18 Nov 2026, 12:31:31 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಬ್ಬಿನ ಟನ್‌ಗೆ ₹5,500 ದರ ನಿಗದಿಗೆ ರೈತ ಸಂಘಟನೆಗಳ ಆಗ್ರಹ.

ಬೆಳಗಾವಿ-30: ಕಬ್ಬಿನ ದರ ನಿಗದಿಗೆ ಆಗ್ರಹಿಸಿ ರಾಜ್ಯಾದ್ಯಂತ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತ ಮುಖಂಡರೊಂದಿಗೆ ಐದು ಸುತ್ತಿನ ಸುದೀರ್ಘ ಸಭೆ ನಡೆಸಿ, ರೈತರ ಪರವಾಗಿ ಸರ್ಕಾರ ನಿಲ್ಲಲಿದೆ ಎಂಬ ಭರವಸೆ ನೀಡಿದ್ದರು. ಆದರೆ ಇದೀಗ ಸರ್ಕಾರ ಮತ್ತೆ ರೈತರಿಗೆ ನಿರಾಸೆ ಮೂಡಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ರೈತರ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಆರೋಪಿಸಿದರು.

ಶುಕ್ರವಾರ ನಗರದ ಸುದ್ದಿ ಗೋಷ್ಠಿ ಯಲ್ಲಿ ರೈತ ಮುಖಂಡರಾದ ರಾಘವೇಂದ್ರ ನಾಯಕ ಹಾಗೂ ಸುರೇಶ ಪರಗಣ್ಣವರ ಮಾತನಾಡಿ, 2026-27ನೇ ಸಾಲಿನ ಕಬ್ಬಿನ ದರವನ್ನು ಪ್ರತಿ ಟನ್‌ಗೆ 5,500 ರೂ. ನಿಗದಿಪಡಿಸಬೇಕು. ಎಸ್‌ಎಪಿ ದರವನ್ನು ಪ್ರತಿ ಟನ್‌ಗೆ 1,000 ರೂ. ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ಕಬ್ಬಿನ ತೂಕ ಮತ್ತು ಇಳುವರಿ ಕುರಿತು ಸಮಗ್ರ ಲೆಕ್ಕಪರಿಶೋಧನೆ ನಡೆಸಬೇಕು. ಕಬ್ಬಿನ ರಿಕವರಿ ಪ್ರಮಾಣವನ್ನು ಶೇ.10.25ರ ಬದಲಿಗೆ ಶೇ.8.5ರ ಆಧಾರದಲ್ಲಿ ಎಫ್‌ಆರ್‌ಪಿ ನಿಗದಿಪಡಿಸಬೇಕು. ಸುಟ್ಟ ಕಬ್ಬಿಗೆ ಶೇ.0 ಕಡಿತದ ನಿಯಮವನ್ನು ಗುಜರಾತ್ ಮಾದರಿಯಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗಳು ರೈತರಿಗೆ ನೀಡಿದ ಭರವಸೆಯನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಸದ್ಯಕ್ಕೆ ಹೋರಾಟ ಸ್ಥಗಿತಗೊಂಡಿಲ್ಲ. ಮುಂದಿನ ದಿನಗಳಲ್ಲಿ ಇದಕ್ಕಿಂತಲೂ ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ಈ ವೇಳೆ ರಾಘವೇಂದ್ರ ನಾಯಕ, ದರೇಖಾನ್ ಅಜ್ಜನವರ, ಗಣಪತಿ, ಸುರೇಶ ಪರಗಣ್ಣವರ ಸೇರಿದಂತೆ ರೈತ ಮುಖಂಡರು ಇತರರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ