಿರ ಮಠ, ಬೈಲಹೊಂಗಲ. ಪರಮಪೂಜ್ಯಶ್ರೀ ಗಂಗಾಧರ ಮಹಾಸ್ವಾಮಿಗಳು, ಮಡಿವಾಳೇಶ್ವರ ಮಠ, ಹೊಸೂರ..ಪರಮಪೂಜ್ಯಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಸೋಮಶೇಖರ ಮಠ, ಮುನವಳ್ಳಿ. ಪರಮಪೂಜ್ಯಶ್ರೀ ಶಿವಸೋಮೇಶ್ವರ ಶಿವಾಚಾರ್ಯರು, ಮುಕ್ತಿಮಠ, ಭೂತರಾಮನಹಟ್ಟಿ ,ಪರಮಪೂಜ್ಯ ಶಿವಾನಂದ ಭಾರತಿ ಮಹಾಸ್ವಾಮಿಗಳು, ಸಾಧುಸಂಸ್ಥಾನಮಠ, ಇಂಚಲ. ಪರಮಪೂಜ್ಯ ಶಿವಪುತ್ರ ಮಹಾಸ್ವಾಮಿಗಳು, ಸಿದ್ಧಾರೂಢಮಠ, ಚಿಕ್ಕಮುನವಳ್ಳಿ. ಪರಮಪೂಜ್ಯಶ್ರೀ ಶಿವಮೂರ್ತಿ ಸ್ವಾಮಿಜೀ ಆರಳಿಕಟ್ಟಿ, ಪರಮಪೂಜ್ಯಶ್ರೀ ರುದ್ರಕೇಸರಿಮಠ ಸ್ವಾಮೀಜಿ ಹಿಂಡಲಗಾ, ಪರಮಪೂಜ್ಯಶ್ರೀ ಶಿವಾನಂದಶಾವಾಚಾರ್ಯ ಸ್ವಾಮೀಜಿ ಮುತ್ನಾಳ, ಪರಮಪೂಜ್ಯಶ್ರೀ ಶಿವನಾಂದ ಸ್ವಾಮೀಜಿ ನಿಲಜಗಿ, ಪರಮಪೂಜ್ಯಶ್ರೀ ಬಡೆಕೊಳ್ಳಮಠ , ಪರಮಪೂಜ್ಯಶ್ರೀ ಚಂದ್ರಶೇಖರ ಸಾಮೀಜಿ ಹುಕೇರಿಮಠ , ವಿನಾಯಕ ನಗರ, ಹಿಂಡಲಗಾ ಹಾಗೂ ಇನ್ನಿತರ ಸ್ವಾಮೀಜಿಗಳ ಸಾನಿಧ್ಯದಲ್ಲಿ ಈ ಮೌನ ಪ್ರತಿಭಟನೆ ನಡೆಯಿತು.
ಅ ಮಾಜಿ ಶಾಸಕ ಸಂಜಯ ಪಾಟೀಲ, ಡಾ.ರವಿ ಪಾಟೀಲ ,ಮುರುಘೇಂದ್ರ ಪಾಟೀಲ,ಗುರು ಮೆಟಗುಡ್ಡ, ಹಿರಿಯ ನ್ಯಾಯವಾದಿ ರವಿರಾಜ ಪಾಟೀಲ,ಭರತೇಶ ಶಿಕ್ಷಣ ಸಂಸ್ಥೆಯ ವಿನೋದ ದೊಡ್ಡಣ್ಣವರ, ಕೆ.ಜೆ.ಎ.ಉಪಾಧ್ಯಕ್ಷ ಶೀತಲU್ಷಡಾ ಪಾಟೀಲ, ಪ್ರಮೋದ ಕೋಚೇರಿ ,ಎಂ.ಬಿ.ಝೀರಲಿ, ಬಿಜೆಪಿ ಜಿಲಾಧ್ಯಕ್ಷ ಸುಭಾಷ ಪಾಟೀಲ ಸೇರಿದಂತೆ ಇನ್ನಿತರ ಸಮಾಜದ ಮುಖಂಡರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ