18 Nov 2026, 12:21:40 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜೆಡಿಎಸ್ ಬೃಹತ್ ಪ್ರತಿಭಟನೆ.

ಬೆಳಗಾವಿ-22 : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಮಹಿಳೆಯರಿಗೆ ಲೋಕಸಭೆ, ರಾಜ್ಯಸಭೆ ಸದಸ್ಯರ ಶೇಕಡಾ.33 ರಷ್ಟು ಮೀಸಲು ನೀಡಲು ವಿಧೇಯಕ ಲೋಕಸಭೆಯಲ್ಲಿ ಸರ್ಕಾರ ಮಂಡಿಸಿದ ಬಿಲ್ ಪ್ರತಿ ಪಕ್ಷಗಳ ವಿರೋಧದಿಂದ 2/3 ರಷ್ಟು ಬಹುಮತ ಕಳೆದುಕೊಂಡು ಮಹಿಳಾ ಮೀಸಲಾತಿಗೆ ಸೋಲಾಯಿತು ಈ ಮೀಸಲಾತಿಯನ್ನು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ವಿರುದ್ಧ ಜಿಡಿಎಸ್ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಬುಧವಾರ ನಗರದ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಪ್ರತಿಭಟನಾ ರ್ಯಾ ಲಿ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರವು ಮಹಿಳೆಯರಿಗೆ ಸಿಗಬೇಕಾದ ಹಕ್ಕು ನೀಡಲು ನಿರ್ಧರಿಸಿತು, ಆದರೆ ಪ್ರತಿ ಪಕ್ಷ ಕಾಂಗ್ರೆಸ್ ವಿರೋಧಿಸಿರುವುದರಿಂದ ವಿಧೇಯಕದ ಸೋಲಿಗೆ ಕಾರಣವಾಗಿದೆ. ಈ ವಿಧೇಯಕದ ಸೋಲನ್ನು ವಿಜಯೋತ್ಸವವನ್ನಾಗಿ ಆಚರಿಸುವ ವಿರೋಧ ಪಕ್ಷಗಳ ನೀತಿಯನ್ನು ಎನ್ ಡಿಎ ಮೈತ್ರಿಕೂಟ ಗಂಭೀರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಿರುದ್ದ ಆಕ್ರೋಶವನ್ನು ಹೋರ ಹಾಕಿದರು.
ಜೆಡಿಎಸ್ ಮಾಜಿ ಪ್ರಧಾನಿಗಳು ಹೆಚ್.ಡಿ. ದೇವೇಗೌಡರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾಗ, ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ. 33 ರಷ್ಟು ಮೀಸಲಾತಿ ನೀಡಿದರು. ಅವರು ದೇಶದ ಪ್ರಧಾನಿಯಾಗಿದ್ದಾಗ ಪ್ರಥಮ ಬಾರಿಗೆ ಮಹಿಳಾ ಮೀಸಲಾತಿ ವಿಧೇಯಕವನ್ನು ಸಂಸತ್ನಲ್ಲಿ ಮಂಡಿಸಿದ್ದರು. ಆದರೆ ಬೆಂಬಲದ ಕೊರತೆ ಮತ್ತು ರಾಜಕೀಯ ಪಕ್ಷಗಳಲ್ಲಿ ಒಡಂಬಡಿಕೆ ಇಲ್ಲದ ಕಾರಣ ವಿಧೇಯಕ ಅಂಗೀಕಾರವಾಗಲಿಲ್ಲ.
ಕಾಂಗ್ರೆಸ್ ಮೊದಲಿನಿಂದಲೂ ಮಹಿಳೆಯರನ್ನು ವಿರೋಧಿಸಿಕೊಂಡು ಬರುತ್ತಿದೆ. ಮಹಿಳೆಯ ಸಬಲೀಕರಣಕ್ಕೆ ಸದಾ ವಿರೋಧಿ ನಿಲುವು ತೋರುತ್ತಿರುವ ಕಾಂಗ್ರೆಸ್ ಪಕ್ಷ ಮತ್ತು ವಿರೋಧ ಪಕ್ಷಗಳ ಧೋರಣೆಯ ವಿರುದ್ಧ ಖಂಡನೆಯನ್ನು ವ್ಯಕ್ತಪಡಿಸಲು ರಾಜ್ಯಾಧ್ಯಂತ ಜೆಡಿಎಸ್ ಪ್ರತಿಭಟನೆಯನ್ನು ಮಾಡಿತಿದೆ ಎಂದು ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಆಕ್ರೋಶವನ್ನು ಹೋರ ಹಾಕಿದರು.
ಬರುವ ದಿನಗಳಲ್ಲಿ ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರು ತಕ್ಕ ಪಾಠ ಕಲಿಸಲೊದ್ದಾರೆ ಎಂದು ಪ್ರತಿಭಟನೆಯ ಮೂಲಕ ಮಹಿಳಾ ವಿರೋಧಿ ಗಾಂಧಿ ಕುಟುಂಬಕ್ಕೆ ಎಚ್ಚರಿಕೆಯನ್ನು ನೀಡಿದರು.
ಈ ವೇಳೆ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ, ಯುವ ಜನತಾ ಧಳ ಅಧ್ಯಕ್ಷ ಸನೀಲ್ ವೇರನೇಕರ್, ತಾಲೂಕು ಅಧ್ಯಕ್ಷ ರಾಜು ರೊಟ್ಟಿ, ಯುವ ಘಟಕ ಅಧ್ಯಕ್ಷ ಬಿಎನ್ ಪಾಟೀಲ, ರಾಮು ರಜಪೂತ್, ಬಸವರಾಜ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತಿರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ