18 Nov 2026, 12:29:56 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕ ರಾಜ್ಯೋತ್ಸವಕ್ಕೆ ಸರ್ವ ಸನ್ನದ್ಧವಾದ ಕುಂದಾನಗರಿ ಬೆಳಗಾವಿ

ಬೆಳಗಾವಿ-೦೧:ನವ್ಹೆಂಬರ್ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಮತ್ತು ದೀಪಾವಳಿ ಎರಡೂ ಒಂದೇ ದಿನ ಬಂದಿದ್ದು, ಬೆಳಗಾವಿ ಗಡಿಯಲ್ಲಿ ಕನ್ನಡದ ದೀಪ ಹಚ್ಚಲು ಲಕ್ಷ ಲಕ್ಷ ಕನ್ನಡಿಗರು ತುದಿಗಾಲಲ್ಲಿ ನಿಂತಿದ್ದಾರೆ. ಕುಂದಾನಗರಿ ಬೆಳಗಾವಿ ತುಂಬಾ ಕನ್ನಡ ಬಾವುಟಗಳು ರಾರಾಜಿಸುತ್ತಿವೆ. ಇಡೀ ನಗರ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ದಸರಾ ನೋಡಲು ಮೈಸೂರಿಗೆ ಹೋಗುತ್ತಾರೆ. ಕರ್ನಾಟಕ ರಾಜ್ಯೋತ್ಸವ ಕಣ್ತುಂಬಿಕೊಳ್ಳಲು ನಾಡಿನ ಮೂಲೆ ಮೂಲೆಯಿಂದ ಕನ್ನಡದ ಕಂದಮ್ಮಗಳು ಬೆಳಗಾವಿಗೆ ಲಗ್ಗೆ ಇಡಲಿದ್ದಾರೆ. ಗುರುವಾರ ಮಧ್ಯರಾತ್ರಿ ೧೨ ಗಂಟೆಯಿಂದಲೇ ಸಂಭ್ರಮ ಆರಂಭವಾಯಿತು. ಈ ಬಾರಿ ರಾಜ್ಯೋತ್ಸವ ಮತ್ತು ಬೆಳಕಿನ ಹಬ್ಬ ಒಂದೇ ದಿನ ಬಂದಿದ್ದರಿಂದ ಸಂಭ್ರಮ ಇಮ್ಮಡಿಗೊಂಡಿದೆ.

ಕುಂದಾನಗರಿ ಬೆಳಗಾವಿಯ ಶಕ್ತಿ ಕೇಂದ್ರ ರಾಣಿ ಚನ್ನಮ್ಮ ವೃತ್ತವು ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಚನ್ನಮ್ಮ ವೃತ್ತದ ನಾಲ್ಕು ದ್ವಾರಗಳಲ್ಲಿ ಕೆಂಪು-ಹಳದಿ ಧ್ವಜಗಳ ಸ್ವಾಗತ ಕಮಾನು ಅಳವಡಿಸಲಾಗಿದೆ. ಸುತ್ತಲೂ ಕನ್ನಡ ಸಂಘಟನೆಗಳು, ಜನಪ್ರತಿನಿಧಿಗಳ ಸ್ವಾಗತ ಕೋರುವ ಪ್ಲೇಕ್ಸ್ ಗಳು ಎಲ್ಲರ ಗಮನ ಸೆಳೆಯುತ್ತಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳು ಎಲ್ಲರ ಗಮನ ಸೆಳೆಯುತ್ತಿವೆ. ದೀಪಾಲಂಕಾರ ಮಾಡಲಾಗಿದ್ದು, ಚನ್ನಮ್ಮ ಪುತ್ಥಳಿ ಸ್ವಚ್ಛಗೊಳಿಸಿ, ಹೊಸದಾಗಿ ಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ.

ಟೀರ‍್ಟ್, ಕನ್ನಡ ಬಾವುಟ ಮಾರಾಟ ಜೋರು: ಬೆಳಗಾವಿ ಗಲ್ಲಿ ಗಲ್ಲಿಯಲ್ಲಿ ಕನ್ನಡ ಬಾವುಟ, ಶಲ್ಲೆಗಳ ಮಾರಾಟ ಜೋರಾಗಿದೆ. ಕನ್ನಡಾಭಿಮಾನಿಗಳು ಬಾವುಟ ಖರೀದಿಸುವಲ್ಲಿ ನಿರತರಾಗಿದ್ದಾರೆ. ಇನ್ನು ಬ್ರಿಟಿಷರಿಗೆ ಕೊಡಲಿಲ್ಲಾ ಕಪ್ಪ, ಬೆಳಗಾವಿ ಕೇಳಿ ಮಾಡಬ್ಯಾಡ್ರಿ ತಪ್ಪ ..! ಎಂಬ ಬರಹದ ರಾಣಿ ಚನ್ನಮ್ಮ ಭಾವಚಿತ್ರದ ಟೀರ‍್ಟ್ ಗಳು ಗ್ರಾಹಕರ ಸೆಳೆಯುತ್ತಿವೆ. ಜನರು ಕುಳಿತುಕೊಂಡು ಮೆರವಣಿಗೆ ವೀಕ್ಷಿಸಲು ಗ್ಯಾಲರಿ ಅಳವಡಿಸಲಾಗಿದೆ.

 

೧೨ಕ್ಕೆ ಸಂಭ್ರಮ ಶುರು: ರಾತ್ರಿ ೧೨ ಗಂಟೆ ಆಗುತ್ತಿದ್ದಂತೆ ಚನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಲಿರುವ ಕನ್ನಡಿಗರು ರ‍್ನಾಟಕ ರಾಜ್ಯೋತ್ಸವ ಆಚರಿಸಿದರು. ಕನ್ನಡ ಬಾವುಟಗಳನ್ನು ಹಾರಾಡಿಸುತ್ತಾ, ಜೈಕಾರ ಕೂಗುತ್ತಾ, ಕುಣಿದು ಕುಪ್ಪಳಿಸಲಿದ್ದಾರೆ. ಬಳಿಕ ಬೆಳಿಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ರಾಜ್ಯೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಭವ್ಯ ಮೆರವಣಿಗೆ ಶುರುವಾಗಲಿದೆ. ಈ ವೇಳೆ ನೂರಾರು ರೂಪಕಗಳು, ಮಹಾಪುರುಷ ವೇಷಧಾರಿ ಮಕ್ಕಳು ಮೆರವಣಿಗೆಗೆ ಮೆರಗು ತಂದು ಕೊಡಲಿದ್ದಾರೆ. ಕಿವಿಗಡಚಿಕ್ಕುವ ಡಿಜೆ ಹಾಡುಗಳಿಗೆ ಲಕ್ಷಾಂತರ ಜನರು ಹುಚ್ಚೆದ್ದು ಕನ್ನಡ ಅಭಿಮಾನಿ ಗಳು ಕುಣಿಯ ಇದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ