18 Nov 2026, 12:41:57 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಾಗನೂರು ಶ್ರೀ ಪ್ರಭುದೇವ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಂಗ್ಲ ಭಾಷೆ ಮತ್ತು ವಿಜ್ಞಾನ ವಿಷಯಗಳ ಪುನಶ್ಚೇತನ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭ

ಬೆಳಗಾವಿ-೧೪:ಬಾಲ್ಯದಲ್ಲಿ ಶಿಕ್ಷಕರಿಂದ ಕಲಿತು ಉತ್ತಮ ಅವಕಾಶ ಪಡೆದ ಅನೇಕ ಸಾಧಕರು ಇಂದು ನಾಡಿನ ಹೆಸರಾಂತ ವೈದ್ಯ, ಇಂಜಿನಿಯರ್ ಸೇರಿದಂತೆ ಜಗತ್ತಿನ ಪ್ರಖ್ಯಾತ ವಿಜ್ಞಾನಿಯಾಗಿದ್ದಾರೆ. ಆದರೆ ಅವರಿಗೆ ಸ್ವತಃ ಎಣ್ಣೆ, ಬತ್ತಿಯಂತೆ ಉರಿದು ಜ್ಞಾನದ ಬೆಳಕನ್ನು ನೀಡಿದ ಶಿಕ್ಷಕರು ಮಾತ್ರ ಸಾಮಾನ್ಯರಲ್ಲಿ ಅತಿ ಸಾಮಾನ್ಯರಾಗಿ ಉಳಿದಿದ್ದಾರೆ. ಶಿಕ್ಷಕರಲ್ಲಿನ ಈ ಸರಳತೆಯಿಂದಾಗಿಯೇ ನಾಡು ಇಂದು ಅವರನ್ನು ಗೌರವಿಸುತ್ತಿದೆ. ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ನಾಗನೂರು ಶ್ರೀ ಪ್ರಭುದೇವ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಗಾಗಿ ಹಮ್ಮಿಕೊಂಡಿದ್ದ ಆಂಗ್ಲ ಭಾಷೆ ಮತ್ತು ವಿಜ್ಞಾನ ವಿಷಯಗಳ ಪುನಶ್ಚೇತನ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ನೇತೃತ್ವ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಂ. ಕಾಂಬಳೆ ಮಹಾ ಎಂದರೆ ಎತ್ತರ, ಸ್ಥರ ಎಂದರೆ ಸ್ಥಳ ಯಾರು ಎತ್ತರವಾದ ಸ್ಥಾನದಲ್ಲಿ ಇರುತ್ತಾರೊ ಅವರೇ ಮಾಸ್ತರರು. ಆದ್ದರಿಂದ ಪ್ರಾಧ್ಯಾಪಕರು ತಮ್ಮ ವೃತ್ತಿ ಗೌರವವನ್ನು ಎತ್ತಿ ಹಿಡಿಯುವ ಕಾರ್ಯ ಪ್ರಾಮಾಣಿಕವಾಗಿ ಮಾಡಬೇಕು ಎಂದರು‌.
ವೇದಿಕೆಯ ಮೇಲೆ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ಹಿರೇಮಠ, ಪದವಿ ಪೂರ್ವ ಕಾಲೇಜುಗಳ ಮಹಾಮಂಡಳದ ಅಧ್ಯಕ್ಷ ಬಸವರಾಜ ಹಣ್ಣೂರ, ಉಪನ್ಯಾಸಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ಜಿ. ಮಠ, ಪ್ರಾಚಾರ್ಯ ಸಂಘದ ಕಾರ್ಯದರ್ಶಿ ವೈ. ಎಂ. ಪಾಟೀಲ, ಕಾಲೇಜಿನ ಪ್ರಾಚಾರ್ಯ ಸಿದ್ದರಾಮ ರೆಡ್ಡಿ, ವಿಜ್ಞಾನ ವಿಭಾಗದ ಪ್ರಾಚಾರ್ಯ ಸ್ವಪ್ನಾ ಜೋಷಿ, ದೈಹಿಕ ನಿರ್ದೇಶಕ ಪಿ. ಡಿ. ಶಿವನಾಯಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಾಗನೂರು ಶ್ರೀ ಪ್ರಭುದೇವ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಉದ್ಘಾಟಿಸಲಾಯಿತು ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಗಂಗಾಧರ ಬೆಟಗೇರಿ ಅವರನ್ನು ಸನ್ಮಾನಿಸಲಾಯಿತು. ಪ್ರಾರಂಭದಲ್ಲಿ ಪ್ರಾಧ್ಯಾಪಕ ಏ.ಕೆ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶೇಖರ ಪಾಟೀಲ ನಿರೂಪಿಸಿದರು. ಗೀತಾ ಚೌಗಲೆ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ