21 Nov 2026, 02:11:28 AM|
Gold₹12977/gGold24K ₹12,977/g - 22K ₹11,885/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi | National News

ಬಸವಣ್ಣನವರನ್ನು ಅವಮಾನಿಸಿದ ರವಿ ಹಂಜ ಬಂಧನಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ಬಸವಣ್ಣನವರನ್ನು ಅವಮಾನಿಸಿದ ರವಿ ಹಂಜ ಬಂಧನಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ-2೦: ಭಕ್ತಿ ಭಂಡಾರಿ , ನಾಡಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಹಾಗೂ ‘ಬಸವ ಮಂಟಪ’ ಪುಸ್ತಕದಲ್ಲಿ ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಅಂಶಗಳನ್ನು ಪ್ರಕಟಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ ಬಂಧನಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಮಹಸ್ವಾಮಿಗಳು ಮತ್ತು ಅಥಣಿ ಮೋಟಗಿ ಮಠದ ಶ್ರೀ.ಪ್ರಭು ಚನ್ನಬಸವ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಪತಿ ಡಾ.ಅಲ್ಲಮಪ್ರಭು ಸ್ವಾಮೀಜಿ ಹಾಗೂ ಅಥಣಿ ಮೋಟಗಿ ಮಠದ ಪ್ರಭುಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ಲೇಖಕ ರವಿ ಹಂಜ ಹಾಗೂ  ಸಂದರ್ಶನ ಪ್ರಸಾರ ಮಾಡಿದ ವಾಹಿನಿಯ  ಸಂಪಾದಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅಲ್ಲಮಪ್ರಭು ಸ್ವಾಮೀಜಿ, ಬಸವಣ್ಣನವರ ವ್ಯಕ್ತಿತ್ವ ಹಾಗೂ ತತ್ವಾದರ್ಶಗಳಿಗೆ ಧಕ್ಕೆ ತರುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಇಂತಹ ಕೃತ್ಯಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಬಸವಣ್ಣನವರ ವಿಚಾರಧಾರೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಗೌರವಿಸುತ್ತಿದ್ದು, ಇಂತಹ ಮಹಾನ್ ದಾರ್ಶನಿಕರ ಕುರಿತು ಅವಹೇಳನಕಾರಿ ಬರಹಗಳನ್ನು ಪ್ರಕಟಿಸಿರುವುದು ಖಂಡನೀಯ. ವಿವಾದಿತ ಪುಸ್ತಕವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿರುವುದು ಸ್ವಾಗತಾರ್ಹ. ಪುಸ್ತಕದ ಮಾರಾಟ ಮತ್ತು ಪ್ರಸಾರ ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

  ಅಥಣಿ ಮೋಟೆಗಿ ಮಠದ ಶ್ರೀ. ಪ್ರಭುಚನ್ನಬಸವ ಸ್ವಾಮೀಜಿ ಮಾತನಾಡಿ, ಮಹಾನ್ ದಾರ್ಶನಿಕರನ್ನು ನಿಂದಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಗಂಭೀರ ಅಪರಾಧ ಎಸಗಲಾಗಿದೆ. ಲೇಖಕ ರವಿ ಹಂಜಿ ವಿದೇಶದ ಯಾವುದೇ ಮೂಲೆಯಲ್ಲಿದ್ದರೂ ಬಂಧಿಸಿ ರಾಜ್ಯಕ್ಕೆ ಕರೆತರಬೇಕು. ಆರೋಪಿಯನ್ನು ಬಿಡುಗಡೆ ಮಾಡಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದರ ಜತೆಗೆ ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.

ನಿನ್ನೆಯಷ್ಟೇ ರವಿ ಹಂಜ್ ಮತ್ತು ವಿಶ್ವವಾಣಿ ವಾಹಿನಿ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಬೆಳಗಾವಿಯಲ್ಲಿ ಎಫ್ಐಆರ್ ದಾಖಲಿಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಬಸವರಾಜ್ ರೊಟ್ಟಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿ ಮಾತಾಡಿ ಪ್ರಕರಣದಲ್ಲಿ ಕೇವಲ ಎಫ್‌ಐಆರ್ ದಾಖಲಿಸುವುದರಿಂದ ಪ್ರಯೋಜನವಿಲ್ಲ. ಇದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರ ಇರುವ ಅನುಮಾನವಿದ್ದು, ಲೇಖಕ ಹಾಗೂ ಖಾಸಗಿ ಪತ್ರಿಕೆಯ ಸಂಪಾದಕರ ಪಾತ್ರ ಸೇರಿದಂತೆ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಸವಣ್ಣನವರ ಗೌರವ ಮತ್ತು ತತ್ವಾದರ್ಶಗಳಿಗೆ ಧಕ್ಕೆ ತರುವ ಕೃತ್ಯಗಳನ್ನು ಸಹಿಸುವುದಿಲ್ಲ. ಸರ್ಕಾರ ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ರಾಜ್ಯಾದ್ಯಂತ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಮಹಾಸಬೆಯ ಪ್ರಧಾನ ಕಾರ್ಯದರ್ಶಿ ಅಶೋಕ್ ಮಳಗಲಿ ಉಪಾಧ್ಯಕ್ಷ ಮುರುಗೇಶ್ ಶಿವಪೂಜಿ  ರಾಷ್ಟ್ರೀಯ ಬಸವದಳದ ಅಶೋಕ್ ಬೆಂಡಿಗೇರಿ ಲಿಂಗಾಯತ್ ಸಂಘಟನೆ ಈರಣ್ಣ ದೇಯಣ್ಣವರ, ರಾಷ್ಟ್ರೀಯ ಬಸವದಳದ ಶಂಕರ್  ಗುಡುಸ, ರತ್ನಾ ಬೆನಸಿನಮರಡಿ, ಮುರಿಗೆಪ್ಪ ಬಾಳಿ, ಶಿವಾನಂದ ಮೆಟ್ಯಾಳ, ಸುರೇಶ್ ನರಗುಂದ ಎಸೆತ. ಜಿ. ಸಿದ್ನಾಳ ಸೇರಿದಂತೆ ಬಸವಪರ ಸಂಘಟನೆಗಳ ನೂರಾರು ಧುರೀಣರು ಹಾಜರಿದ್ದರು.

Author
Vishwanath Desai
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ, ಜಲ, ಭಾಷೆ ರಕ್ಷಣೆ ಹಾಗೂ ಶೋಷಿತರ ಏಳಿಗೆಗೆ ನಿರಂತರ ಹೋರಾಟ ಅಗತ್ಯ: ಮಹೇಶ ಕುಮಾರ್ಟರ್ಬೈನ್ ಬ್ಲಾಸ್ಟ್ ಬಗ್ಗೆ ಸಮಗ್ರ ತನಿಖೆಗೆ ರೈತ ಮುಖಂಡರ ಆಗ್ರಹಬಸವಣ್ಣನವರನ್ನು ಅವಮಾನಿಸಿದ ರವಿ ಹಂಜ ಬಂಧನಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆಬಸವಣ್ಣನವರನ್ನು ಅವಮಾನಿಸಿದ ರವಿ ಹಂಜ ಬಂಧನಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆಬಸವಣ್ಣನವರನ್ನು ಅವಮಾನಿಸಿದ ರವಿ ಹಂಜ ಬಂಧನಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆಬಸವಣ್ಣನವರನ್ನು ಅವಮಾನಿಸಿದ ರವಿ ಹಂಜ ಬಂಧನಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ವಿಶೇಷ ಸಭೆಯಲ್ಲಿ ಭಾಗವಹಿಸಿದ ಡಾ. ಸೋನಾಲಿ ಸರ್ನೋಬತ್ಟರ್ಬೈನ್ ಸ್ಫೋಟದಿಂದ ಸಕ್ಕರೆ ಕಾರ್ಖಾನೆಗೆ ಕೋಟ್ಯಂತರ ನಷ್ಟ: ನ್ಯಾಯಾಂಗ ತನಿಖೆಗೆ ಭಾರತೀಯ ಕೃಷಿಕ ಸಮಾಜ ಆಗ್ರಹಉಚ್ಚ ನ್ಯಾಯಾಲಯದ ಆದೇಶ ಪಾಲನೆಗೆ ಇಲಾಖೆಗಳಿಗೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೂಚನೆನಿಷೇಧಾಜ್ಞೆ ಜಾರಿ