18 Nov 2026, 12:45:13 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ ಬೆಳಗಾವಿ ಸಂಸದ ಜಗದೀಶ ಶೆಟ್ಟರ್

ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ್ ಶೆಟ್ಟರ್ ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಂಗಳೂರು - ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್ ಹೈ ಸ್ಪೀಡ್ ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ.

ಬೇಟಿಯ ಪ್ರಾರಂಭದಲ್ಲಿ ಪೂಣೆ - ಬೆಳಗಾವಿ - ಹುಬ್ಬಳ್ಳಿ ನಡುವೆ ಇತ್ತೀಚಿಗೆ ವಂದೇ ಭಾರತ್ ನೂತನ ಹೈ ಸ್ಪೀಡ್ ರೈಲು ಸಂಚಾರಕ್ಕೆ ಚಾಲನೆ ನೀಡಿ ಬೆಳಗಾವಿ ಜಿಲ್ಲೆಯ ರಹವಾಸಿಗಳ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಿ, ಅನುಕೂಲತೆ ಕಲ್ಪಿಸಿ ಕೊಟ್ಟಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.

ತದನಂತರ ಇದೇ ಸಮಯದಲ್ಲಿ ಬೆಂಗಳೂರು - ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್ ರೈಲು ಸಂಚಾರ ಸೇವೆಯನ್ನು ಸಹ ಬೆಳಗಾವಿಯವರೆಗೆ ವಿಸ್ತರಿಸುವ ಅವಶ್ಯಕತೆಯ ಕುರಿತು ಮನವರಿಕೆಯನ್ನು ಕೇಂದ್ರ ರೈಲ್ವೆ ಸಚಿವರಲ್ಲಿ ಮಾಡಿ ಕೊಡುವುದರೊಂದಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ನೂತನ ರೈಲು ಸೇವೆ ಕಲ್ಪಿಸುವ ಬಗ್ಗೆ ಅಗತ್ಯವೆನಿಸುವ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವ ಬಗ್ಗೆಯೂ ಸಹ ಇಬ್ಬರೂ ಸಚಿವರಲ್ಲಿ ವಿನಂತಿಸಿದ್ದು ಅದರಂತೆ ಬರುವ ದಿನಗಳಲ್ಲಿ ಈ ಬೇಡಿಕೆಗಳನ್ನು ಸಹ ಈಡೇರಿಸುವುದಾಗಿ ಭರವಸೆಯನ್ನು ಅವರು ನೀಡಿರುವುದಾಗಿ ಬೆಳಗಾವಿಯ ಸಂಸದರಾದ ಸನ್ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ