18 Nov 2026, 12:22:40 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಾರುಕಟ್ಟೆಗೆ ಕಿಂಗ್ ಐಸ್‌ಕ್ರೀಮ್ ಬಿಡುಗಡೆ

ಬೆಳಗಾವಿ-02: ಗುಣಮಟ್ಟದ ಹಾಲಿನ ಉತ್ಪನ್ನಗಳ ಮೂಲಕವೇ ಮನೆಮಾತಾಗಿರುವ ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್‌ನ ನೂತನ ಉತ್ಪನ್ನವಾದ ‘ಕಿಂಗ್ ಐಸ್‌ಕ್ರೀಮ್’ ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಂಸದ ಜಗದೀಶ ಶೆಟ್ಟರ್ ಹಾಗೂ ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇಮನ್ ಡಾ.ವಿಜಯ ಸಂಕೇಶ್ವರ ಅವರು ನಗರದ ಹೊರವಲಯದ ಐಟಿಸಿ ವೆಲ್‌ಕಮ್ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು.
ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್ ಉಪಾಧ್ಯಕ್ಷ ವಿಜಯಕಾಂತ ಸಿದ್ನಾಳ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ನಮಗೆ ವಿತರಕರು, ಸಿಬ್ಬಂದಿ ಬೆನ್ನೆಲುಬಾಗಿ ನಿಂತಿದ್ದಾರೆ. ಅವರ ನಿರಂತರ ಶ್ರಮ, ಶ್ರದ್ಧೆಯಿಂದಲೇ ವಿಜಯಕಾಂತ ಡೇರಿ ಯಶಸ್ವಿಯಾಗಿ ಬೆಳೆದುನಿಂತಿದೆ. ಅವರೆಲ್ಲರೂ ನಮ್ಮ ಪರಿವಾರ. ನಮ್ಮ ತಾತ ಡಾ.ವಿಜಯ ಸಂಕೇಶ್ವರ ಅವರ ಜನ್ಮದಿನದ ಅಂಗವಾಗಿ ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್‌ನಿಂದ ಹೊಸದಾಗಿ ‘ಕಿಂಗ್’ ಐಸ್‌ಕ್ರೀಮ್‌ಅನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದೇವೆ. ಆರಂಭದಲ್ಲಿ ಐದು ನಮೂನೆಯ ಐಸ್‌ಕ್ರೀಮ್ ಬಿಡುಗಡೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸುಮಾರು 70 ನಮೂನೆಯ ಐಸ್‌ಕ್ರೀಮ್ ಮಾರುಕಟ್ಟೆಗೆ ಪರಿಚಯಿಸಲಾಗುವುದು. ವಿಜಯಕಾಂತ ಡೇರಿ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಬ್ರಾೃಂಡ್ ಮಾಡಲು ಡಾ.ವಿಜಯ ಸಂಕೇಶ್ವರ ಮತ್ತು ಡಾ.ಆನಂದ ಸಂಕೇಶ್ವರ ಅವರ ಪ್ರೋತ್ಸಾಹ, ಸಹಕಾರವೇ ಕಾರಣ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಶಿಸ್ತು, ಶ್ರದ್ಧೆ, ಪ್ರಾಮಾಣಿಕತೆ ಇದ್ದರೆ ಮಾತ್ರ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಒಬ್ಬ ಪ್ರಾಮಾಣಿಕ ವ್ಯಕ್ತಿ ಕಷ್ಟಪಟ್ಟು ದುಡಿದರೆ ದೊಡ್ಡ ಪ್ರಮಾಣದಲ್ಲಿ ಬೆಳೆಯಬಹುದು ಎಂಬುದಕ್ಕೆ ಡಾ.ವಿಜಯ ಸಂಕೇಶ್ವರ ಅವರೇ ಸಾಕ್ಷಿ. ವಿಜಯಕಾಂತ ಡೇರಿ ಸ್ಥಾಪಿಸಿ ಸಾವಿರಾರು ಕುಟುಂಬಗಳಿಗೆ ಆಶ್ರಯವಾಗಿದ್ದ ಶಿವಕಾಂತ ಸಿದ್ನಾಳ ಅವರ ಅಕಾಲಿಕ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಪುತ್ರ ವಿಜಯಕಾಂತ ಸಿದ್ನಾಳ ಧೈರ್ಯವಂತ ಯುವಕ. ತಂದೆಯ ಕನಸುಗಳನ್ನು ನನಸು ಮಾಡಲು ಹೊರಟಿದ್ದಾರೆ. ಅವರಿಗೆ ಎಲ್ಲ ರೀತಿ ಸಹಕಾರ ನೀಡಲಾಗುವುದು  ಎಂದರು.
ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ಲಾಜಿಸ್ಟಿಕ್ಸ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ದೊಡ್ಡ  ಸಾಧನೆಗೈದಿರುವ ಡಾ.ವಿಜಯ ಸಂಕೇಶ್ವರ ಬಹಳ ರಿಸ್ಕ್ ತೆಗೆದುಕೊಂಡು ಉದ್ಯಮ ಕಟ್ಟಿ ಬೆಳೆಸಿದ್ದಾರೆ. ಅವರಲ್ಲಿರುವ ಶ್ರದ್ಧೆ, ಶಿಸ್ತು, ಪ್ರಾಮಾಣಿಕ, ಗುರಿಯಿಂದಾಗಿ ಇವತ್ತು ಯಶಸ್ವಿ ಉದ್ಯಮಿಯಾಗಿ ಬೆಳೆದುನಿಂತಿದ್ದಾರೆ. ದಿ. ಶಿವಕಾಂತ ಸಿದ್ನಾಳ ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದರು. ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್ ಕಷ್ಟಪಟ್ಟು ಬೆಳೆಸಿದ್ದರು. ಕಿಂಗ್ ಐಸ್‌ಕ್ರೀಮ್ ಕೂಡ ದೊಡ್ಡಮಟ್ಟದ ಯಶಸ್ಸು ಸಾಧಿಸಲಿ ಎಂದು ಹಾರೈಸಿದರು.
ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಮಾತನಾಡಿ, ಗುಣಮಟ್ಟದ ಉತ್ಪನ್ನ ಕೊಟ್ಟರೆ ಯಶಸ್ಸು ಸಾಧ್ಯ ಎಂಬುದನ್ನು ಶಿವಕಾಂತ ಸಿದ್ನಾಳ ಸಾಬೀತುಪಡಿಸಿದ್ದರು. ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್ ಮೂಲಕ ಹಾಲಿನ ಉಪ ಉತ್ಪನ್ನಗಳು, ಐಸ್‌ಕ್ರೀಮ್ ಆರಂಭಿಸಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸಿದರು. ಹೊಸದಾಗಿ ಕಿಂಗ್ ಐಸ್‌ಕ್ರೀಮ್ ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದೆ. ಅದರಲ್ಲಿ 70 ನಮೂನೆಯ ಐಸ್‌ಕ್ರೀಮ್‌ಗಳು ಮಾರುಕಟ್ಟೆ ಬರಲಿದೆ. ಕಿಂಗ್ ಐಸ್‌ಕ್ರೀಮ್ ಅಂತಾರಾಷ್ಟೀಯ ಮಟ್ಟಕ್ಕೆ ಬೆಳೆಯುವಂತೆ ಮಾಡಲು ಮೊಮ್ಮಕ್ಕಳಿಗೆ ಸಲಹೆ ನೀಡಿದ್ದೇವೆ. ವಿಜಯಕಾಂತ ಸಿದ್ನಾಳ ಮತ್ತು ಶಿವಾ ಸಂಕೇಶ್ವರ ಅವರಿಗೆ ಕಿಂಗ್ ಐಸ್‌ಕ್ರೀಮ್ ದುಬೈನಲ್ಲಿ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ. ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್ ವತಿಯಿಂದ ಬೇರೆ ರಾಜ್ಯಗಳಲ್ಲೂ ಘಟಕ ಸ್ಥಾಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ಉಪಾಧ್ಯಕ್ಷರಾದ ನಿವೇದಿತಾ ಸಿದ್ನಾಳ ಮಾತನಾಡಿ, ನನ್ನ ಅಜ್ಜ ಡಾ.ವಿಜಯ ಸಂಕೇಶ್ವರ, ಸಹೋದರ ವಿಜಯಕಾಂತ ಸಿದ್ನಾಳ ಅವರ ಜನ್ಮದಿನದಂದು ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್‌ನ ಹೊಸ ಉತ್ಪನ್ನ ಕಿಂಗ್ ಐಸ್‌ಕ್ರೀಮ್ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದೇವೆ. ಕಿಂಗ್ ಐಸ್‌ಕ್ರೀಮ್ ಗುಣಮಟ್ಟದಲ್ಲಿ ರಾಜಿ ಇಲ್ಲವೇ ಇಲ್ಲ. ಶೇ.100 ರಷ್ಟು ಹಾಲಿನಲ್ಲಿಯೇ ಐಸ್‌ಕ್ರಿಂ ತಯಾರಿಸಲಾಗುತ್ತಿದೆ. ದೊಡ್ಡ ಮಟ್ಟದಲ್ಲಿ ಕಂಪನಿ ಬೆಳೆಸಲು ಸಂಕಲ್ಪ ಮಾಡಿದ್ದೇವೆ. ತಂದೆಯ ಕನಸು ನನಸಾಗಿಸಲು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದೇವೆ ಎಂದರು.
ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ಮಾತನಾಡಿ, ಬಡವರಿಗೆ ಬೆಳಕಾಗಿ ನಿಂತಿರುವ ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್ ಸಾಧನೆ ದೊಡ್ಡದು. ಕಂಪನಿಯು ಗ್ರಾಮೀಣ ಭಾಗದ ನೂರಾರು ಯುವಕರಿಗೆ ಉದ್ಯೋಗ ಕಲ್ಪಿಸಿದೆ. ಇದೀಗ ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವ ಕಿಂಗ್ ಐಸ್‌ಕ್ರೀಮ್ ಕೂಡ ದೊಡ್ಡ ಮಟ್ಟದ ಯಶಸ್ಸು ಸಾಧಿಸಲಿದೆ ಎಂದರು.
ವಿಜಯಕಾಂತ ಡೇರಿ ಆ್ಯಂಡ್ ಫುಡ್ ಪ್ರೊಡಕ್ಸ್ಟ್ ಲಿಮಿಟೆಡ್ ಎಂಡಿ ದೀಪಾ ಸಿದ್ನಾಳ, ಶ್ರೀಮತಿ ಲಲಿತಾ ವಿಜಯ ಸಂಕೇಶ್ವರ, ವಿಆರ್‌ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ ಸಂಕೇಶ್ವರ, ವಿಜಯಾನಂದ ಟ್ರಾವೆಲ್ಸ್ ಎಂಡಿ ಶಿವಾ ಸಂಕೇಶ್ವರ ಇತರರು ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ