18 Nov 2026, 12:43:20 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

*ನಿಪ್ಪಾಣಿ ಕೆ ಎಲ್ ಇ ಪದವಿ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ. ಮಕ್ಕಳಲ್ಲಿ ಕನ್ನಡ ಸಾಹಿತ್ಯದ ಅರಿವು ಮೂಡಿಸಿದ ಕನ್ನಡ ವಿಭಾಗ*

*ಕನ್ನಡ ಸಾಹಿತ್ಯದ ಸಿರಿವಂತಿಕೆಯಲ್ಲಿ ಕೇಶಿರಾಜನ ಶಬ್ದಮಣಿದರ್ಪಣ ಮತ್ತು ಛಂದಶಾಸ್ತ್ರದ ಪಾತ್ರ ಅನನ್ಯ:ಡಾ ಭೀಮಾಶಂಕರ ಜೋಶಿ*

ನಿಪ್ಪಾಣಿ-22:ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. *ಕೇಶಿರಾಜ 2ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ. ಆದರೆ ವಿವರಣಾತ್ಮಕ ಮತ್ತು ವರ್ಣನಾತ್ಮಕ ರೀತಿಯ ನಿರೂಪಣಾ ದೃಷ್ಟಿಯನ್ನೂ ಒಳಗೊಂಡಿದೆ. ಡಾ.ಡಿ.ಎಲ್.ನರಸಿಂಹಾಚಾರ್ ಅವರು ಸಂಪಾದಿಸಿರುವ ಶಬ್ದಮಣಿದರ್ಪಣವು ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಪದವಿಗೆ ಬೋಧಿಸಲ್ಪಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷಾ ಮಂಡಳಿ ಹಾಗೂ ವಾಷಿ೯ಕ ವರದಿ ರಚನಾ ಸಮಿತಿ ಸದಸ್ಯ ಹಾಗೂ ಕನ್ನಡ ಪ್ರಾಧ್ಯಾಪಕ ಡಾ ಭೀಮಾಶಂಕರ ಜೋಶಿ* ಹೇಳಿದರು

ನಿಪ್ಪಾಣಿ ನಗರದ ಕನಾ೯ಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ *(ಕೆ ಎಲ್ ಇ) ಜಿ ಆಯ್ ಬಾಗೇವಾಡಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಆಶ್ರಯದಲ್ಲಿ ಹಮ್ಮಿಕೊಂಡ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ* ಆಗಮಿಸಿ ಮಾತನಾಡಿದರು

ಕೇಶಿರಾಜನ ಶಬ್ದಮಣಿದರ್ಪಣ ದಪ೯ನ ಕನ್ನಡ ಕಾವ್ಯ ಲೋಕದಲ್ಲಿ ತನ್ನದೇ ಛಾಪು ಮೂಡಿಸಿದೆ ಅಂತೆಯೇ *ಛಂದಶಾಸ್ತ್ರವು ಕೂಡಾ ಕನ್ನಡ ಸಾಹಿತ್ಯಕ್ಕೆ ಮೆರಗು ನೀಡಿದೆ*
*ಛಂದಸ್ಸು -ಪದ್ಯವನ್ನು ರಚಿಸುವ ಶಾಸ್ತ್ರ.ಛಂದಸ್ಸಿನ ಶಾಸ್ತ್ರದ ಪ್ರಕಾರ ರಚಿತವಾದ ಪದ್ಯವನ್ನು* *ಛಂದೋಬದ್ಧ ಪದ್ಯ ಎನ್ನುವರು*.
*ಛಂದಸ್ಸು ಕನ್ನಡ ಸಾಹಿತ್ಯ, ಸಂಸ್ಕೃತ ಸಾಹಿತ್ಯದ ಆರಂಭದ ದಿನಗಳಿಂದಲೂ ಬಳಕೆಯಲ್ಲಿದ್ದು, ಕಾಲಕ್ರಮದಲ್ಲಿ ಹಲವಾರು ಪರಿಷ್ಕರಣೆಗೊಳಪಟ್ಟಿದೆ.ಇವುಗಳ ಅಧ್ಯಯನದಿಂದ ಐಚ್ಛಿಕ ಕನ್ನಡ ಮಕ್ಕಳಿಗೆ ಕನ್ನಡದ* ಜ್ಞಾನೋದಯವಾಗುತ್ತದೆ ಎಂದರು

ಅಧ್ಯಕ್ಷತೆ ವಹಿಸಿ ಮಾತನಾಡಿದ *ಕನ್ನಡ ವಿಭಾಗದ ಮುಖ್ಯಸ್ಥ ಡಾ ಬಿ ಎಂ ಜನಗೌಡ ಕನ್ನಡ ಸಾಹಿತ್ಯ ಲೋಕದಲ್ಲಿ ಕೇಶಿರಾಜನ ಶಬ್ದಮಣಿದರ್ಪಣ ಮತ್ತು ಕನ್ನಡ ಛಂದಸ್ಸು ವಿಶೇಷ ಸ್ಥಾನ ಪಡೆದಿದ್ದೂ ಮಕ್ಕಳಲ್ಲಿ ಅರಿವು ಮೂಡಿಸಲು ನಮ್ಮ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ* ಆಯೋಜಿಸಲಾಗಿದೆ ಎಂದರು *ಪ್ರಾಚಾರ್ಯ ಡಾ ಎಂ ಎಂ ಹುರಳಿ ಸರ್* ಮಾಗ೯ದಶ೯ನ ಲಭಿಸಿತು

ಈ ಸಂದರ್ಭದಲ್ಲಿ *ಐಕ್ಯೂಎಸಿ ಸಂಯೋಜಕ ಡಾ ಅತುಲಕುಮಾರ ಕಾಂಬಳೆ, ಕನ್ನಡ ಅಧ್ಯಾಪಕರಾದ ಶ್ರೀ ಮಿಥುನ ಅಂಕಲಿ, ಶ್ರೀ ಸಾಗರ ಪಾಟೀಲ* ಸಹಿತ ವಿದ್ಯಾರ್ಥಿಗಳು ಹಾಜರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ