18 Nov 2026, 12:42:15 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ; ಜಿಲ್ಲಾ ಸಚಿವರಿಂದ 108 ಜನಸ್ಪಂದನ ಕಾರ್ಯಕ್ರಮ

ಬೆಂಗಳೂರು-08- ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸದರು.
ಅವರು ಗುರುವಾರ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ವಿವರಿಸಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.
ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು; ಜನರ ಸಮ್ಸಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ; ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದ ನಾಯಕರು ಈಗ ಕೊಟ್ಟು ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದಾರೆ. ಇದು ಬಡವರ ಕಾರ್ಯಕ್ರಮ. ಜೊತೆಗೆ ಅಸಮಾನತೆ ಹೋಗಲಾಡಿಸಲು ಮಾಡಿದ ಕಾರ್ಯಕ್ರಮಗಳು. ನಾವು ಸಂವಿಧಾನ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರವವರು.
ಭ್ರಾತೃವ ಬೆಳೆಯಬೇಕು, ಸಮಾನತೆ ಬೆಳೆಯಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ನುಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ