18 Nov 2026, 12:45:48 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಲಿಂಗಾಯತ ಸಂಘಟನೆ ವತಿಯಿಂದ ಸಂಸದರ ಸನ್ಮಾನ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ --ಜಗದೀಶ್ ಶೆಟ್ಟರ
ಬೆಳಗಾವಿ-೦೮:ಬೆಳಗಾವಿಯನ್ನು ಔದ್ಯೋಗಿಕವಾಗಿ ಮೂಲಭೂತ ಸೌಕರ್ಯ ಒದಗಿಸುವಿಕೆ,ರಸ್ತೆಗಳ ನಿರ್ಮಾಣ, ರೈಲ್ವೆ,ವಿಮಾನಯಾನಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ, ನೆನೆಗುದಿಗೆ ಬಿದ್ದಿರುವ ವಿವಿಧ ಯೋಜನೆಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದು ಭಾನುವಾರ ದಿ.೮ ರಂದು ಲಿಂಗಾಯತ ಸಂಘಟನೆ ವತಿಯಿಂದ ಬೆಳಗಾವಿಯ ಹಳಕಟ್ಟಿ ಭವನದಲ್ಲಿ ಹಮ್ಮಿಕೊಳ್ಳಲಾದ ಸಂಸದರಸನ್ಮಾನ ಸಮಾರಂಭದಲ್ಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬೆಳಗಾವಿ ವಿಶೇಷ ಜಿಲ್ಲೆ ವಿಶೇಷವಾಗಿ ಧಾರ್ಮಿಕ ಸಾಮರಸ್ಯದ ದೃಷ್ಟಿಕೋನದಲ್ಲಿ ಯುವ ಸಮೂಹವನ್ನು ಸಹ ಸದಾಚಾರದಲ್ಲಿ ನಡೆಯುವಂತಾಗಲು ಬಸವಣ್ಣನವರ ವಚನಗಳ ಪ್ರೇರಣೆ ಆಗುವ ನಿಟ್ಟಿನಲ್ಲಿ ಯುವ ಜನತೆಯನ್ನು ಸಂಘಟಿಸಲು ಮತ್ತು ಒಳ್ಳೆಯ ಮಾರ್ಗದಲ್ಲಿ ನಡೆಯುವಂತಾಗಲು ಲಿಂಗಾಯತ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಸಾಮೂಹಿಕ ಪ್ರಾರ್ಥನೆ,ಸತ್ಸಂಗಗಳು, ವಿವಿಧ ಜನಪರ ಕಾಳಜಿಯ ಕಾರ್ಯಕ್ರಮಗಳು ನಿಜಕ್ಕೂ ಸಮಾಜಕ್ಕೆ ಮಾದರಿ ಎಂದು ಸಂಘಟನೆಯ ವಿವಿಧ ಕಾರ್ಯಕ್ರಮಗಳ ಕುರಿತು ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘಟನೆ ಅಧ್ಯಕ್ಷ ಈರಣ್ಣ ದೇಯನ್ನವರ ಮಾತನಾಡಿ ಅಪಾರ ಅನುಭವ ಹೊಂದಿರುವ ಮುತ್ಸದ್ದಿ ರಾಜಕಾರಣಿ ಆಗಿರುವ ಜಗದೀಶ ಶೆಟ್ಟರ ರವರು ಹುಬ್ಬಳ್ಳಿಯವರು ಎಂಬ ಭಾವ ಎಲ್ಲರಲ್ಲಿದೆ ಅದನ್ನು ಹೋಗಲಾಡಿಸಿ ಬೆಳಗಾವಿಗೆ ಹತ್ತಿರವಾಗಿ ಎಲ್ಲಾ ರಂಗಗಳ ಸಮಸ್ಯೆಗಳನ್ನು ಮನಗಂಡು ಅವುಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಶ್ರಮಿಸುವರೆಂಬ ವಿಶ್ವಾಸ ನಮ್ಮೆಲ್ಲರಿಗಿದೆ ಎಂದು ವಿಶ್ವಾಸ ವ್ಯಕ್ತಪಡಿಸುವುದರ ಜೊತೆಗೆ ಸಂಘಟನೆ ವತಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತಾದ ಮನವಿಯನ್ನು ಮಾನ್ಯ ಸಂಸದರಿಗೆ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಸಾಹಿತಿ ಎಂ.ವೈ ಮೆಣಸಿನಕಾಯಿ ರವರು ಬರೆದ 'ನಮ್ಮ ರಾಷ್ಟ್ರೀಯ ಹಬ್ಬಗಳು' ಕೃತಿ ಲೋಕಾರ್ಪಣೆ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಅನಿಲ ಬೆನಕೆ ನಗರಸೇವಕರಾದ ರಾಜಶೇಖರ ಡೋಣಿ,ಹನುಮಂತ ಕೊಂಗಾಲಿ, ಮುರುಗೇಂದ್ರಗೌಡ ಪಾಟೀಲ, ಶಶಿಭೂಷಣ ಪಾಟೀಲ, ಶಂಕರ ಗುಡಸ, ಆನಂದ ಕರ್ಕಿ , ಅ. ಬ. ಇಟಗಿ, ವಿ. ಕೆ. ಪಾಟೀಲ,ಮಹಾಂತೇಶ ತೋರಣಗಟ್ಟಿ, ಶಿವಾನಂದ ತಲ್ಲೂರ, , ಬಿ ಬಿ ಮಠಪತಿ, ವಿ ಕೆ ಪಾಟೀಲ ವಿರುಪಾಕ್ಷಿ ದೊಡ್ಡಮನಿ, ಬಾಬು ತಿಗಡಿ ಶಿವಾನಂದ ನಾಯ್ಕ ಸೇರಿದಂತೆ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮದ ಆರಂಭದಲ್ಲಿ ಸಂಗಮೇಶ ಅರಳಿ ಸ್ವಾಗತಿಸಿದರು. ಶ್ರೀಕಾಂತ ಶಾನವಾಡ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಸತೀಶ ಪಾಟೀಲ ನಿರೂಪಿಸಿದರು. ಕೊನೆಯಲ್ಲಿ ಸುರೇಶ ನರಗುಂದ ವಂದಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ