18 Nov 2026, 12:45:22 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೋಕಾಕ: ಪ್ರವಾಹ‌ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ-05: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು.

ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.
ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

ಇದಾದ‌ ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಮಳೆಯಿಂದ‌ ಉಂಟಾಗಿರುವ ಹಾನಿಯನ್ನು ವಿವರಿಸಿದರು.
ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ ಎಂದು‌ ಸಚಿವ ಸತೀಶ್ ಜಾರಕಿಹೊಳಿ‌ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕಾಳಜಿ ಕೇಂದ್ರಕ್ಕೆ‌ ಭೇಟಿ:

ಮುಳಗಡೆಯಿಂದ ಸಂತ್ರಸ್ತರಗೊಂಡಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ‌ ನಗರದ ಸರಕಾರಿ ಮುನ್ಸಿಪಲ್‌ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ‌ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಭೇಟಿ ನೀಡಿ, ಸಂತ್ರಸ್ತರ‌ ಜತೆ‌ ಚರ್ಚಿಸಿದರು.

ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ ಎಂದು ಸಂತ್ರಸ್ತ ಕುಟುಂಬವರು ಸಮಾಧಾನ ವ್ಯಕ್ತಪಡಿಸಿದರು.

ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ