18 Nov 2026, 12:46:51 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೂಡಲಗಿ - ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನ

ಮೂಡಲಗಿ-೨೨: ಮೂಡಲಗಿ - ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು,
ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು.
ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ - ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಅಭಿಯನದಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಸುಮಾರು ೨೫೦೦ ಕ್ಕೂ ಹೆಚ್ಚು ಆಸ್ತಿಗಳು ಇ - ಖಾತಾಕ್ಕೆ ಒಳಪಟ್ಟರೆ ಅಂದಾಜು ೨ ರಿಂದ ೨.೫೦ ಕೋಟಿ ರೂಪಾಯಿಗಳ ಆದಾಯವು ಪುರಸಭೆಗೆ ಹರಿದು ಬರಲಿದೆ. ಫಲಾನುಭವಿಗಳು ತಕ್ಷಣವೇ ಪುರಸಭೆ ಅಧಿಕಾರಿಗಳನ್ನು ಸಂಪರ್ಕಿಸಿ ಇ ಖಾತಾ ಉತ್ತರಗಳನ್ನು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಧ್ಯವರ್ತಿಗಳನ್ನು ಸಂಪರ್ಕ ಮಾಡಬೇಡಿ ಎಂದು ಸಲಹೆ ನೀಡಿದ ಅವರು, ಈ ಅಭಿಯಾನವು ಮೇ ತಿಂಗಳ ಅಂತ್ಯದವರೆಗೆ ನಡೆಯಲಿದೆ ಎಂದರು.
ಸ್ಥಳೀಯ ಎಸ್ಸಿ ಕಾಲನಿಯ ಸುಮಾರು ೩೦೦
ಕುಟುಂಬಗಳಿಗೆ ಖಾತಾ
ಉತಾರಗಳನ್ನು ಮಾಡಿಕೊಟ್ಟು ಅಂಥ ಬಡ ಕುಟುಂಬಗಳಿಗೆ ಅನುಕೂಲ
ಮಾಡಿಕೊಡುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿೃವೃದ್ಧಿ ಕಾರ್ಯಗಳು ಕುಂಠಿಗೊಂಡಿವೆ. ಇದರಿಂದ ನಮ್ಗೂ ಸಹ ಅಡಚಣೆಯಾಗಿದೆ. ಕಳೆದ ಎರಡು ವರ್ಷಗಳಿಂದ ಯಾವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹೊಸ ಹೊಸ ಯೋಜನೆಗಳು ಸಾಕಾರಗೊಳ್ಳುತ್ತಿಲ್ಲ. ಮುಂದಿನ ತಿಂಗಳು ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗುವುದು.
ಹದಗೆಟ್ಟಿರುವ ರಸ್ತೆಗಳನ್ನು ಅಭಿವೃದ್ಧಿ ಮಾಡುವಂತೆಯೂ ಇದಕ್ಕಾಗಿ ಅನುದಾನವನ್ನು ನೀಡುವಂತೆಯೂ ಸಚಿವ ಸತೀಶ್ ಜಾರಕಿಹೊಳಿ ಅವರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಅವರು ಹೇಳಿದರು.
ಬಹು ನಿರೀಕ್ಷಿತ ಮೂಡಲಗಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ನಿವೇಶನವನ್ನು ಗುರುತಿಸಲಾಗಿದೆ. ಆದರೆ ಸರ್ಕಾರದಿಂದ ಅನುದಾನದ ಕೊರತೆಯಿಂದ ವಿಳಂಬವಾಗುತ್ತಿದೆ. ೮.೬೦ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಮುಂದಿನ ಏಪ್ರಿಲ್ ತಿಂಗಳಲ್ಲಿ ಈ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸುವ ಇರಾದೆ ಇದೆ. ಈ ವರ್ಷಾಂತ್ಯದಲ್ಲಿ ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದೆಂದು ಎಂದು ತಿಳಿಸಿದರು.
ಮೂಡಲಗಿ ಪಟ್ಟಣದ ವ್ಯಾಪ್ತಿಯ ಸಾರ್ವಜನಿಕರಿಗೆ ಇನ್ನು ಮುಂದೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಇದಕ್ಕಾಗಿ ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಸೇರಿ ಒಟ್ಟು ೧೪೦.೬೯ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಕ್ಷೇತ್ರದ ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ಶುದ್ಧವಾದ ಕುಡಿಯುವ ನೀರು ದೊರೆಯಲಿದೆ. ಪ್ರತಿ ಮನೆ - ಮನೆಗೆ ನೀರು ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ವಿದ್ಯುಕ್ತವಾಗಿ ಎರಡು ಕುಟುಂಬದವರಿಗೆ ಇ - ಖಾತಾ ಉತಾರಗಳನ್ನು
ನೀಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಪುರಸಭೆ ಅಧ್ಯಕ್ಷೆ ಖುರ್ಶದಾ ನದಾಫ, ಉಪಾಧ್ಯಕ್ಷೆ ಭೀಮವ್ವ ಪೂಜೇರಿ, ಪುರಸಭೆ ಸದಸ್ಯರಾದ ಸಂತೋಷ ಸೋಣವಾಲ್ಕರ, ರವಿ ಸಣ್ಣಕ್ಕಿ, ಹಣಮಂತ ಗುಡ್ಲಮಣಿ, ಜಯಾನಂದ ಪಾಟೀಲ, ಸುಭಾಸ್ ಸಣ್ಣಕ್ಕಿ, ಅಬ್ದುಲ್ ಡಾಂಗೆ, ಆನಂದ ಟಪಾಲ್, ಈರಪ್ಪ ಮುನ್ಯಾಳ, ಹುಸೇನ್ ಶೇಖ, ಅದಮ ತಾಂಬೋಳಿ, ಶಿವು ಸಣ್ಣಕ್ಕಿ, ನಾಮ ನಿರ್ದೇಶಿತ ಸದಸ್ಯರು, ಮುಖ್ಯಾಧಿಕಾರಿ ತುಕಾರಾಂ ಮಾದರ,
ಹಲವು ಗಣ್ಯರು, ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ