18 Nov 2026, 12:13:01 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ

ಕುಡಚಿ-17: ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಶ್ರೀ ಕರೆಸಿದ್ದೇಶ್ವರ ದೇವಸ್ಥಾನದ ಪಟ್ಟದ ಆನೆ ಧ್ರುವ ಅನಾರೋಗ್ಯದಿಂದ ಶುಕ್ರವಾರ ನಿಧನ ಹೊಂದಿದ್ದು, ಜಿಲ್ಲೆಯಾದ್ಯಂತ ಭಕ್ತರು ಹಾಗೂ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದೆ.
ಈ ಹಿನ್ನೆಲೆಯಲ್ಲಿ ಭಾನುವಾರ ದೇವಸ್ಥಾನದ ಆವರಣದಲ್ಲಿ ಧ್ರುವನನ್ನು ಕಟ್ಟುತ್ತಿದ್ದ ಸ್ಥಳದಲ್ಲಿಯೇ ಧಾರ್ಮಿಕ ವಿಧಿವಿಧಾನಗಳೊಂದಿಗೆ ಹೋಮ-ಹವನ ನೆರವೇರಿಸಿ, ಅಗಲಿದ ಆನೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ದಿವಂಗತ ವಸಂತರಾವ ಪಾಟೀಲ ಅವರ ಕುಟುಂಬದ ಸೊಸೆ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ ಅವರ ಪತ್ನಿ ಡಾ. ವರ್ಷಾ ಪಾಟೀಲ ಮತ್ತು ದೇವಸ್ಥಾನದ ಅಧ್ಯಕ್ಷ ನಾಗಪ್ಪ ಕಂಠಿಕಾರ ಅವರು ಧ್ರುವನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ವರ್ಷಾ ಪಾಟೀಲ, ಸುಮಾರು ಮೂರು ದಶಕಗಳಿಂದ ಜನರ ಪ್ರೀತಿ, ಅಭಿಮಾನಕ್ಕೆ ಪಾತ್ರವಾಗಿದ್ದ ಧ್ರುವನನ್ನು ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಧ್ರುವನ ಆತ್ಮಕ್ಕೆ ಶಾಂತಿ ದೊರೆಯಲಿ ಎಂಬ ಉದ್ದೇಶದಿಂದ ಹೋಮ-ಹವನದಲ್ಲಿ ಭಾಗವಹಿಸಿ ಶ್ರೀ ಕರೆಸಿದ್ದೇಶ್ವರ ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಸುಮಾರು 30 ವರ್ಷಗಳ ಹಿಂದೆ ಮಾಜಿ ಸಚಿವ ದಿವಂಗತ ವಸಂತರಾವ ಪಾಟೀಲ ಅವರು ಶ್ರೀ ಕರೆಸಿದ್ದೇಶ್ವರ ದೇವಸ್ಥಾನಕ್ಕೆ ಧ್ರುವನನ್ನು ಪಟ್ಟದ ಆನೆಯಾಗಿ ಕೊಡುಗೆಯಾಗಿ ನೀಡಿದ್ದರು. ಅಂದಿನಿಂದ ಧ್ರುವನನ್ನು ಅತ್ಯಂತ ಪ್ರೀತಿ, ಮಮಕಾರದಿಂದ ಆರೈಕೆ ಮಾಡಲಾಗುತ್ತಿತ್ತು. ಅದರ ಆಹಾರ, ವಸತಿ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿತ್ತು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಿಗೆ ಮೈಸೂರು ಸೇರಿದಂತೆ ವಿವಿಧೆಡೆಯ ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಧ್ರುವ ಕೊನೆಯುಸಿರೆಳೆದಿದೆ ಎಂದು ದೇವಸ್ಥಾನದ ಅಧ್ಯಕ್ಷ ನಾಗಪ್ಪ ಕಂಠಿಕಾರ ತಿಳಿಸಿದರು.
ಜಿಲ್ಲೆಯ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಸಾವಿರಾರು ಭಕ್ತರ ಪ್ರೀತಿ, ಅಭಿಮಾನ ಗಳಿಸಿದ್ದ ಧ್ರುವನ ಅಗಲಿಕೆ ಭಕ್ತವೃಂದಕ್ಕೆ ತುಂಬಲಾರದ ನಷ್ಟವಾಗಿದೆ. ಅದರ ನಿಧನದಿಂದ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ದಿವಂಗತ ವಸಂತರಾವ ಪಾಟೀಲ ಅವರ ಕುಟುಂಬದ ವತಿಯಿಂದ ಅರ್ಚಕರಿಗೆ ಆಯರಿ ನೀಡಿ ಗೌರವಿಸಲಾಯಿತು. ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹಾಗೂ ಧ್ರುವನ ಅಭಿಮಾನಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ