18 Nov 2026, 12:38:06 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಮ್ಮ ಭೂಮಿ, ನಮ್ಮ ಹಕ್ಕು ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ:

ಬೆಳಗಾವಿ-೨೨: ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ (ಇಂದು)  ಬಿಜೆಪಿ ನೇತೃತ್ವದಲ್ಲಿ ವಕ್ಫ್ ಬೋರ್ಡ್ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ನಾಯಕರು, ಕಾರ್ಯಕರ್ತರು, ಹಾಗೂ ಜನಸಾಮಾನ್ಯರು ಭಾಗವಹಿಸಿದ್ದ ಈ ಪ್ರತಿಭಟನೆಯಲ್ಲಿ ‘ನಮ್ಮ ಭೂಮಿ, ನಮ್ಮ ಹಕ್ಕು’ ಎಂಬ ಘೋಷಣೆಗಳು ಮೊಳಗಿದವು. ಅನಿಲ್ ಬೆನಕೆ, ಸಂಜಯ್ ಪಾಟೀಲ್,ಮಂಗಳಾ ಅಂಗಡಿ, ಗೀತಾ ಸುತಾರ,ಮಹಾಂತೇಶ ದೊಡ್ಡಗೌಡ್ರ,ಸೋನಾಲಿ ಸರ್ನೋಬಾತ,ಸುಭಾಷ ಪಾಟೀಲ, ಮಲ್ಲಿಕಾರ್ಜುನ ಮಾದಮ್ಮನವರ   ಸೇರಿದಂತೆ ಹಲವು ಪ್ರಮುಖ ನಾಯಕರು ಈ ಬೃಹತ ಪ್ರತಿಭಟನೆ  ನಡೆಸಿದರು.

ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ಕಿಡಿಕಾರಿಕೆ

ಬಿಜೆಪಿ ವಕ್ಫ್ ಬೋರ್ಡ್ ಮೇಲೆ ತೀವ್ರ ವಾಗ್ದಾಳಿ ನಡೆಸಿ, ಬೋರ್ಡ್ ರೈತರ ಮತ್ತು ಸ್ಥಳೀಯ ಜನರ ಭೂಮಿಯನ್ನು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡು, ಕರ್ನಾಟಕದ ರೈತರು ಮತ್ತು ಸಾಮಾನ್ಯ ಜನರ ಜೀವನದ ಮೇಲೆ ಹಾನಿ ಮಾಡುತ್ತಿದೆ ಎಂದು ಆರೋಪಿಸಿದರು.ವಕ್ಫ್ ಬೋರ್ಡ್ ನಮ್ಮ ಭೂಮಿಯನ್ನು ತಮ್ಮದಾಗಿಸಿಕೊಂಡು ರೈತರಿಗೆ ನ್ಯಾಯ ಕೊಡಿಸುತ್ತಿಲ್ಲ. ಇದು ರಾಜ್ಯದ ಭೂಮಿಯ ಹಕ್ಕುಗಳನ್ನು ಹರಣ ಮಾಡುತ್ತಿದ್ದು, ನಾವು ಇದನ್ನು ತಡೆಯುತ್ತೇವೆ,”ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರವನ್ನು ಕೂಡ ಟೀಕಿಸಿ, ಕಾಂಗ್ರೆಸ್ ಸರ್ಕಾರ ವಕ್ಫ್ ಬೋರ್ಡ್‌ನ ಅಕ್ರಮಗಳನ್ನು ನೋಡಿ ಕೂರುವಷ್ಟೇ ಅಲ್ಲ, ಈ ಪ್ರಕ್ರಿಯೆಗಳಿಗೆ ಮೌನವಾಗಿ ಸಹಾಯ ಮಾಡುತ್ತಿದೆ. ಇದು ರೈತರ ಮತ್ತು ಜನರ ಹಿತಾಸಕ್ತಿಯನ್ನು ಹಿಂತೆಗೆದು ಒಂದು ನಿರ್ಲಕ್ಷ್ಯಪ್ರದ ನಿಲುವನ್ನು ತೋರಿಸುತ್ತದೆ, ಬಿಜೆಪಿ ಆರೋಪಿಸಿದೆ.

ಶಾಂತಿಯುತ ತೀವ್ರ ಪ್ರತಿಭಟನೆ

ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಗಳನ್ನು ಮೊಳಗಿಸುತ್ತ, ಕಾರ್ಯಕರ್ತರು ಶಾಂತಿಯುತವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.ರೈತರು ಮತ್ತು ಜನರ ಹಕ್ಕುಗಳಿಗಾಗಿ ಹೋರಾಟ ನಮ್ಮ ಕರ್ತವ್ಯವಾಗಿದೆ. ನಾವು ಈ ಹೋರಾಟವನ್ನು ಕೊನೆಯವರೆಗೂ ಮುಂದುವರಿಸುತ್ತೇವೆ, ಎಂದು ಬಿಜೆಪಿ ಮುಖಂಡರು ಹೇಳಿದರು.

ಈ ಬೃಹತ ಪ್ರತಿಭಟನೆ ಯಲ್ಲಿ ಬಿಜೆಪಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ