18 Nov 2026, 12:47:26 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ-೧೨:ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.

ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಈ ಬಾರಿ ಹವಾಮಾನ ಇಲಾಖೆ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು, ಸಿಡಿಲು ಬಡಿತದಿಂದ ಈಗಾಗಲೇ ಮೂರು ಜನರು ಸಾವನ್ನಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಯಿಂದ ಹಾನಿಗೊಳಗಾದವರಿಗೆ ಬೇಗ ಪರಿಹಾರ ಒದಗಿಸಬೇಕು ಎಂದು ಆದೇಶಿಸಿದರು.

ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಸಿಇಒಗೆ ಸೂಚನೆ ನೀಡಿದ ಸಚಿವರು, ಉಡುಪಿ ನಗರ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿಯದ ಸಮಸ್ಯೆ ಕಳೆದಬಾರಿ ಉಂಟಾಗಿದ್ದು, ಈ ಬಾರಿ ಅಂತಹ ಅನಾಹುತ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ಹೇಳಿದರು.

ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಆದಷ್ಟು ಶೀಘ್ರ ಆದ್ಯತೆ ಮೇಲೆ ಕೈಗೊಳ್ಳಬೇಕು. ಕುಡಿಯುವ ನೀರಿನೊಂದಿಗೆ ಮಳೆ ನೀರು ಸೇರಿದಂತೆ ಕಲುಷಿತ ನೀರು ಮಿಶ್ರಣ ಗೊಳ್ಳದಂತೆ ಕ್ರಮವಹಿಸಬೇಕು.‌ ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಗಿಂದಾಗ್ಗೆ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗ್ರಾಮೀಣ ಭಾಗದ ಜನರು ಹಳ್ಳಕೊಳ್ಳ ದಾಟಲು ಕಾಲುಸಂಕಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಈ ಬಾರಿ ಆದ್ಯತೆ ಮೇರೆಗೆ ಕಾಲು ಸಂಕಗಳನ್ನು ನಿರ್ಮಿಸಬೇಕು. ಈ ಬಾರಿ‌ ಜಿಲ್ಲೆಯಲ್ಲಿ 35,509 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲು ಗುರಿ ಹೊಂದಲಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಅಗತ್ಯ ಇರುವ ಬಿತ್ತನೆ ಬೀಜಗಳನ್ನು ರಸಗೊಬ್ಬರ, ದಾಸ್ತಾನುಗಳನ್ನು ಇಟ್ಟುಕೊಂಡು, ರೈತರಿಗೆ ಸಮರ್ಪಕವಾಗಿ ವಿತರಿಸಲು ಸಚಿವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ M4 ಭತ್ತದ ಬೀಜಕ್ಕೆ ಹೆಚ್ಚಿನ ಬೇಡಿಕೆ ಕೇಳಿ ಬರುತ್ತಿದೆ. ಹೊರ ಜಿಲ್ಲೆಗಳಲ್ಲಿ ಈ ಭತ್ತದ ತಳಿಯ ಬೀಜಗಳು ಲಭ್ಯವಿದ್ದರೆ, ತರಿಸಿಕೊಡಬೇಕು. ಕಡಲಕೊರೆತ ತಡೆಗೆ ವೈಜ್ಞಾನಿಕವಾಗಿ ತಡೆಗೋಡೆ ನಿರ್ಮಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

* *ಡಿಡಿಪಿಐಗೆ ಅಭಿನಂದನೆ*
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ
ಕಳೆದ ಬಾರಿ 17ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಈ ಬಾರಿ ಮೊದಲ ಸ್ಥಾನ‌ ಅಲಂಕರಿಸಿದೆ. ಇದಕ್ಕೆ ಶಿಕ್ಷಣ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ. 143 ಶಾಲೆಗಳಲ್ಲಿ ಶೇಕಡ 100ರಷ್ಟು ಫಲಿತಾಂಶ ಬಂದಿದೆ. ಶಾಲೆಗಳ‌ ದುರಸ್ತಿ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಸೂಚಿಸಿದರು.

* *ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸುಭದ್ರ*
ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕಾ ಬಾಯಲ್, ಡಿಎಫ್ಓಗಳಾದ ಗಣಪತಿ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ