18 Nov 2026, 12:41:58 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ರಿಸರ್ಚ್ ನಲ್ಲಿ ‘ಶುಭಾರಂಭ 2K26’: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ಮೊಬೈಲ್‌ಗಳ ಅತಿಯಾದ ಬಳಕೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ: ಸ್ವಾಮಿ ಮೋಕ್ಷಾತ್ಮಾನಂದಾಜಿ

ಬೆಳಗಾವಿ:08 ಮೊಬೈಲ್ ಫೋನ್‌ಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಬೇಕೇ ಹೊರತು ಅವರ ಸಮಯ ಮತ್ತು ಏಕಾಗ್ರತೆಯನ್ನು ಕಸಿದುಕೊಳ್ಳುವ ಸಾಧನವಾಗಬಾರದು. ಮೊಬೈಲ್‌ಗಳ ಅತಿಯಾದ ಬಳಕೆ ಹಾಗೂ ದುರ್ಬಳಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ವೈಯಕ್ತಿಕ ಬೆಳವಣಿಗೆಗೆ ಹಿನ್ನಡೆಯಾಗಬಹುದು ಎಂದು ಸ್ವಾಮಿ ಮೋಕ್ಷಾತ್ಮಾನಂದಾಜಿ ಮಹಾರಾಜ್ ಅವರು ಹೇಳಿದರು.

ಉದ್ಯಮಬಾಗ್‌ನ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ರಿಸರ್ಚ್ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಶುಭಾರಂಭ 2K26’ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನ ಇಂದಿನ ಜೀವನದ ಅವಿಭಾಜ್ಯ ಅಂಗವಾಗಿದ್ದು, ಅದರ ಸದುಪಯೋಗದಿಂದ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು. ಆದರೆ ಮೊಬೈಲ್‌ಗಳ ಮೇಲಿನ ಅತಿಯಾದ ಅವಲಂಬನೆ ವಿದ್ಯಾರ್ಥಿಗಳ ಏಕಾಗ್ರತೆ, ಸಮಯ ನಿರ್ವಹಣೆ ಹಾಗೂ ಅಧ್ಯಯನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಮಿತಿ ಹಾಕಿಕೊಂಡು, ಅದನ್ನು ಶಿಕ್ಷಣ, ಜ್ಞಾನಾರ್ಜನೆ ಹಾಗೂ ವೈಯಕ್ತಿಕ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹೆಸರಾಂತ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ರಿಸರ್ಚ್ ಕಾಲೇಜನಲ್ಲಿ ನಿಮಗೆ ಪ್ರವೇಶ ಸಿಕ್ಕಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಗುರಿಗಳನ್ನು ಸ್ಪಷ್ಟವಾಗಿ ರೂಪಿಸಿಕೊಂಡು, ಸಮಯದ ಮೌಲ್ಯ ಅರಿತುಕೊಂಡು, ತಂತ್ರಜ್ಞಾನವನ್ನು ತಮ್ಮ ಬೆಳವಣಿಗೆಗೆ ಪೂರಕವಾಗಿ ಬಳಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ರಿಸರ್ಚ್ ಪ್ರಾಂಶುಪಾಲರು ಹಾಗೂ ನಿರ್ದೇಶಕರಾದ ಡಾ. ಎಸ್.ವಿ. ಗೋರಬಾಳ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಏಕಾಗ್ರತೆ ಹಾಗೂ ಜವಾಬ್ದಾರಿಯುತ ಮನೋಭಾವ ಬೆಳೆಸಿಕೊಂಡು ನಿರಂತರ ಕಲಿಕೆಗೆ ಆದ್ಯತೆ ನೀಡಬೇಕು. ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬೆಂಬಲವಾಗಿ ನಿಂತು, ಅವರ ಭವಿಷ್ಯ ರೂಪಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿಪರ ಯಶಸ್ಸಿನಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಹೊಸದಾಗಿ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಸದುಪಯೋಗಪಡಿಸಿಕೊಂಡು ತಮ್ಮ ಗುರಿ ಸಾಧನೆಗೆ ನಿರಂತರವಾಗಿ ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.

ಪ್ರೊ. ಚೈತನ್ಯ ಕೆ. ಜಂಬೋಟ್ಕರ್ ಮಾತನಾಡಿ, ಇಂಜಿನಿಯರಿಂಗ್ ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳು ಶಿಸ್ತು, ಜವಾಬ್ದಾರಿ ಹಾಗೂ ಶೈಕ್ಷಣಿಕ ಅವಕಾಶಗಳ ಕುರಿತು ಸ್ಪಷ್ಟ ಅರಿವು ಹೊಂದಿರಬೇಕು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಇಂಜಿನಿಯರಿಂಗ್ ವ್ಯಾಸಂಗದಲ್ಲಿ ಟಾಪರ್ ಆಗುವುದು ಮಾತ್ರವಲ್ಲದೆ, ಪೋಷಕರು ಕಲಿಸುವ ಸಂಸ್ಕಾರ ಮತ್ತು ಮೌಲ್ಯಗಳು ಅವರ ಜೀವನಕ್ಕೆ ದಾರಿದೀಪವಾಗಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಪೋಷಕರ ಜವಾಬ್ದಾರಿಯಾಗಿದೆ ಎಂದರು.

ವಿದ್ಯಾರ್ಥಿಗಳಾದ ಜಯಶಿವರಾಯ್ ಬಿ. ಹಾಗೂ ಸಾಕ್ಷಿ ಕಿತ್ತೂರ್ಕರ್ ಮಾತನಾಡಿ, JCERನ ಶೈಕ್ಷಣಿಕ ವಾತಾವರಣ, ಶಿಸ್ತುಬದ್ಧ ಸಂಸ್ಕೃತಿ ಹಾಗೂ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಕಲಿಕಾ ಸೌಲಭ್ಯಗಳ ಕುರಿತು ತಮ್ಮ ಅನುಭವ ಹಂಚಿಕೊಂಡರು. ಗುಣಮಟ್ಟದ ಶಿಕ್ಷಣ ಹಾಗೂ ನಿರಂತರ ಮಾರ್ಗದರ್ಶನ ನೀಡುತ್ತಿರುವ ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.

‘ಶುಭಾರಂಭ 2K26’ ಕಾರ್ಯಕ್ರಮವು ಪ್ರಥಮ ವರ್ಷದ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಶಿಕ್ಷಣದ ಪಯಣಕ್ಕೆ ಅರ್ಥಪೂರ್ಣ ಆರಂಭ ನೀಡುವ ಮೂಲಕ, ಶೈಕ್ಷಣಿಕ ಶಿಸ್ತು, ಸಂಸ್ಕಾರ, ಜವಾಬ್ದಾರಿ ಹಾಗೂ ಭವಿಷ್ಯದ ಗುರಿಗಳ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪ್ರೊ. ಜಸ್ಮಿತ್ ಚರಂತಿಮಠ ಅವರು ಸ್ವಾಗತಿಸಿದರು. ಡಾ. ವಿರೂಪಾಕ್ಷ ಬಿ. ದಲಾಲ್ , ಡಾ. ಪ್ರಕಾಶ ಸೋನವಾಲ್ಕರ್‌ , ಕರ್ನಲ್ ಜಾನಿ, ಪ್ರೊ ಜಿ.ಎಸ್ .ಪಾಟೀಲ್, ಪ್ರೊ. ಪ್ರಿಯದರ್ಶಿನ್ ಉದಪುಡಿ ಹಾಗೂ ಗಣ್ಯರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ