18 Nov 2026, 12:44:49 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು-16:ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಮಾಜಿ ಮುಖ್ಯ ಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ “ಕೃತಿಕಾ ನಿವಾಸ" ದಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ಮೌಲ್ಯಾಧಾರಿತ ರಾಜಕಾರಣಿ ಆಗಿದ್ದ ಹೆಗಡೆಯವರ ಬದುಕು ಹಾಗೂ ಸಾರ್ವಜನಿಕ ಸೇವೆ ಇಂದಿಗೂ ಜನ ಮಾನಸದಲ್ಲಿ ಹಚ್ಚಹಸಿರಾಗಿದೆ ಎಂದು ಹೇಳಿದರು.

ರಾಜ್ಯದ ಬಡಜನತೆಯ ಬದುಕು ಹಸನಗೊಳಿಸಲು ಅವರು ಜಾರಿಗೆ ತಂದಿದ್ದ ವಿಧವಾ ವೇತನ, ವೃದ್ಯಾಪ ವೇತನ, ಬಸ್ ಪಾಸು ಸೌಲಭ್ಯ, ಪಂಚಾಯತ್ ರಾಜ್ ವ್ಯವಸ್ಥೆ, ಲೋಕಾಯುಕ್ತ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳ ಮೂಲಕ ರಾಜ್ಯದ ಮನೆ ಮಾತಾಗಿದ್ದ ರಾಮಕೃಷ್ಣ ಹೆಗಡೆಯವರು ಕಲುಷಿತ ರಾಜಕಾರಣದ ಶುದ್ಧತೆಗೆಗಾಗಿ ಪಣತೊಟ್ಟು ಹೊಸ ರಾಜಕೀಯ ಸಂಸ್ಕೃತಿಯನ್ನು ಹುಟ್ಟು ಹಾಕಿದ ಧೀಮಂತ ನಾಯಕ ಎಂದು ತಿಳಿಸಿದರು.

ರಾಜಕಾರಣದಲ್ಲಿ ಸಂಸ್ಕಾರ, ಪದಬಳಕೆ ಹಾಗೂ ಪರಸ್ಪರ ಗೌರವದಂತಹ ಸಾರ್ವಕಾಲಿಕ ಮೌಲ್ಯಗಳುಳ್ಳ ವಿಚಾರಗಳನ್ನು ಹೆಗಡೆಯವರು ಪ್ರತಿಪಾದಿಸಿದ್ದನ್ನು ಬಸವರಾಜ ಹೊರಟ್ಟಿ ಈ ಸಂದರ್ಭದಲ್ಲಿ ಮೆಲುಕು ಹಾಕಿದರು.

ರಾಮಕೃಷ್ಣ ಹೆಗಡೆಯವರ ಜಾತ್ಯಾತೀತ ಮನೋಭಾವ, ಮೌಲ್ಯ ಸಿದ್ದಾಂತಗಳ ಅನುಷ್ಠಾನ, ಜನಪರ ಕಾಳಜಿ, ಸರಳತೆ, ಇನ್ನು ಮುಂತಾದ ಉದಾತ್ತ ಗುಣಗಳು ಇಂದಿನ ಯುವ ರಾಜಕಾರಣಿಗಳಿಗೆ ಅನುಕರಣೀಯ ಆದರ್ಶಗಳಾಗಿವೆ ಎಂದು ಬಸವರಾಜ ಹೊರಟ್ಟಿಯವರು ಬಣ್ಣಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ