18 Nov 2026, 12:13:07 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Belagavi | Entertainment News

ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ

ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ

ಬೆಳಗಾವಿ-17: ಹಬ್ಬಗಳ ಸಂಭ್ರಮವಿರಲಿ, ರೈತರ ಹೋರಾಟದ ಒತ್ತಡವಿರಲಿ, ಸೂಕ್ಷ್ಮ ಸಂದರ್ಭಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಶ್ರಮಿಸಿದ್ದಾರೆ. ಸಾರ್ವಜನಿಕರು ಸಹಕರಿಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ನಡೆದ ಘಟನೆಗಳನ್ನು ಅತಿರಂಜಿತಗೊಳಿಸದೆ, ವಸ್ತುನಿಷ್ಠವಾಗಿ ವರದಿ ಮಾಡಿದ ಬೆಳಗಾವಿಯ ಪತ್ರಕರ್ತರೂ ಜಿಲ್ಲೆಯ ಶಾಂತಿ ಕಾಪಾಡುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ನಾಗನೂರಿನ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳಗಾವಿ ಪತ್ರಕರ್ತರ ಸಂಘವು ನಾಗನೂರಿನ ರುದ್ರಾಕ್ಷಿಮಠದ ಸಹಯೋಗದಲ್ಲಿ ಶಿವಬಸವನಗರದ ಎಸ್‌ಜಿಬಿಐಟಿ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ‘ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಬೆಳಗಾವಿ ಅತ್ಯಂತ ಸೂಕ್ಷ್ಮ ಜಿಲ್ಲೆಯಾಗಿದ್ದರೂ ಕಳೆದ ಆರು ತಿಂಗಳ ಅವಧಿಯಲ್ಲಿ ರೈತ ಹೋರಾಟಗಳು, ಹಬ್ಬ-ಹರಿದಿನಗಳು ಸೇರಿದಂತೆ ಹಲವು ಮಹತ್ವದ ಸಂದರ್ಭಗಳಲ್ಲಿ ಪೊಲೀಸರು ಸಮರ್ಥವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಂತಹ ಅಧಿಕಾರಿಗಳ ಕಾರ್ಯವನ್ನು ಗುರುತಿಸಿ ಗೌರವಿಸುವುದು ಅಭಿನಂದನೀಯ. ಸಾಮಾನ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಾತ್ರ ಚರ್ಚೆಯಾಗುತ್ತದೆ. ಆದರೆ ಅದರ ಹಿಂದೆ ಶ್ರಮಿಸುವ ಅಧಿಕಾರಿಗಳನ್ನು ಅಭಿನಂದಿಸುವ ಕೆಲಸವೂ ನಡೆಯಬೇಕು ಎಂದರು.
ಸರ್ಕಾರಿ ಅಧಿಕಾರಿಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. ಅವರ ಕರ್ತವ್ಯದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಿದರೆ ಆಡಳಿತ ನಿರ್ವಹಣೆ ಕಷ್ಟವಾಗುತ್ತದೆ. ಬೆಳಗಾವಿಯ ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಕಾರ್ಯಸ್ವಾತಂತ್ರ್ಯ ನೀಡುತ್ತಿರುವುದು ಹಾಗೂ ಸಾರ್ವಜನಿಕರು, ಸಂಘಟನೆಗಳು ಸಹಕಾರ ನೀಡುತ್ತಿರುವುದು ಜಿಲ್ಲೆಯ ವಿಶೇಷತೆ. ಇಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಬೆಳಗಾವಿ ಜಿಲ್ಲೆಯ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿರುವುದಕ್ಕೆ ಇದೇ ಕಾರಣ ಎಂದು ಹೇಳಿದರು.
ಪತ್ರಕರ್ತರ ಜವಾಬ್ದಾರಿ ಕೂಡ ಮಹತ್ವದ್ದಾಗಿದೆ. ಒಂದು ಸಣ್ಣ ಲೋಪವನ್ನು ದೊಡ್ಡದಾಗಿ ಬಿಂಬಿಸಿದರೆ ಅದು ವಿವಾದಕ್ಕೆ ಕಾರಣವಾಗಬಹುದು. ಆದರೆ ಬೆಳಗಾವಿಯ ಪತ್ರಕರ್ತರು ಘಟನೆಗಳನ್ನು ಸಮತೋಲನದಿಂದ, ವಸ್ತುನಿಷ್ಠವಾಗಿ ಜನರ ಮುಂದಿಡುತ್ತಿದ್ದಾರೆ. ಅನಗತ್ಯ ಅತಿಶಯೋಕ್ತಿ ಮತ್ತು ನಕಾರಾತ್ಮಕ ವರದಿಗಾರಿಕೆಯಿಂದ ದೂರವಿದ್ದು, ಜನರ ಭಾವನೆಗಳನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಜಿಲ್ಲೆಯ ಶಾಂತಿ ಮತ್ತು ಸೌಹಾರ್ದತೆಗೆ ಪೂರಕವಾಗಿದೆ ಎಂದರು.
ಪತ್ರಕರ್ತರ ಕುಟುಂಬದವರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ತಂದೆ-ತಾಯಿಗಳು ತಮ್ಮ ನಡೆ-ನುಡಿಯ ಮೂಲಕ ಮಕ್ಕಳಿಗೆ ಆದರ್ಶವಾಗಬೇಕು. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಬದುಕಬೇಕು ಎಂದು ಕಿವಿಮಾತು ಹೇಳಿದರು.
ಹೋರಾಟದ ವರದಿಯಲ್ಲಿ ಪೊಲೀಸರ ಶ್ರಮವೂ ಕಾಣಿಸಿತು
ಕಬ್ಬು ಬೆಳೆಗಾರರ ಹೋರಾಟದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಹಲವು ದಿನಗಳ ಕಾಲ ನಿರಂತರವಾಗಿ ಕರ್ತವ್ಯ ನಿರ್ವಹಿಸಿದ್ದರು. ಹಬ್ಬದ ದಿನಗಳಲ್ಲಿಯೂ ಮನೆಗೆ ತೆರಳದೆ ಕೆಲಸ ಮಾಡಿದ್ದ ಸಿಬ್ಬಂದಿಯ ಶ್ರಮವನ್ನು ಮಾಧ್ಯಮಗಳ ಮೂಲಕ ಜನರು ಗಮನಿಸಿದರು. ತಮ್ಮ ಕೆಲಸದ ಬಗ್ಗೆಯೂ ಜನರು ಮಾತನಾಡುತ್ತಿದ್ದಾರೆ ಎಂಬ ಅರಿವು ಸಿಬ್ಬಂದಿಗೆ ಆಗ ದೊರೆಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೆನಪಿಸಿಕೊಂಡರು.
ಹೋರಾಟದ ಸ್ಥಳದ ವಿದ್ಯಮಾನಗಳನ್ನು ಜನರಿಗೆ ತಲುಪಿಸುವುದರ ಜತೆಗೆ, ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಶ್ರಮಕ್ಕೂ ಪತ್ರಕರ್ತರು ತಮ್ಮ ವರದಿಗಳಲ್ಲಿ ಜಾಗ ನೀಡಿದ್ದರು. ಪತ್ರಕರ್ತರು ತೋರಿದ ವೃತ್ತಿಪರತೆ ಶ್ಲಾಘನೀಯ ಎಂದರು.
ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕ ಸಂದೀಪ ಪಾಟೀಲ ಮಾತನಾಡಿ, ಬೆಳಗಾವಿಯ ಮಾಧ್ಯಮದವರ ಸಹಕಾರವನ್ನು ಮೆಚ್ಚಿದರು. ಸಾಮಾನ್ಯವಾಗಿ ಸುದ್ದಿಗೋಷ್ಠಿ ಹಾಗೂ ಕರ್ತವ್ಯದ ಸಂದರ್ಭದಲ್ಲಿ ಪತ್ರಕರ್ತರನ್ನು ಭೇಟಿಯಾಗುತ್ತಿದ್ದೆವು. ಆದರೆ ಈ ಕಾರ್ಯಕ್ರಮದಲ್ಲಿ ಅವರ ಕುಟುಂಬದವರನ್ನೂ ಒಂದೇ ವೇದಿಕೆಯಲ್ಲಿ ಭೇಟಿಯಾಗುವ ಅವಕಾಶ ದೊರೆತಿರುವುದು ಸಂತಸ ತಂದಿದೆ ಎಂದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ ಮಾತನಾಡಿ, ಬಾಲ್ಯದಲ್ಲಿ ತಮ್ಮ ಹಳ್ಳಿಗೆ ಒಂದೆರಡು ಪತ್ರಿಕೆಗಳು ಬರುತ್ತಿದ್ದವು. ಪತ್ರಿಕೆ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದೆವು. ಕೈಗೆ ಸಿಕ್ಕ ತಕ್ಷಣ ಜಿಲ್ಲೆ ಹಾಗೂ ರಾಜ್ಯದ ವಿದ್ಯಮಾನಗಳನ್ನು ಕುತೂಹಲದಿಂದ ಓದುತ್ತಿದ್ದೆವು. ಆಗ ಸುತ್ತಲಿನ ಬೆಳವಣಿಗೆಗಳನ್ನು ತಿಳಿದುಕೊಳ್ಳಲು ಪತ್ರಿಕೆಗಳೇ ಪ್ರಮುಖ ಮಾಧ್ಯಮವಾಗಿದ್ದವು. ಡಿಜಿಟಲ್ ಮಾಧ್ಯಮಗಳ ಬೆಳವಣಿಗೆಯೊಂದಿಗೆ ಸುದ್ದಿ ತಲುಪುವ ವಿಧಾನ ಮತ್ತು ಓದುವ ಅಭ್ಯಾಸದಲ್ಲೂ ಬದಲಾವಣೆಯಾಗಿದೆ ಎಂದರು.
ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ವಿಲಾಸ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ವೃತ್ತಿಜೀವನದ ಒತ್ತಡ, ಸಮಯದ ಅನಿಶ್ಚಿತತೆ ನಡುವೆಯೂ ಕುಟುಂಬಗಳು ನೀಡುವ ಬೆಂಬಲವನ್ನು ಗೌರವಿಸುವುದು ಕಾರ್ಯಕ್ರಮದ ಪ್ರಮುಖ ಆಶಯವಾಗಿತ್ತು. ಪತ್ರಕರ್ತರ ಕುಟುಂಬಗಳಲ್ಲಿರುವ ಗಾಯನ ಹಾಗೂ ಇತರ ಕಲಾಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರೀಯ ಪತ್ರಿಕಾ ದಿನದ ಶುಭಾಶಯ ಕೋರಿ, ಸನ್ಮಾನಿತರನ್ನು ಅಭಿನಂದಿಸಲಾಯಿತು. ಸಹಯೋಗ ನೀಡಿದ ನಾಗನೂರಿನ ರುದ್ರಾಕ್ಷಿಮಠಕ್ಕೆ ಕೃತಜ್ಞತೆ ಸಲ್ಲಿಸಲಾಯಿತು. ಜಿಪಂ ಸಿಇಒ ರಾಹುಲ ಶಿಂಧೆ, ಡಿಸಿಪಿ ಎನ್‌.ವಿ.ಬರಮನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರ ಗೃಹಸಚಿವರ ಪದಕ ಪುರಸ್ಕೃತ ಮಾಳಮಾರುತಿ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಬಿ.ಆರ್‌. ಗಡ್ಡೇಕರ ಅವರನ್ನು ಸನ್ಮಾನಿಸಲಾಯಿತು.
ಸಂತೋಷ ಚಿನಗುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶೇಖರ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಸುನೀತಾ ದೇಸಾಯಿ ಸ್ವಾಗತಿಸಿದರು. ಸುರೇಶ ನೇರ್ಲಿ ವಂದಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತರು ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದರು. ಸನ್ಮಾನ ಕಾರ್ಯಕ್ರಮದ ಬಳಿಕ ನಡೆದ ಸಂಗೀತ ಸಂಜೆಯಲ್ಲಿ ಪತ್ರಕರ್ತರ ಕುಟುಂಬದ ಸದಸ್ಯರು ತಮ್ಮ ಗಾಯನ ಹಾಗೂ ಕಲಾಪ್ರತಿಭೆಗಳನ್ನು  ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಿದರು.

Author
Vishwanath Desai
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ