18 Nov 2026, 12:13:04 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Belagavi

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ

ಬೆಳಗಾವಿ-17: ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಸರ್ಕಾರದ ಪ್ರಸ್ತಾವನೆ ಕೈಬಿಡಬೇಕು ಹಾಗೂ ಈಗಿರುವಂತೆ ಶಾಲೆಗಳಲ್ಲಿಯೇ ಅಡುಗೆ ತಯಾರಿಸುವ ವ್ಯವಸ್ಥೆ ಮುಂದುವರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಬೆಳಗಾವಿ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯ ಉದ್ಯೋಗಕ್ಕೆ ಧಕ್ಕೆ ತರುವ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರಬಾರದು, ಮಕ್ಕಳಿಗೆ ಶಾಲೆಗಳಲ್ಲಿಯೇ ತಾಜಾ, ಬಿಸಿ ಹಾಗೂ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಪ್ರತಿಯೊಂದು ಶಾಲೆಯಲ್ಲೂ ಅಡುಗೆ ಮನೆ ನಿರ್ಮಿಸಿ, ಅಗತ್ಯ ಪಾತ್ರೆಗಳು, ಗ್ಯಾಸ್ ಸಿಲಿಂಡರ್ ಸೇರಿದಂತೆ ಮೂಲಸೌಕರ್ಯ ಕಲ್ಪಿಸಿದೆ. ಇದಕ್ಕಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಒಂದೇ ಸ್ಥಳದಲ್ಲಿ ಅಡುಗೆ ಮಾಡಿ ಹಲವು ಶಾಲೆಗಳಿಗೆ ಆಹಾರ ಪೂರೈಸುವ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಅಗತ್ಯವಿಲ್ಲ ಆಗ್ರಹಿಸಿದೆ.

ಬಿಸಿಯೂಟ ಯೋಜನೆಯ ನಿರ್ವಹಣೆಯ ಹೆಚ್ಚುವರಿ ಹೊಣೆಯನ್ನು ಶಿಕ್ಷಕರ ಮೇಲೆ ಹೇರುವುದು ಸರಿಯಲ್ಲ. ಶಿಕ್ಷಕರು ಬೋಧನಾ ಕಾರ್ಯಕ್ಕೆ ಆದ್ಯತೆ ನೀಡಲು ಅವಕಾಶ ಕಲ್ಪಿಸಬೇಕು. ಯೋಜನೆಯ ಸಂಪೂರ್ಣ ನಿರ್ವಹಣೆಯನ್ನು ಅನುಭವ ಹೊಂದಿರುವ ಅಡುಗೆ ಸಿಬ್ಬಂದಿಗೇ ವಹಿಸಬೇಕು. ಅಗತ್ಯವಿದ್ದಲ್ಲಿ ಅವರ ಕೆಲಸದ ಅವಧಿ ವಿಸ್ತರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಯಾದರೆ ಶಾಲಾ ಪೋಷಣಾ ಯೋಜನೆ ಖಾಸಗೀಕರಣಗೊಳ್ಳುವ ಸಾಧ್ಯತೆಯಿದ್ದು, ಧಾರ್ಮಿಕ ಹಾಗೂ ಜಾತಿ ಆಧಾರಿತ ಸಂಘಟನೆಗಳ ಪ್ರವೇಶಕ್ಕೂ ಅವಕಾಶವಾಗಬಹುದು. ಇದರಿಂದ ಮಕ್ಕಳ ಆಹಾರದ ಗುಣಮಟ್ಟ ಮತ್ತು ಪೌಷ್ಟಿಕತೆಯ ಮೇಲೆ ಪರಿಣಾಮ ಬೀರುವುದರ ಜತೆಗೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯ ಉದ್ಯೋಗಕ್ಕೂ ಆತಂಕ ಎದುರಾಗಲಿದೆ ಎಂದು ಸಂಘಟನೆ ಕಳವಳ ವ್ಯಕ್ತಪಡಿಸಿದೆ.
ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಪೂರೈಸುವ ಮಾದರಿಯಲ್ಲಿಯೇ ಕೋಳಿ ಅಭಿವೃದ್ಧಿ ನಿಗಮದ ಮೂಲಕ ಶಾಲೆಗಳಿಗೂ ಮೊಟ್ಟೆ ಪೂರೈಸುವ ವ್ಯವಸ್ಥೆ ಜಾರಿಗೆ ತರಬೇಕು. ಮಕ್ಕಳಿಗೆ ಗುಣಮಟ್ಟದ ಆಹಾರ ದೊರೆಯುವ ಜತೆಗೆ ಅಡುಗೆ ಸಿಬ್ಬಂದಿಯ ಉದ್ಯೋಗ ಭದ್ರತೆಯನ್ನೂ ಕಾಪಾಡಬೇಕು ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ ತುಳಸಮ್ಮ ಮಾಳದಕರ, ಮಾಶಾಬಿ ಡಾಲಾಯತ್, ಸಾವಿತ್ರಿ ಚಪ್ಪರದ, ಸುಮನ್ ಗಡಾದ, ಅನ್ನಪೂರ್ಣ ಹಲಮನಿ, ಪಾರ್ವತಿ ಕೌಜಲಗಿ, ಸುನೀತಾ ಚಾಳನ್ನವರ, ದೇವಕಿ ಹುಕ್ಕೇರಿ, ಸವಿತಾ ಬಾಲ್ಯಾಗೋಳ ಮತ್ತು ಭಾರತಿ ಜೋಗನ್ನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Author
Vishwanath Desai
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ