18 Nov 2026, 12:34:59 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಜಿಲ್ಲಾ‌ ಮಟ್ಟದ ರಸ್ತೆ ಸುರಕ್ಷಾ‌ ಸಮಿತಿ‌ ಸಭೆ

ಅಪಘಾತ ಸ್ಥಳಗಳನ್ನು ಗುರುತಿಸಿ; ಅಪಘಾತ ತಡೆಗಟ್ಟಲು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಬೆಳಗಾವಿ-೨೫: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುವಂತಹ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳ‌ ದುರಸ್ತಿಗೆ ಕ್ರಮ ವಹಿಸುವ ಮೂಲಕ ಅಪಘಾತಗಳ‌‌ ನಿಯಂತ್ರಣಕ್ಕೆ ಕ್ರಮ‌ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ  ಜರುಗಿದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ‌ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ‌ ಮೂರು ವರ್ಷಗಳಲ್ಲಿ ಆದಂತಹ ಅಪಘಾತಗಳ ಸಂಖ್ಯೆ, ಅಪಘಾತದಿಂದ ಮೃತರ ಸಂಖ್ಯೆ ಹಾಗೂ ಬ್ಲ್ಯಾಕ್ ಸ್ಪಾಟ್(ಅಪಘಾತ ಸ್ಥಳ) ಗಳ ಕ್ರೋಢಿಕೃತ ವರದಿಯನ್ನು ಸಲ್ಲಿಸಲು ತಿಳಿಸಿದರು. ಈಗಾಗಲೇ ಗುರುತಿಸಲಾದ ಬ್ಲ್ಯಾಕ್ ಸ್ಪಾಟ್ ಗಳಲ್ಲಿ ಅಪಘಾತಗಳ‌ ನಿಯಂತ್ರಣಕ್ಕೆ ಕ್ರಮ ವಹಿಸಬೇಕು.

ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಲೊಕೊಪಯೋಗಿ ಇಲಾಖೆಗಳು ಜಂಟಿಯಾಗಿ ಸಮಿಕ್ಷೆ ಜರುಗಿಸಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತ ಸಂಭವಿಸುವಂತಹ ಸ್ಥಳಗಳ ಹಾಗೂ ಬ್ಲ್ಯಾಕ್ ಸ್ಪಾಟ್ ಗಳ ವರದಿ ನೀಡಲು ಸೂಚಿಸಿದರು.

ಬೆಳಗಾವಿ‌ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸಿರುವ ಸಿ.ಸಿ.‌ಕ್ಯಾಮೆರಾಗಳು ಸುಸ್ಥಿತಿಯಲ್ಲಿರುವ ಕುರಿತು ಖಾತರಿಪಡಿಸಿಕೊಳ್ಳಬೇಕು. ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ವಾಹನಗಳ ವೇಗವನ್ನು ನಿಯಂತ್ರಿಸಲು ವೇಗ ನಿಯಂತ್ರಣಗಳನ್ನು ಅಳವಡಿಸಬೇಕು.

ರಸ್ತೆಯಲ್ಲಿನ ಗುಂಡಿಗಳ ದುರಸ್ತಿಗೆ ಕೂಡಲೇ‌ ಕ್ರಮ‌ ವಹಿಸಬೇಕು. ಈ ಸಂಬಂಧ ಸಂಬಂಧಿಸಿದ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಸುವಂತೆ ಜಾಗೃತಿ ಮೂಡಿಸಬೇಕು. ಹೆಲ್ಮೆಟ್ ಬಳಸದ ದ್ವಿಚಕ್ರ ವಾಹನ ಸವಾರರ ವಿರುದ್ಧ ದಂಡ‌ ಹಾಗೂ ಪ್ರಕರಣ ದಾಖಲಿಸಬೇಕು. ಆಟೋ ರಿಕ್ಷಾಗಳಲ್ಲಿ ಮಿತಿಗಿಂತ ಹೆಚ್ಚಾಗಿ ಶಾಲಾ ಮಕ್ಕಳನ್ನು‌ ಕರೆದೊಯ್ಯುವಂತಹ ಆಟೋ ಚಾಲಕರ ಚಾಲನಾ ಪರವಾನಿಗೆ ರದ್ದುಪಡಿಸಲು ಕ್ರಮ‌ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ನಗರದಲ್ಲಿ ಈಗಾಗಲೇ ಆಟೋ ರಿಕ್ಷಾಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೊಸ ಆಟೋ ರಿಕ್ಷಾಗಳ ನೊಂದಣಿ ಕಾರ್ಯ ಸ್ಥಗಿತಗೊಳಿಸುವ ಕುರಿತು ಆಟೋ‌ ಅಸೋಷಿಯನ್ ಮುಖಂಡರ
ಮನವಿಗೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿಗಳು ಈ ಕುರಿತು ಪರಿಶೀಲಿಸಿ ಶೀಘ್ರವೆ ಕ್ರಮ‌ ಜರುಗಿಸಲಾಗುವುದು ಎಂದರು.

ಮುಂದಿನ‌ ಮಾಹೆಯಿಂದ ನಗರದ ಎಲ್ಲ‌ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಲಾಗುವದು. ಈ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಹಾಗೂ ಪೋಲಿಸ್ ಇಲಾಖೆ ವತಿಯಿಂದ ಆಟೋ ರಿಕ್ಷಾ ಅಸೊಶಿಯನ್ ಮುಖಂಡರುಗಳೊಂದಿಗೆ ಸಭೆ ಜರುಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಮಾತನಾಡಿ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರದ್ದಾಗಿರುವ ಚಾಲನಾ ಪರವಾನಿಗೆಗಳ ವಿವರವನ್ನು ಒದಗಿಸುವದರ ಜೊತೆಗೆ ಆ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸಲು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅತೀಯಾದ ವೇಗದಿಂದ ಹೆಚ್ಚಿನ ಅಫಘಾತಗಳು ಸಂಭವಿಸುತ್ತಿದ್ದು, ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸರಕು ಸಾಗಾಣಿಕೆ ವಾಹನಗಳಲ್ಲಿ ಮೀತಿಗಿಂತ ಹೆಚ್ಚಿಗೆ ಸರಕು ಸಾಗಾಣಿಕೆ ನಿಯಂತ್ರಿಸಬೇಕು.

ಮದ್ಯಪಾನ ಮಾಡಿ ವಾಹನ ಚಾಲನೆ, ಚಾಲನಾ ಸಂದರ್ಭದಲ್ಲಿ ಮೊಬೈಲ್ ಬಳಕೆ, ವಾಹನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ‌ ವಸೂಲಿ ಮಾಡಬೇಕು. ಇದರ ಜೊತೆಗೆ ವಾಹನಗಳ ದಾಖಲೆಗಳ ಪರಿಶೀಲನೆ ಜರುಗಿಸುವಂತೆ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶೃತಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಬಿ.ಸೊಬರದ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೇರಿದಂತೆ ಸಮಿತಿಯ ಸದಸ್ಯರುಗಳು ಉಪಸ್ಥಿತಿರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ