18 Nov 2026, 12:21:56 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

*ಮಂದಿರ ಜೀರ್ಣೋದ್ಧಾರಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬದಿಂದ ವೈಯಕ್ತಿಕ ನೆರವು ಹಸ್ತಾಂತರ, ಸರ್ಕಾರಿ ಅನುದಾನ ₹50 ಲಕ್ಷ ಬಿಡುಗಡೆಗೆ ಕ್ರಮ: ಚನ್ನರಾಜ ಹಟ್ಟಿಹೊಳಿ ಭರವಸೆ*

ಬೆಳಗಾವಿ-15: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಮರಗಾಯಿ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ವೇಗ ನೀಡುವ ಉದ್ದೇಶದಿಂದ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುಟುಂಬದ ವತಿಯಿಂದ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಲಾಯಿತು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮುತಗಾ ಗ್ರಾಮಕ್ಕೆ ಭೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಿಗೆ ಆರ್ಥಿಕ ನೆರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಮುತಗಾ ಗ್ರಾಮದ ಶ್ರೀ ಮರಗಾಯಿ ಮಂದಿರವು ಭಕ್ತರ ನಂಬಿಕೆ ಮತ್ತು ಧಾರ್ಮಿಕ ಭಾವನೆಗಳ ಕೇಂದ್ರವಾಗಿದೆ. ಇಂತಹ ಪುರಾತನ ಹಾಗೂ ಐತಿಹಾಸಿಕ ದೇವಸ್ಥಾನಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬವು ವೈಯಕ್ತಿಕವಾಗಿ ನೆರವು ನೀಡಿರುವುದಾಗಿ ಹೇಳಿದರು.
ಅಲ್ಲದೆ, ಮಂದಿರದ ಸಮಗ್ರ ಅಭಿವೃದ್ಧಿ ಮತ್ತು ಮೂಲಸೌಕರ್ಯ ವಿಸ್ತರಣೆಗಾಗಿ ಕರ್ನಾಟಕ ಸರ್ಕಾರದಿಂದ ₹50 ಲಕ್ಷಗಳ ವಿಶೇಷ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾತನಾಡಿದ ಅವರು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಪ್ರತಿಯೊಂದು ಹಳ್ಳಿಯನ್ನೂ ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಿ, ಗ್ರಾಮಗಳ ಚಿತ್ರಣವನ್ನು ಬದಲಾಯಿಸುವ ಜೊತೆಗೆ ಜನರ ಜೀವನಮಟ್ಟವನ್ನು ಸುಧಾರಿಸುವ ಗುರಿಯೊಂದಿಗೆ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಗ್ರಾಮಸ್ಥರು ದೇವಸ್ಥಾನದ ಅಭಿವೃದ್ಧಿಗೆ ಕೈಗೊಂಡಿರುವ ಪ್ರಯತ್ನವನ್ನು ಶ್ಲಾಘಿಸಿದ ಅವರು, ಸರ್ಕಾರ ಮತ್ತು ಜನರ ಸಹಭಾಗಿತ್ವದಿಂದ ದೇವಸ್ಥಾನವನ್ನು ಇನ್ನಷ್ಟು ಸುಂದರ ಹಾಗೂ ಭಕ್ತರಿಗೆ ಅನುಕೂಲಕರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಪಂಚ ಕಮಿಟಿಯ ಸದಸ್ಯರು, ಗ್ರಾಮಸ್ಥರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದು, ಲಕ್ಷ್ಮೀ ಹೆಬ್ಬಾಳಕರ್ ಕುಟುಂಬದ ನೆರವಿಗೆ ಕೃತಜ್ಞತೆ ಸಲ್ಲಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ